ಉಡುಪಿಯ ಕೋಡಿಬೆಂಗ್ರೆ ಬೀಚ್ನಲ್ಲಿ ದೋಣಿ ದುರಂತ – ಇಬ್ಬರು ಕಾಲ್ ಸೆಂಟರ್ ಉದ್ಯೋಗಿಗಳು ಬಲಿ!

ವಿಹಾರಕ್ಕೆಂದು ಪ್ರವಾಸಿಗರನ್ನು ಕರೆದೊಯ್ಯತ್ತಿದ್ದ ದೋಣಿ ಸಮುದ್ರದಲ್ಲಿ ಮಗುಚಿ ಇಬ್ಬರು ಮೃತಪಟ್ಟು, ಹಲವರು ಅಸ್ವಸ್ಥಗೊಂಡ ಘಟನೆ ಸೋಮವಾರ ಬೆಳಗ್ಗೆ ಕೋಡಿಬೆಂಗ್ರೆ ಬೀಚ್ ಸಮೀಪ ನಡೆದಿದೆ. ಶಂಕರಪ್ಪ (22), ಸಿಂಧು (23) ಮೃತರು. ದೀಶಾ (26) ಎಂಬವರ ಸ್ಥಿತಿ ಗಂಭೀರವಾಗಿದೆ. ಧರ್ಮರಾಜ (26) ಎಂಬವರು ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.ಪ್ರವಾಸಿಗರನ್ನು ವಿಹಾರಕ್ಕೆಂದು ಮಲ್ಪೆ ಡೆಲ್ಟಾ ಬೀಚ್ ಪಾಯಿಂಟ್ನಿಂದ ಕರೆದೊಯ್ಯುತ್ತಿದ್ದ ದೋಣಿ ಹಂಗಾರಕಟ್ಟೆ ಹಡಗು ನಿರ್ಮಾಣ ಪ್ರದೇಶದ ಬಳಿ ನದಿ ಮತ್ತು ಸಮುದ್ರ ಸೇರುವ ಅಳಿವೆ ಬಾಗಿಲಿನಲ್ಲಿ ಮಗುಚಿ ಬಿದ್ದಿದೆ. ಇದರಲ್ಲಿ ಸುಮಾರು 14 ಮಂದಿ ಪ್ರವಾಸಿಗರಿದ್ದು, ಇವರು ಯಾರು ಕೂಡ ಲೈಫ್ ಜಾಕೆಟ್ ಧರಿಸಿಲ್ಲ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಚಿನ್ನದ ನಿಧಿ ಸರ್ಕಾರಕ್ಕೆ ಒಪ್ಪಿಸಿದ ಕುಟುಂಬಕ್ಕೆ ಬಂಪರ್ – ಗಣರಾಜ್ಯೋತ್ಸವ ದಿನವೇ ಒಲಿಯಿತು ಅದೃಷ್ಟ!
ದೋಣಿಯಲ್ಲಿದ್ದವರು ಮೈಸೂರಿನ ಸರಸ್ವತಿಪುರಂನಲ್ಲಿರುವ ಕಾಲ್ ಸೆಂಟರ್ ವೊಂದರ ಉದ್ಯೋಗಿಗಳು ಎನ್ನಲಾಗಿದೆ. ‘ವೇವ್ರೈಡರ್ಸ್’ ಕಂಪನಿಗೆ ಸೇರಿದ ಈ ದೋಣಿಯಲ್ಲಿ ಒಟ್ಟು 14 ಮಂದಿ ಪ್ರವಾಸಿಗರಿದ್ದರು. ದುರಂತ ಸಂಭವಿಸಿದ ತಕ್ಷಣ ಸ್ಥಳೀಯರು ಮತ್ತು ಇತರ ದೋಣಿಯಲ್ಲಿದ್ದವರು ಎಲ್ಲರನ್ನೂ ರಕ್ಷಿಸಿ ದಡಕ್ಕೆ ತಂದಿದ್ದಾರೆ. ಘಟನೆಯ ವೇಳೆ ನಾಲ್ವರು ಗಂಭೀರ ಸ್ಥಿತಿಯಲ್ಲಿದವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಮಲ್ಪೆ ಮತ್ತು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ರೆಸಾರ್ಟ್ವೊಂದರಲ್ಲಿ ಉಳಿದಿದ್ದ 14 ಮಂದಿ ಪ್ರವಾಸಿಗರನ್ನು ವಿಹಾರಕ್ಕೆಂದು ದೋಣಿಯಲ್ಲಿ ಸಮುದ್ರಕ್ಕೆ ಕರೆದುಕೊಂಡು ಹೋಗಲಾಗಿತ್ತು. ಇವರ ಪೈಕಿ ಕೆಲವರು ಲೈಫ್ ಜಾಕೆಟ್ ಧರಿಸಿರಲಿಲ್ಲ. ಸಮುದ್ರ ಮಧ್ಯೆ ದೋಣಿ ಆಕಸ್ಮಿಕವಾಗಿ ಮುಳುಗಿದ್ದು, ಎಲ್ಲ ಪ್ರವಾಸಿಗರು ನೀರಿಗೆ ಬಿದ್ದಿದ್ದಾರೆ. ಇ

ನೋಡಿರಿ

