ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ – ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸಿದ್ದು ಸೂಚನೆ

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ – ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸಿದ್ದು ಸೂಚನೆ

ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ ಪ್ರಕರಣಕ್ಕೆ  ಸಂಬಂಧಿಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರಾಮಚಂದ್ರರಾವ್ ತನ್ನ ಕಚೇರಿಯಲ್ಲೇ ಮಹಿಳೆಯರ ಜತೆ ಸರಸವಾಡಿರುವ ವಿಡಿಯೊ ವೈರಲ್‌ ಆದ ಬೆನ್ನಲ್ಲೇ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ವಿಡಿಯೊ ವೈರಲ್ ಆದ ಬೆನ್ನಲ್ಲೇ ಐಜಿಪಿ ರಾಮಚಂದ್ರ ರಾವ್ ಅವರು ಮಾಧ್ಯಮಗಳ ಮುಂದೆ ಪ್ರತ್ಯಕ್ಷವಾಗಿ, ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಇದು ನನ್ನ ತೇಜೋವಧೆ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರ ಎಂದು ಅವರು ಆರೋಪಿಸಿದ್ದಾರೆ. ನಾನು ಕೂಡ ಇಂದು ಆ ವಿಡಿಯೋವನ್ನು ನೋಡಿದ್ದೇನೆ. ಅದು ಎಐ ಬಳಸಿ ಸೃಷ್ಟಿಸಿದ ಅಥವಾ ಎಡಿಟ್ ಮಾಡಿದ ವಿಡಿಯೊ ಆಗಿದೆ. ನನ್ನ ವೃತ್ತಿಜೀವನಕ್ಕೆ ಕಪ್ಪುಚುಕ್ಕೆ ತರಲು ಷಡ್ಯಂತ್ರ ನಡೆದಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ:  ಬಿಗ್‌ಬಾಸ್‌ ಕಪ್‌ ಗೆದ್ದ ಗಿಲ್ಲಿಗೆ ಹುಟ್ಟೂರಲ್ಲಿ ಭವ್ಯ ಸ್ವಾಗತ! – ಮಳವಳ್ಳಿಯಲ್ಲಿ ಭರ್ಜರಿ ರೋಡ್​ ಶೋ!

ಡಿಜಿಪಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಸರಸವಾಡಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ರಾಮಚಂದ್ರ ರಾವ್ ಅವರು ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ನಟಿ ರನ್ಯಾ ರಾವ್‌ ಅವರ ಮಲ ತಂದೆಯಾಗಿದ್ದಾರೆ. ವೈರಲ್ ಆಗಿರುವ ವಿಡಿಯೊಗಳಲ್ಲಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲಿ, ಸಮವಸ್ತ್ರದಲ್ಲಿರುವಾಗಲೇ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಕಂಡುಬಂದಿತ್ತು. ಮಾಡೆಲ್ ಸೇರಿ ಹಲವು ಮಹಿಳೆಯರ ಜತೆ ಸರಸವಾಡಿರುವ ವಿಡಿಯೊ ವೈರಲ್‌ ಆಗಿತ್ತು. ಕಚೇರಿಗೆ ಕೆಲಸದ ನಿಮಿತ್ತ ಬರುವ ಮಹಿಳೆಯರ ಜತೆಗೆ ಈ ಅಧಿಕಾರಿ ಸರಸವಾಡುತ್ತಿದ್ದರು ಎನ್ನಲಾಗುತ್ತಿದ್ದು, ಅವರ ಕಾಮಕಾಂಡದ ವಿಡಿಯೊಗಳು ಹೊರಬಂದಿದ್ದವು.

ಈ ವರದಿಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ, ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದವು. ಅಧಿಕಾರಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದವು. ಹೀಗಾಗಿ ಪ್ರಕರಣದ ಬಗ್ಗೆ ವರದಿ ನೀಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.

 

Kishor KV