ಲೇಡಿ ಜೊತೆ ಹಾಸಿಗೆಯಲ್ಲಿ ಸಿಕ್ಕಿಬಿದ್ದಿದ್ದ ಪಲಾಶ್ ಮುಚ್ಚಲ್ – ಸ್ಮೃತಿ ಮದುವೆ ರದ್ದಾಗಿದ್ದಕ್ಕೆ ಕಾರಣ ರಿವೀಲ್

ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮದುವೆ ರದ್ದಾಗಿದ್ದು ಯಾಕೆ ಎಂಬ ವಿಚಾರ ಈಗ ಬಯಲಾಗಿದೆ. ಮದುವೆಗೆ ಹಿಂದಿನ ದಿನ ಪಲಾಶ್ ಬೇರೊಬ್ಬ ಮಹಿಳೆ ಜೊತೆಯಿದ್ದ ಎಂಬ ಬಗ್ಗೆಊಹಾಪೋಹ ಎದ್ದಿತ್ತು. ಆದರೆ, ಪಲಾಶ್ ಹಾಸಿಗೆಯಲ್ಲೇ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಎಂಬ ರಹಸ್ಯ ಬಯಲಾಗಿದೆ.
ಇದನ್ನೂ ಓದಿ: ಸ್ಮೃತಿ ಮಂದಾನಗೆ ಪಲಾಶ್ ಮೋಸ – ಯುವತಿ ಜತೆ ಫ್ಲರ್ಟ್.. ಮದುವೆ ಕ್ಯಾನ್ಸಲ್?
ಟೀಮ್ ಇಂಡಿಯಾ ಸ್ಟಾರ್ ಕ್ರಿಕೆಟರ್ ಸ್ಮೃತಿ ಮಂಧಾನ ಮದುವೆ ರದ್ದಾಗಿದ್ದಕ್ಕೆ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ. ಸ್ಮೃತಿ ಮಂಧಾನಾ ಮದುವೆಗೆ ಇನ್ನೊಂದು ದಿನ ಬಾಕಿ ಇರುವಾಗ ಮದುವೆ ಮುರಿದುಬಿದ್ದಿತ್ತು. ಆ ಸಮಯದಲ್ಲಿ ಸ್ಮೃತಿ ಅವರ ತಂದೆಗೆ ಅನಾರೋಗ್ಯದ ಕಾರಣ ಮದುವೆಯನ್ನು ಮುಂದೂಡಲಾಗಿದೆ ಎಂಬ ಮಾಹಿತಿಯಷ್ಟೇ ದೊರೆದಿತ್ತು. ಆದರೆ, ಇದೇ ಕಾರಣಕ್ಕೆ ಮದುವೆ ಕ್ಯಾನ್ಸಲ್ ಆಗುತ್ತಾ ಎಂಬ ವಿಚಾರ ಚರ್ಚೆಗೂ ಕಾರಣವಾಗಿತ್ತು. ಇದಗ ಸ್ಮೃತಿ ಮಂಧಾನ ಅವರ ಬಾಲ್ಯದ ಗೆಳೆಯ ವಿದ್ಯಾನ್ ಮಾನೆ, ಪಲಾಶ್ ಮುಚ್ಚಲ್ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದು, ಮದುವೆ ನಿಲ್ಲಲು ಕಾರಣವೇನು ಮತ್ತು ಮದುವೆಯ ಹಿಂದಿನ ದಿನ ಏನೆಲ್ಲ ನಡೆಯಿತು ಎಂಬುದನ್ನು ವಿವರಿಸಿದ್ದಾರೆ.
ಮದುವೆ ಸಮಾರಂಭದಲ್ಲಿ ನಾನು ಕೂಡ ಹಾಜರಿದ್ದೆ. ಅಂದು ಪಲಾಶ್ ಒಬ್ಬ ಮಹಿಳೆಯೊಂದಿಗೆ ಹಾಸಿಗೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ. ಆತ ನೋಡಬಾರದ ಸ್ಥಿತಿಯಲ್ಲಿ ಸಿಕ್ಕಿಬಿದ್ದಿದ್ದ. ಇದಾದ ಬಳಿಕ ಪರಿಸ್ಥಿತಿ ತುಂಬಾ ಉದ್ವಿಗ್ನವಾಯಿತು, ಭಾರತೀಯ ಮಹಿಳಾ ಕ್ರಿಕೆಟಿಗರು ಪಲಾಶ್ ಅವರನ್ನು ಥಳಿಸಿದರು. ಇದಾದ ಬಳಿಕ ಮದುವೆ ಮುರಿದುಬಿದ್ದಿತು ಎಂದು ವಿದ್ಯಾನ್ ಮಾನೆ ಹೇಳಿಕೊಂಡಿದ್ದಾರೆ. ಇನ್ನು ಪಲಾಶ್ ವಿರುದ್ಧ ವಂಚನೆ ಮತ್ತು ಆರ್ಥಿಕ ದುರುಪಯೋಗದ ಗಂಭೀರ ಆರೋಪಗಳನ್ನು ಹೊರಿಸಿರುವ ವಿದ್ಯಾನ್ ಮಾನೆ, ‘ಪಲಾಶ್ ಸಿನಿಮಾದ ಹೆಸರಿನಲ್ಲಿ ತನ್ನಿಂದ ಲಕ್ಷಾಂತರ ರೂಪಾಯಿಗಳನ್ನು ಪಡೆದಿದ್ದಾರೆ, ಆದರೆ ಆ ಚಿತ್ರವನ್ನು ನಿರ್ಮಿಸಲಾಗಿಲ್ಲ ಅಥವಾ ಹಣವನ್ನು ಹಿಂತಿರುಗಿಸಲಾಗಿಲ್ಲ. ನಾನು ಸ್ಮೃತಿಯ ಕುಟುಂಬದ ಮೂಲಕ ಪಲಾಶ್ ಅವರನ್ನು ಭೇಟಿಯಾದೆ. ಈ ಸಮಯದಲ್ಲಿ ಪಲಾಶ್ ನನ್ನ ಬಳಿ ಸಿನಿಮಾ ನಿರ್ದೇಶನದ ಬಗ್ಗೆ ಮಾತನಾಡಿದರು. ಅಲ್ಲದೆ ಆರು ತಿಂಗಳೊಳಗೆ ಸಿನಿಮಾವನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು. ಹೀಗಾಗಿ ನಾನು ಪಾಲಾಶ್ ಸಿನಿಮಾದ ಮೇಲೆ ಸುಮಾರು 40 ಲಕ್ಷ ರೂಪಾಯಿಗಳನ್ನು ಹೂಡಿಕೆ ಮಾಡಿದೆ. ಆದಾಗ್ಯೂ, ಮದುವೆ ರದ್ದಾದ ನಂತರ ಪಲಾಶ್ ನನ್ನ ಫೋನ್ ರಿಸೀವ್ ಮಾಡುತ್ತಿಲ್ಲ ಎಂದಿದ್ದಾರೆ.
ಸ್ಮೃತಿ ಮಂಧಾನ ಅವರ ವಿವಾಹವು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನವೆಂಬರ್ 23, 2025 ರಂದು ನಿಗದಿಯಾಗಿತ್ತು. ಸ್ಮೃತಿ ಅವರ ತಂದೆ ಶ್ರೀನಿವಾಸ್ ಮಂಧಾನ ಅವರ ಹಠಾತ್ ಅನಾರೋಗ್ಯದಿಂದಾಗಿ ಸಮಾರಂಭವನ್ನು ಮುಂದೂಡಲಾಯಿತು. ಇದೇ ವೇಳೆ ಪಲಾಶ್ ಕೂಡ ಅನಾರೋಗ್ಯಕ್ಕೆ ಒಳಗಾದರು. ಹೀಗಾಗಿ ವಿವಾಹವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಕೆಲವು ದಿನಗಳ ನಂತರ, ಮಂಧಾನ ಅವರು ವಿವಾಹವನ್ನು ರದ್ದುಗೊಳಿಸಿರುವುದಾಗಿ ಘೋಷಿಸಿದ್ದರು. ಇದೀಗ ಸ್ಮೃತಿ ಅವರ ಮದುವೆ ಕ್ಯಾನ್ಸಲ್ ಆಗಿದ್ದು ಯಾಕೆ ಎಂಬ ವಿಚಾರ ಬಯಲಾಗಿದೆ.

ನೋಡಿರಿ

