ಮೊದಲ ಪಂದ್ಯದಲ್ಲಿ ಕಿವೀಸ್ ಕಿವಿ ಹಿಂಡಿದ ಭಾರತ – 48 ರನ್‌ಗಳಿಂದ ಗೆದ್ದು ಬೀಗಿದ ಇಂಡಿಯಾ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಜಯ ಸಾಧಿಸಿದೆ. ನಾಗ್ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ 48 ರನ್‌ಗಳಿಂದ ಗೆಲುವು ಸಾಧಿಸುವ ಮೂಲಕ ಶುಭಾರಂಭ ಮಾಡಿದೆ.
ಇದನ್ನೂ ಓದಿ:T-20 ವಿಶ್ವಕಪ್ ಆಡಲ್ವಾ ಪಾಕ್? – ಬಾಂಗ್ಲಾ ಬೆನ್ನಿಗೆ ನಿಂತು ಬ್ಲ್ಯಾಕ್ ಮೇಲ್
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯ ಭಾರತದ ಪಾಲಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್, ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಭರ್ಜರಿ 239 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 190 ರನ್ ಗಳಿಸಿ ಭಾರತದ ಮುಂದೆ ಮಂಡಿಯೂರಿತು.
ಟೀಂ ಇಂಡಿಯಾ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ 35 ಎಸೆತಗಳಲ್ಲಿ 5 ಬೌಂಡರಿ ಮತ್ತು 8 ಸಿಕ್ಸರ್‌ಗಳನ್ನು ಒಳಗೊಂಡಂತೆ 84 ರನ್ ಗಳಿಸಿದರು. ನಾಯಕ ಸೂರ್ಯಕುಮಾರ್ ಯಾದವ್ ಕೂಡ 32 ರನ್ ಬಾರಿಸಿದರೆ, ಹಾರ್ದಿಕ್ ಪಾಂಡ್ಯ 25 ರನ್ ಗಳಿಸಿದರು. ರಿಂಕು ಸಿಂಗ್ 20 ಎಸೆತಗಳಲ್ಲಿ ಅಜೇಯ 44 ರನ್ ಬಾರಿಸಿದರು. ನ್ಯೂಜಿಲೆಂಡ್ ಪರ ಜಾಕೋಬ್ ಡಫಿ ಮತ್ತು ಕೈಲ್ ಜೇಮಿಸನ್ ತಲಾ 2 ವಿಕೆಟ್‌ಗಳನ್ನು ಪಡೆದರು. 239 ರನ್‌ಗಳ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ಗೆ ಭಾರತದ ಬೌಲರ್‌ಗಳು ಆರಂಭದಲ್ಲೇ ಆಘಾತ ನೀಡಿದರು. ಗ್ಲೆನ್ ಫಿಲಿಪ್ಸ್ ಸ್ಫೋಟಕ ಇನ್ನಿಂಗ್ಸ್ ಆಡಿ 40 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಆರು ಸಿಕ್ಸರ್‌ಗಳೊಂದಿಗೆ 78 ರನ್ ಗಳಿಸಿದರು. ಮಾರ್ಕ್ ಚಾಪ್‌ಮನ್ ಕೂಡ 39 ರನ್‌ಗಳ ಹೋರಾಟದ ಬ್ಯಾಟಿಂಗ್ ಪ್ರದರ್ಶಿಸಿದರಾದರೂ ಅದು ತಂಡಕ್ಕೆ ಸಾಕಾಗಲಿಲ್ಲ. ಅಂತಿಮವಾಗಿ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ ಆರು ವಿಕೆಟ್‌ಗಳ ನಷ್ಟಕ್ಕೆ 190 ರನ್‌ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು. ವರುಣ್ ಚಕ್ರವರ್ತಿ ಮತ್ತು ಶಿವಂ ದುಬೆ ಭಾರತದ ಪರ ತಲಾ ಎರಡು ವಿಕೆಟ್‌ಗಳನ್ನು ಪಡೆದರು. ಅರ್ಷದೀಪ್ ಸಿಂಗ್ ಮತ್ತು ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದರು.

ನೋಡಿರಿ

