ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಸೂ*ಸೈ*ಡ್ – ಕಾರಣವೇನು?

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇರಳ ಮೂಲದ ರಾವ್ ಅವರು ಕಾನ್ಫಿಡೆಂಟ್ ಗ್ರೂಪ್ ಎಂಬ ಪ್ರಮುಖ ರಿಯಲ್ ಎಸ್ಟೇಟ್ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಂಪನಿಯ ಸಂಸ್ಥಾಪಕರಾಗಿದ್ದಾರೆ.
ಇದನ್ನೂ ಓದಿ: ಬಾಲಕನಿಗೆ ಮನಬಂದಂತೆ ಥಳಿಸಿದ ಶಿಕ್ಷಕಿ! – ಮನೆಯಲ್ಲಿ ಹೇಳಿದ್ರೆ ಕುತ್ತಿಗೆ ಹಿಸುಕುತ್ತೇನೆ ಎಂದು ಧಮ್ಕಿ!
ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಲ್ಯಾಂಡ್ ಫರ್ಡ್ ರಸ್ತೆಯಲ್ಲಿ ಘಟನ ನಡೆದಿದೆ. ಇಂದು ಕಾನ್ಫಿಡೆಂಟ್ ಗ್ರೂಪ್ ಕಚೇರಿಗಳ ಮೇಲೆ ಐಟಿ ದಾಳಿ ನಡೆದಿತ್ತು. ಈ ದಾಳಿಗೆ ಬೆದರಿ ಸೂಸೈಡ್ ಮಾಡಿಕೊಂಡಿದ್ದಾರೆ ಅನ್ನೋ ಅನುಮಾನಗಳು ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ಅತೀ ದೊಡ್ಡ ಉದ್ಯಮ ಸಾಮ್ರಾಜ್ಯ ಕಟ್ಟಿದ ಸೆಜೆ ರಾಯ್, ದೇಶದ ಹಲವು ರಾಜ್ಯಗಲ್ಲಿ ರಿಯಲ್ ಎಸ್ಟೇಟ್ ಸೇರಿದಂತೆ ಹಲವು ಉದ್ಯಮ ನಡೆಸುತ್ತಿದ್ದಾರೆ. ದುಬೈ ಸೇರಿದಂತೆ ವಿದೇಶಗಳಲ್ಲೂ ಉದ್ಯಮ ನಡೆಸುತ್ತಿದ್ದಾರೆ. ಹಲವು ಸಾಮಾಜಿಕ ಕಾರ್ಯಗಳಲ್ಲೂ ಸಿಜೆ ರಾಯ್ ಗುರುತಿಸಿಕೊಂಡಿದ್ದಾರೆ.
2005ರಲ್ಲಿ ಆರಂಭವಾದ ಈ ಸಂಸ್ಥೆ, 65ಕ್ಕೂ ಹೆಚ್ಚು ಐಷಾರಾಮಿ ಯೋಜನೆಗಳನ್ನು ಪೂರ್ಣಗೊಳಿಸಿದೆ. ವಸತಿ ಅಪಾರ್ಟ್ಮೆಂಟ್, ವಿಲ್ಲಾಗಳು, ವಾಣಿಜ್ಯ ಸಂಕೀರ್ಣಗಳು, ಶಿಕ್ಷಣ, ಆತಿಥ್ಯ ಮತ್ತು ಮನರಂಜನಾ ಕ್ಷೇತ್ರಗಳಲ್ಲಿ ಕಾನ್ಫಿಡೆಂಟ್ ಗ್ರೂಪ್ ಕಾರ್ಯನಿರ್ವಹಿಸುತ್ತಿದೆ.

ನೋಡಿರಿ

