ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ಸಿಗ್ನಲ್!

ಬೈಕ್ ಟ್ಯಾಕ್ಸಿಗೆ ಚಾಲಕರಿಗೆ ಗುಡ್ನ್ಯೂಸ್ ಸಿಕ್ಕಿದೆ. ಬೈಕ್ ಟ್ಯಾಕ್ಸಿ ವಿಚಾರದಲ್ಲಿ ಹೈಕೋರ್ಟ್ ಮಹತ್ವದದ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಮತ್ತೆ ಬೈಕ್ ಟ್ಯಾಕ್ಸಿಗೆ ಅವಕಾಶ ನೀಡಿಲಾಗಿದೆ.
ಇದನ್ನೂ ಓದಿ: KSRTC ಬಸ್ ಪ್ರಯಾಣಿಕರಿಗೆ ಬಿಗ್ಶಾಕ್! – ಮಂಗಳೂರು-ಕಾಸರಗೋಡು ಪ್ರಯಾಣ ಬಲು ದುಬಾರಿ!
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಂದ ಸಂಚಾರ ನಿಯಮ ಉಲ್ಲಂಘನೆಯಾಗುತ್ತಿದೆ ಮತ್ತು ಆಟೋ ರಿಕ್ಷಾ ಚಾಲಕರ ಹಿತಾಸಕ್ತಿಗೆ ಧಕ್ಕೆಯಾಗುತ್ತಿದೆ ಎಂದು ರಾಜ್ಯ ಸರ್ಕಾರವು ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಖಾಸಗಿ ಕಂಪನಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದವು. ಆರಂಭದಲ್ಲಿ ಏಕಸದಸ್ಯ ಪೀಠವು ಸರ್ಕಾರದ ಪರವಾಗಿ ತೀರ್ಪು ನೀಡಿತ್ತು. ಈ ಬೆನ್ನಲ್ಲೇ ಅಂದ್ರೆ, ಕಳೆದ ವರ್ಷ ಏಪ್ರಿಲ್ನಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಬ್ರೇಕ್ ಹಾಕಲಾಗಿತ್ತು. ಜೂನ್ನಲ್ಲಿ ಟ್ಯಾಕ್ಸಿ ಅಗ್ರಿಗೇಟರ್ಗಳಿಂದ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿತ್ತು. ಇಂದು ಹೈಕೋರ್ಟ್ ಮುಖ್ಯ ನ್ಯಾ.ವಿಭು ಬಖ್ರು ಹಾಗು ನ್ಯಾ.ಸಿಎಂ ಜೋಶಿ ಅವರಿದ್ದ ವಿಭಾಗೀಯ ಪೀಠ ಆದೇಶ ರದ್ದುಗೊಳಿಸಿ ಮತ್ತೆ ಬೈಕ್ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಿದೆ. ಪ್ರಯಾಣಿಕರ ಜಾಗರೂಕತೆಯ ಬಗ್ಗೆ ನಿಯಮಾವಳಿ ರೂಪಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಇನ್ನೂ ಕೋರ್ಟ್ ಆದೇಶದ ಪ್ರತಿ ಸಿಕ್ಕಿಲ್ಲ. ಆದೇಶದ ಪ್ರತಿ ಬಂದ ನಂತರ ಅದನ್ನು ಕೂಲಂಕಷವಾಗಿ ಪರಿಶೀಲಿಸುತ್ತೇನೆ. ಈ ಬಗ್ಗೆ ಇಲಾಖೆಯ ಕಮಿಷನರ್ ಅವರೊಂದಿಗೆ ಚರ್ಚಿಸಿ, ಮುಂದಿನ ಕಾನೂನು ಹೋರಾಟ ಅಥವಾ ತೀರ್ಮಾನದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ನೋಡಿರಿ

