ಅಧಿಕಾರ, ತಾಳ್ಮೆ ಎರಡೂ ಶಾಶ್ವತವಲ್ಲ – ಹಣೆಯಲ್ಲಿ ಬರೆದಿದ್ದರೆ ಅಣ್ಣ ಡಿಕೆಶಿನೇ ಸಿಎಂ: ಡಿಕೆ ಸುರೇಶ್

ಅಧಿಕಾರ, ತಾಳ್ಮೆ ಎರಡೂ ಶಾಶ್ವತವಲ್ಲ – ಹಣೆಯಲ್ಲಿ ಬರೆದಿದ್ದರೆ ಅಣ್ಣ ಡಿಕೆಶಿನೇ ಸಿಎಂ:  ಡಿಕೆ ಸುರೇಶ್

ರಾಜಕಾರಣದಲ್ಲಿ ಇದ್ದ ಮೇಲೆ, ಯಾವುದೂ ಶಾಶ್ವತವಲ್ಲ. ಅಧಿಕಾರ, ತಾಳ್ಮೆ ಎರಡೂ ಶಾಶ್ವತವಲ್ಲ. ಅಧಿಕಾರ ಯಾರಿಗೂ ಸುಲಭವಾಗಿ ಬರುವುದಿಲ್ಲ. ನಮ್ಮ ಅಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು ಸಿಎಂ ಆಗುತ್ತಾರೆ. ಈ ಮೊದಲು ಹೇಳಿದ್ದೆ, ಈಗಲೂ ಅದನ್ನೇ ಹೇಳುತ್ತೇನೆ. ಮುಖ್ಯಮಂತ್ರಿ ಹುದ್ದೆ ಸುಲಭವಾಗಿ ಸಿಗುವಂಥದ್ದಲ್ಲ ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್  ಹೇಳಿದ್ದಾರೆ.

ತಾಳ್ಮೆಗೆ ಅಂತಿಮ ಗಡುವು ಇದೆಯೇ ಎಂದು ಕೇಳಿದಾಗ, ನಮ್ಮ ಗುರಿ 2028 ರ ಚುನಾವಣೆ. ಈ ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸಬೇಕು. ಈ ದೃಷ್ಟಿಯಿಂದ ಶಾಸಕರು, ಕಾರ್ಯಕರ್ತರ ಹಿತದೃಷ್ಟಿಯಿಂದ ತಾಳ್ಮೆಯಿಂದಲೇ ಇರಬೇಕಾಗುತ್ತದೆ, ತಾಳ್ಮೆಯಿಂದಲೇ ನೋಡಬೇಕು. ಅವರು ಪಕ್ಷದ ಅಧ್ಯಕ್ಷರಾಗಿದ್ದು, ಮೊದಲು ಅವರಲ್ಲಿ ಶಿಸ್ತು ಕಾಣಬೇಕು? ಹಾಗಾಗಿ ಅವರು ಶಿಸ್ತು ಪಾಲಿಸುತ್ತಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಪವಿತ್ರಾ ಗೌಡಗೆ ಇನ್ಮುಂದೆ ಜೈಲೂಟವೇ ಫಿಕ್ಸ್!‌ – ಮನೆ ಊಟಕ್ಕೆ ಕೋರ್ಟ್‌ ಬ್ರೇಕ್!

ಎಷ್ಟು ದಿನ ತಾಳ್ಮೆಯಿಂದ ಇರಬೇಕು ಎಂಬ ಪ್ರಶ್ನೆ ಶಿವಕುಮಾರ್ ಅವರ ಬೆಂಬಲಿಗ ಶಾಸಕರಲ್ಲಿದೆ ಎಂದು ಕೇಳಿದಾಗ, ಅನಿವಾರ್ಯವಾಗಿ ವಿಶೇಷ ಅಧಿವೇಶನ ಕರೆಯಲಾಗಿದೆ. ರಾಷ್ಟ್ರದಲ್ಲಿ ಉದ್ಯೋಗ ಖಾತರಿ ಯೋಜನೆಯ ಹಕ್ಕು ಕಸಿಯುವ ಕೆಲಸವನ್ನು ಕೇಂದ್ರ ಬಿಜೆಪಿ ಸರ್ಕಾರ ಮಾಡಿದೆ. ಕಳೆದ ಆರು ತಿಂಗಳಿಂದ ಈ ಯೋಜನೆ ಪ್ರಗತಿ ಸಾಧಿಸುತ್ತಿಲ್ಲ. ಬೇಸಿಗೆ ಪ್ರಾರಂಭವಾಗುತ್ತಿದ್ದು, ಈಗ ಹೆಚ್ಚು ಉದ್ಯೋಗ ಬೇಕು. ಈ ಸಂದರ್ಭದಲ್ಲಿ ಕೇಂದ್ರದ ನಿರ್ಧಾರ ರೈತರು, ಕೂಲಿ ಕಾರ್ಮಿಕರಿಗೆ ಅನ್ಯಾಯವಾಗಿದೆ. ಇದು ನಮ್ಮ ಮೊದಲ ಆದ್ಯತೆ. ಹೀಗಾಗಿ ಅಧಿವೇಶನ ಕರೆಯಲು ತೀರ್ಮಾನಿಸಲಾಗಿದೆ. ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯ ಕೈಗೊಳ್ಳಬೇಕು. ವಿರೋಧ ಪಕ್ಷಗಳು ಮನರೇಗಾ ಬಗ್ಗೆ ಚರ್ಚೆಗೆ ಆಹ್ವಾನಿಸಿದ್ದರು. ಇದೆಲ್ಲಾ ಆದ ಬಳಿಕ ಏನು ತೀರ್ಮಾನ ಮಾಡುತ್ತಾರೆ ಕಾದು ನೋಡೋಣ ಎಂದರು.

ಅಧಿಕಾರ ಹಂಚಿಕೆ ವಿಚಾರವಾಗಿ ನೀವು ಎರಡು ವರ್ಷದಿಂದ ಕಾಯುತ್ತಿದ್ದೀರಿ ಎಂದಾಗ, ಭಗವಂತನ ಇಚ್ಛೆ, ಏನೇನು ತೀರ್ಮಾನವಾಗುತ್ತದೋ ಕಾದು ನೋಡೋಣ, ಎಲ್ಲದಕ್ಕೂ ಅಂತ್ಯ ಇದ್ದೇ ಇರುತ್ತದೆ ಎಂದು ತಿಳಿಸಿದರು.ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಸಂಕ್ರಾಂತಿ ಸಂಭ್ರಮ ಮುಂದಕ್ಕೆ ಹೋಗಿದೆ ಎಂದು ಕೇಳಿದಾಗ, ಪಕ್ಷ ತಾಳ್ಮೆಯಿಂದ ಇರಲು ಹೇಳಿದೆ. ರಾಹುಲ್ ಗಾಂಧಿ ಅವರು ಮೈಸೂರಿನಲ್ಲಿ ಭೇಟಿ ಮಾಡಿದಾಗ, ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಶಿವಕುಮಾರ್ ಮೊದಲಿನಿಂದಲೂ ಪಕ್ಷದ ಶಿಸ್ತಿನ ಸಿಪಾಯಿ. ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂಬ ಗುರಿಯೊಂದಿಗೆ ಪಕ್ಷದ ಆದೇಶಕ್ಕಾಗಿ ಕಾಯುತ್ತಿದ್ದಾರೆ ಎಂದರು.

Kishor KV