ಮಾರಿಕಾಂಬೆ ದೇವಿ ದರ್ಶನಕ್ಕೆ ತೆರಳಿದ್ದಾಗ ಕುಸಿದು ಬಿದ್ದ ಮಾಜಿ ಸಚಿವ! – ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು!

ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬ ದೇವಿ ಜಾತ್ರೆ ಇಂದಿನಿಂದ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಮಾರಿಕಾಂಬ ದೇವಿಯನ್ನು ಕಣ್ತುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇಗುಲಕ್ಕೆ ಆಗಮಿಸುತ್ತಿದ್ದಾರೆ. ಇದೀಗ ರಾಜ್ಯ ರಾಜಕಾರಣದ ಹಿರಿಯ ಮುತ್ಸದ್ದಿ ಕಾಗೋಡು ತಿಮ್ಮಪ್ಪ ದೇಗುಲಕ್ಕೆ ಭೇಟಿ ನೀಡಿದ್ದು, ಈ ವೇಳೆ ಕುಸಿದು ಬಿದ್ದಿದ್ದಾರೆ.
ಇದನ್ನೂ ಓದಿ: ಪಾಕ್‌ನಲ್ಲಿ ಧುರಂಧರ್ #1 ಟ್ರೆಂಡ್! – ಬ್ಯಾನ್ ಮಾಡಿದ್ರೂ ಇಷ್ಟವಾಗಿದ್ದು ಹೇಗೆ?
ಮಾರಿಕಾಂಬೆ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ಕಾಗೋಡು ತಿಮ್ಮಪ್ಪ ದೇಗುಲಕ್ಕೆ ತೆರಳಿದ್ದರು. ಈ ವೇಳೆ ಕಾಗೋಡು ತಿಮ್ಮಪ್ಪ ಅವರು ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು ಉಪ ವಿಭಾಗೀಯ ಆಸ್ಪತ್ರೆಯ ವೈದ್ಯ ವಿಕ್ರಂ ಚಿಕಿತ್ಸೆ ನೀಡುತ್ತಿದ್ದಾರೆ.
ಕಾಗೋಡು ತಿಮ್ಮಪ್ಪ ಅವರು ತೀವ್ರ ಉಸಿರಾಟ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಕುಸಿದು ಬಿದ್ದಿದ್ದಾರೆ. ದೇವಸ್ಥಾನದಲ್ಲಿ ತೀವ್ರ ಜನಸಂದಣಿ ಇದ್ದಿದ್ದರಿಂದ ಉಸಿರಾಟ ಸಮಸ್ಯೆಯಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ತಿಳಿದುಬಂದಿದೆ.

ನೋಡಿರಿ

