MI ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ ಭರ್ಜರಿ ಜಯ – ಸತತ ಸೋಲಿನಿಂದ ಕಂಗೆಟ್ಟ ಕೌರ್ ಪಡೆ

MI  ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ ಭರ್ಜರಿ ಜಯ – ಸತತ ಸೋಲಿನಿಂದ ಕಂಗೆಟ್ಟ ಕೌರ್ ಪಡೆ

ಡಬ್ಲ್ಯೂಪಿಎಲ್‌ 2026ರ 13ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಭರ್ಜರಿ ಗೆಲುವು ಸಾಧಿಸಿದೆ.  ವಡೋದರಾದ ಬಿಸಿಎ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಡೆಲ್ಲಿ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆಯೇ ಮೊದಲು ಬ್ಯಾಟ್‌ ಬೀಸಿದ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು ಕೇವಲ 154 ರನ್‌ಗಳ ಸಾಧಾರಣ ಮೊತ್ತ ಕಲೆಹಾಕಿ 155 ರನ್‌ಗಳ ಟಾರ್ಗೆಟ್‌ ನೀಡಿತು. ಈ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ 19 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 155 ರನ್‌ ಕಲೆಹಾಕಿ ಗೆಲುವು ಸಾಧಿಸಿತು. ಇದರೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್‌ ಸೀಸನ್ 4 ಅನ್ನು ಸೋಲಿನೊಂದಿಗೆ ಆರಂಭಿಸಿದ್ದ ಮುಂಬೈ ಇಂಡಿಯನ್ಸ್ ಇದೀಗ ಹ್ಯಾಟ್ರಿಕ್ ಸೋಲುಂಡಿದೆ. ಈ ಸೋಲುಗಳ ಹೊರತಾಗಿಯೂ ಹರ್ಮನ್ ಪ್ರೀತ್ ಕೌರ್ ಪಡೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲೇ ಉಳಿದುಕೊಂಡಿದೆ.

ಇದನ್ನೂ ಓದಿ: ಬೆಂಗಳೂರಿನಿಂದ ಮಂತ್ರಾಲಯ ಹೋಗುವವರಿಗೆ ಗುಡ್‌ ನ್ಯೂಸ್‌! – ಸರ್ಕಾರದಿಂದ ಟೂರ್‌ ಪ್ಯಾಕೇಜ್‌!

ಈ ಬಾರಿಯ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಮೊದಲ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಪರಾಜಯಗೊಂಡಿತ್ತು. ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಜೈಂಟ್ಸ್ ಪರ ಭರ್ಜರಿ ಜಯ ಸಾಧಿಸಿ ಒಟ್ಟು ನಾಲ್ಕು ಅಂಕಗಳನ್ನು ಪಡೆದುಕೊಂಡಿದ್ದರು. ಈ ಎರಡು ಗೆಲುವುಗಳ ಬಳಿಕ ಮುಂಬೈ ಇಂಡಿಯನ್ಸ್ ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಯುಪಿ ವಾರಿಯರ್ಸ್ ವಿರುದ್ಧ ಎರಡೂ ಪಂದ್ಯಗಳಲ್ಲೂ ಸೋತಿದ್ದ ಮುಂಬೈ ಇಂಡಿಯನ್ಸ್ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲೂ ಮುಗ್ಗರಿಸಿದೆ.ಅಂದರೆ ಮುಂಬೈ ಇಂಡಿಯನ್ಸ್ ಆಡಿದ 6 ಪಂದ್ಯಗಳಲ್ಲಿ 4ರಲ್ಲಿ ಸೋಲನುಭವಿಸಿದೆ. ಈ ಸೋಲಿನ ಹೊರತಾಗಿಯೂ ಮುಂಬೈ ಪಡೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿರುವುದು ವಿಶೇಷ. ಇದಕ್ಕೆ ಮುಖ್ಯ ಕಾರಣ ಉಳಿದ ಮೂರು ತಂಡಗಳ ನೆಟ್​ ರನ್​ ರೇಟ್ ಮೈನಸ್​ನಲ್ಲಿರುವುದು.

ಅಂದರೆ ಡೆಲ್ಲಿ ಕ್ಯಾಪಿಟಲ್ಸ್, ಯುಪಿ ವಾರಿಯರ್ಸ್, ಗುಜರಾತ್ ಜೈಂಟ್ಸ್ ತಲಾ 2 ಮ್ಯಾಚ್ ಗಳಲ್ಲಿ ಮಾತ್ರ ಜಯ ಸಾಧಿಸಿದೆ. ಈ ಎರಡು ಗೆಲುವುಗಳ ಹೊರತಾಗಿಯೂ ಈ ತಂಡಗಳ ನೆಟ್ ರನ್ ರೇಟ್ ಮೈನಸ್ ನಲ್ಲಿದೆ. ಇಲ್ಲಿ ಯುಪಿ ವಾರಿಯರ್ಸ್ -0.483 ನೆಟ್ ರನ್ ರೇಟ್ ಹೊಂದಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ -0.586 ನೆಟ್​ನಲ್ಲೇ ಉಳಿದಿದೆ. ಇನ್ನು ಗುಜರಾತ್ ಜೈಂಟ್ಸ್ ಹೊಂದಿರುವ ನೆಟ್ ರನ್ ರೇಟ್ -0.864. ಆದರೆ ಇತ್ತ ಎರಡು ಪಂದ್ಯಗಳಲ್ಲಿ ಮಾತ್ರ ಗೆದ್ದಿರುವ ಮುಂಬೈ ಇಂಡಿಯನ್ಸ್ +0.046 ನೆಟ್ ರನ್ ರೇಟ್ ಹೊಂದಿದೆ. ಇದೇ ಕಾರಣದಿಂದಾಗಿ ಹ್ಯಾಟ್ರಿಕ್ ಸೋಲುಗಳ ಹೊರತಾಗಿಯೂ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಕಾಯ್ದುಕೊಳ್ಳುವಲ್ಲಿ ಹರ್ಮನ್​ಪ್ರೀತ್ ಕೌರ್ ಪಡೆ ಯಶಸ್ವಿಯಾಗಿದೆ.

 

Kishor KV