KSRTC ಬಸ್‌ ಪ್ರಯಾಣಿಕರಿಗೆ ಬಿಗ್‌ಶಾಕ್!‌ – ಮಂಗಳೂರು-ಕಾಸರಗೋಡು ಪ್ರಯಾಣ ಬಲು ದುಬಾರಿ!

 KSRTC ಬಸ್‌ ಪ್ರಯಾಣಿಕರಿಗೆ ಬಿಗ್‌ಶಾಕ್!‌ – ಮಂಗಳೂರು-ಕಾಸರಗೋಡು ಪ್ರಯಾಣ ಬಲು ದುಬಾರಿ!

ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣಿಕರಿಗೆ ಶಾಕಿಂಗ್‌ ಸುದ್ದಿಯಿದೆ. ಇನ್ಮುಂದೆ ಮಂಗಳೂರು To ಕಾಸರಗೋಡು ಪ್ರಯಾಣ ಬಲು ದುಬಾರಿ. ಕೆಎಸ್‌ಆರ್‌ಟಿಸಿ ಈ ಮಾರ್ಗದಲ್ಲಿ ಸಂಚಾರಿಸುವ ಬಸ್​​​ಗಳ ಟಿಕೆಟ್​​​​​ ದರವನ್ನು ಹೆಚ್ಚು ಮಾಡಿದೆ.

ಇದನ್ನೂ ಓದಿ: ಪಲಾಶ್ ಮುಚ್ಚಲ್‌ಗೆ ಕಾನೂನು ಸಂಕಷ್ಟ!  – ನಿರ್ಮಾಪಕರಿಗೆ 40 ಲಕ್ಷ ರೂ. ವಂಚನೆ ಮಾಡಿದ್ರಾ?

ಮಂಗಳೂರು-ಕಾಸರಗೋಡು ಮಾರ್ಗದ ಕುಂಬಳದಲ್ಲಿ ಅಧಿಕೃತವಾಗಿ ಟೋಲ್ ಸಂಗ್ರಹ ಪ್ರಾರಂಭ ಆಗುತ್ತಿದೆ. ಇದಕ್ಕೂ ಮುನ್ನವೇ ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಶಾಕ್‌ ನೀಡಿದೆ. ಬಸ್‌ ಟಿಕೆಟ್‌ ದರದಲ್ಲಿ ಟೋಲ್‌ ಮೊತ್ತವನ್ನು ಸೇರಿಸಿ ಟಿಕೆಟ್‌ ದರ ಹೆಚ್ಚಳ ಮಾಡಲಾಗಿದೆ. ಕುಂಬಳದಿಂದ ಮಂಗಳೂರಿಗೆ ಈ ಹಿಂದೆ 67 ರೂ. ಇದ್ದ ಪ್ರಯಾಣ ದರವನ್ನು ಈಗ 75 ರೂ.ಗೆ ಹೆಚ್ಚಿಸಿದೆ. ರಾಜಹಂಸ ಬಸ್​​ಗಳ ದರವನ್ನು ಕೂಡ 10 ರೂ. ವರೆಗೆ ಹೆಚ್ಚಿಸಿದೆ. 80 ರೂ.ನಿಂದ 90 ರೂ.ಗೆ ಏರಿಕೆಯಾಗಿದೆ. ಕರ್ನಾಟಕ ರಾಜ್ಯ ಸಾರಿಗೆ ಬಸ್‌ಗಳು ಟಿಕೆಟ್ ದರವನ್ನು 7 ರೂ. ಹೆಚ್ಚಿಸಿದ್ದು ಈಗಾಗಲೇ ಈ ದರ ಜಾರಿಯಲ್ಲಿದೆ.

ಇನ್ನು ಟೋಲ್ ಪಾವತಿಯಿಂದ ವಿನಾಯಿತಿ ನೀಡುವಂತೆ ಕೋರಿ ಕರ್ನಾಟಕ ಸಾರಿಗೆ ಇಲಾಖೆಯ ಮಂಗಳೂರು ವಿಭಾಗದ ಅಧಿಕಾರಿಗಳು ಕಾಸರಗೋಡು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಕಾಸರಗೋಡು-ಮಂಗಳೂರು ಮಾರ್ಗದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ಸಾರಿಗೆ ಬಸ್‌ಗಳು ಸಂಪೂರ್ಣವಾಗಿ ಸರ್ವಿಸ್ ರಸ್ತೆಗಳಲ್ಲಿ ಸಂಚರಿಸುತ್ತವೆ. ಕುಂಬಳ ಟೋಲ್ ಗೇಟ್ ಬಿಟ್ಟು ಬೇರೆ ಯಾವುದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಬಸ್ಸುಗಳು ಹೋಗುವುದಿಲ್ಲ. ಹಾಗಾಗಿ ಟೋಲ್ ವಿನಾಯಿತಿ ನೀಡಬೇಕು ಎಂದು ಹೇಳಿದ್ದಾರೆ. ಒಂದು ವೇಳೆ ಈ ಬದಲಾವಣೆಯನ್ನು ಮಾಡದಿದ್ದರೆ, ಹೆಚ್ಚಿನ ಟಿಕೆಟ್ ದರಗಳ ಮೂಲಕ ಪ್ರಯಾಣಿಕರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆಯನ್ನು ಹಾಕಬೇಕಾಗುತ್ತದೆ ಎಂದು ಹೇಳಿದ್ದಾರೆ.

Shwetha M