ಇಂದು ಬನ್ನೇರುಘಟ್ಟದಲ್ಲಿ ಡಾ. ಸಿ.ಜೆ. ರಾಯ್ ಅಂತ್ಯಕ್ರಿಯೆ! – ವೈಟ್ ಹೌಸ್ನಲ್ಲಿ ಅಂತಿಮ ದರ್ಶನ

ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗನ್ನಿಂದ ಶೂಟ್ ಮಾಡಿಕೊಂಡು ಸಾವಿಗೆ ಶರಣಾಗಿದ್ದಾರೆ. ಇಂದು ಡಾ.ಸಿಜೆ ರಾಯ್ ಅಂತ್ತಕ್ರಿಯೆ ನಡೆಯಲಿದೆ. ರಾಯ್ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ಯಾಂಡ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ವರನಿಗೆ ಚಾಕು ಚುಚ್ಚಿದ ಪ್ರಿಯಕರ! – ನನ್ನನ್ನೇ ಮದುವೆಯಾಗು ಎಂದು ಆಸ್ಪತ್ರೆಗೆ ಬಂದ ವಧು!
ಸಿ.ಜೆ. ರಾಯ್ ಅವರ ಅಂತ್ಯಕ್ರಿಯೆಯು ಇಂದು (ಜ.31) ಸಂಜೆ ಬನ್ನೇರುಘಟ್ಟದ ಕಾಸಾಗ್ಯಾಂಡ್ನಲ್ಲಿ ನಡೆಯಲಿದೆ. ನಾಡಿನ ಪ್ರಮುಖ ಉದ್ಯಮಿಗಳು, ಸಿನಿಮಾ ತಾರೆಯರು ಮತ್ತು ರಾಜಕಾರಣಿಗಳು ಭಾಗವಹಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ತಮ್ಮ ಆಪ್ತರ ಬಳಿ ಈ ಹಿಂದೆ ವ್ಯಕ್ತಪಡಿಸಿದ್ದ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ಯಾಂಡ್ನಲ್ಲಿ ಡಾ.ಸಿ.ಜೆ. ರಾಯ್ ಅವರ ಅಂತ್ಯಸಂಸ್ಕಾರ ನಡೆಯಲಿದೆ. ವೈಟ್ ಗೋಲ್ಡ್ ಸಂಸ್ಥೆಯ ಮಾಲೀಕ, ಸಹೋದರ ಬಾಬು ಜೋಸೆಫ್ ಒಡೆತನದ ಕೋರಮಂಗಲದ ವೈಟ್ ಹೌಸ್ನಲ್ಲಿ ರಾಯ್ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಇಡಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಇನ್ನು ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಾಗಿದೆ. ಉದ್ಯಮಿ ಸಾವಿಗೆ ನಿಖರ ಕಾರಣ ತಿಳಿದುಬರದ ಹಿನ್ನೆಲೆ ಅಶೋಕ ನಗರ ಪೊಲೀಸರು BNS 174ಸಿ ಅಡಿಯಲ್ಲಿ UDR ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ನೋಡಿರಿ

