ರಣಜಿಯಲ್ಲಿ ಸರ್ಫರಾಝ್ ಖಾನ್ ವಿಶ್ವ ದಾಖಲೆ – ದ್ವಿಶತಕ ಸಿಡಿಸಿದ ಮುಂಬೈ ಸಿಡಿಲಮರಿ

ರಣಜಿಯಲ್ಲಿ ಸರ್ಫರಾಝ್ ಖಾನ್ ವಿಶ್ವ ದಾಖಲೆ – ದ್ವಿಶತಕ ಸಿಡಿಸಿದ ಮುಂಬೈ ಸಿಡಿಲಮರಿ

ಮುಂಬೈಕರ್ ಸರ್ಫರಾಝ್ ಖಾನ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಒಂದೇ ಸೀಸನ್​ನಲ್ಲಿ ಮೂರು ಸೆಂಚುರಿ ಸಿಡಿಸುವ ಮೂಲಕ ಯಾವ ಬ್ಯಾಟರ್ ಕೂಡಾ ಮಾಡದ ದಾಖಲೆ ಬರೆದಿದ್ದಾರೆ. ಈ ವಿಶೇಷ ಸಾಧನೆಗೈದ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆ ಈಗ ಸರ್ಫರಾಝ್ ಖಾನ್ ಹೆಸರಿಗೆ ಸೇರ್ಪಡೆಯಾಗಿದೆ.

ಇದನ್ನೂ ಓದಿ:ಟೀಂ ಇಂಡಿಯಾದ ದಂಡಂ ದಶಗುಣಂ – 300+ ರನ್ಸ್ ಕೊಟ್ರೂ ಗೆಲ್ಲೋಕಾಗಲ್ಲ!

ಹೈದರಾಬಾದ್ ವಿರುದ್ಧದ ರಣಜಿ ಪಂದ್ಯದಲ್ಲಿ ಮುಂಬೈ ತಂಡ ಕಣಕ್ಕಿಳಿದಿದೆ. ಮುಂಬೈ ಪರ ಸರ್ಫರಾಜ್ ಖಾನ್ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಮುಂಬೈ ತಂಡದಿಂದ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸರ್ಫರಾಝ್ ಖಾನ್ 219 ಎಸೆತಗಳಲ್ಲಿ 9 ಭರ್ಜರಿ ಸಿಕ್ಸ್ ಹಾಗೂ 19 ಫೋರ್​ಗಳೊಂದಿಗೆ 227 ರನ್​ ಬಾರಿಸಿ ಅಬ್ಬರಿಸಿದ್ದಾರೆ. ಇದಕ್ಕೂ ಮುನ್ನ ನಡೆದ ವಿಜಯ್ ಹಝಾರೆ ಏಕದಿನ ಟೂರ್ನಿಯಲ್ಲಿ ಗೋವಾ ವಿರುದ್ಧದ ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಸರ್ಫರಾಝ್ ಖಾನ್ ಕೇವಲ 75 ಎಸೆತಗಳಲ್ಲಿ 14 ಸಿಕ್ಸರ್ ಹಾಗೂ 9 ಫೋರ್​ಗಳೊಂದಿಗೆ 157 ರನ್ ಬಾರಿಸಿದ್ದರು. ಈ ಮೇಲಿನ ಎರಡು ಶತಕಗಳಿಗೂ ಮುನ್ನ ಸರ್ಫರಾಝ್ ಖಾನ್ ಸೈಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಅಸ್ಸಾಂ ವಿರುದ್ಧ ಕೇವಲ 47 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಈ ಮೂರು ಶತಕಗಳೊಂದಿಗೆ ಇದೀಗ ಸರ್ಫರಾಝ್ ಖಾನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಂದರೆ ಒಂದೇ ಸೀಸನ್​ನಲ್ಲಿ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ದ್ವಿಶತಕ, ಲಿಸ್ಟ್ ಎ (ಏಕದಿನ) ಕ್ರಿಕೆಟ್​ನಲ್ಲಿ 150 ಹಾಗೂ ಟಿ20 ಕ್ರಿಕೆಟ್​ನಲ್ಲಿ 100 ರನ್ ಬಾರಿಸಿದ ಭಾರತದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ 3ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಇಂಗ್ಲೆಂಡ್​ ಡೇನಿಯಲ್ ಬೆಲ್-ಡ್ರಮಂಡ್ ಹಾಗೂ ಅಲೆಕ್ಸ್ ಹೇಲ್ಸ್ ಮಾತ್ರ ಈ ಸಾಧನೆ ಮಾಡಿದ್ದರು.

Sulekha