ಕ್ಯೂರ್ಯಾಸಿಟಿ ಹೆಚ್ಚಿಸಿದ 400 ಕೋಟಿ ಹಣವಿದ್ದ ಕಂಟೇನರ್ ದರೋಡೆ!- ಹಣ ಯಾರದ್ದು? ಆಗಿದ್ದೇನು?

ಬೆಳಗಾವಿಯ ಚೋರ್ಲಾ ಘಾಟ್ ಬಳಿ ಸುಮಾರು 400 ಕೋಟಿ ರೂಪಾಯಿ ಮೌಲ್ಯದ ಎರಡು ಕಂಟೇನರ್ಗಳ ದರೋಡೆ ಪ್ರಕರಣ ದೇಶದಲ್ಲಿ ಹಲ್ಚಲ್ ಎಬ್ಬಿಸಿದೆ. ಅಕ್ಟೋಬರ್ನಲ್ಲಿ ನಡೆದ ಈ ಘಟನೆ ಈಗ ತಡವಾಗಿ ಬೆಳಕಿಗೆ ಬಂದಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹಣ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣಾ ಖರ್ಚಿಗೆ ಸಾಗಿಸಲಾಗುತ್ತಿತ್ತು ಎಂಬ ಅನುಮಾನಗಳು ವ್ಯಕ್ತವಾಗಿವೆ. ಮಹಾರಾಷ್ಟ್ರ ಸರ್ಕಾರ ಈ ರಾಬರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ವಿಶೇಷ ತನಿಖಾ ದಳ ರಚಿಸಿದ್ದಾರೆ.
ಇದನ್ನೂ ಓದಿ: ಮನೆಕೆಲಸದಾಕೆ ಮೇಲೆ ಲೈಂ*ಗಿಕ ದೌರ್ಜನ್ಯ – ಪಾಕ್ ಸ್ಟಾರ್ ಆಟಗಾರನ ಮಗ ಅರೆಸ್ಟ್!
ಮತ್ತೊಂದೆಡೆ ಈ ಬಗ್ಗೆ ಗಂಭೀರ ಆರೋಪ ಮಾಡಿರುವ ಕರ್ನಾಟಕ ಬಿಜೆಪಿ ಎಂಎಲ್ಸಿ ರವಿಕುಮಾರ್, ಗೋವಾದಿಂದ ತಿರುಪತಿಗೆ ಹಣ ಸಾಗಿಸಿ ಹಳೆ ನೋಟುಗಳನ್ನು ಹೊಸ ನೋಟುಗಳಾಗಿ ಬದಲಾಯಿಸುವ ಯೋಜನೆ ಇತ್ತು ಎಂದಿದ್ದಾರೆ. ಅಲ್ಲದೆ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ, ಪಾಂಡಿಚೇರಿ ಸೇರಿದಂತೆ ಐದು ರಾಜ್ಯಗಳ ಚುನಾವಣೆಗೆ ಹಣ ಸರಬರಾಜು ಆಗುತ್ತಿತ್ತಾ ಎಂ ಬಗ್ಗೆಯೂ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಕಂಟೇನರ್ಗಳ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಎಸ್ಐಟಿ ತಂಡ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ. ಮಚೀಂದ್ರಾ ಮಾದವಿ ಎಂಬಾತನನ್ನು ಬಂಧಿಸಿ, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದರಿಂದಾಗಿ ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಒಟ್ಟು ಆರು ಜನ ಆರೋಪಿಗಳನ್ನು ಬಂಧಿಸಿದಂತಾಗಿದೆ.ಈ ಮಧ್ಯೆ, ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ತನಿಖೆಗೆ ಅಗತ್ಯವಿರುವ ಸಂಪೂರ್ಣ ಮಾಹಿತಿ ನಮಗೆ ಇನ್ನೂ ಲಭ್ಯವಾಗಿಲ್ಲ ಎಂದು ತಿಳಿಸಿದರು. ಜ.6ರಂದು ನಮಗೆ ನಾಸಿಕ್ ಪೊಲೀಸರಿಂದ ಪತ್ರ ಬಂದಿದೆ. ಬೆಳಗಾವಿಯ ಸಬ್ ಇನ್ಸ್ಪೆಕ್ಟರ್ ನೇತೃತ್ವದ ತಂಡ ಮಹಾರಾಷ್ಟ್ರದ ನಾಸಿಕ್ಗೆ ತೆರಳಿದ್ದು, ತನಿಖೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.

ನೋಡಿರಿ

