ಚಿನ್ನದ ರೇಟ್ ಹೆಚ್ಚುತ್ತಿದ್ದಂತೆ ಹೆಚ್ಚಾದ ದರೋಡೆ – ವೃದ್ದೆ ಕೊ*ಲೆಗೈದು 73 ಗ್ರಾಂ ಚಿನ್ನ ಕಳವು!

ರಾಜ್ಯದಲ್ಲಿ ಮತ್ತೊಂದು ಕೊಲೆ ಹಾಗೂ ದರೋಡೆ ಪ್ರಕರಣ ಬೆಳಕಿಗೆ ಬಂದಿದ್ದು, ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿಯಲ್ಲಿ ದುಷ್ಕರ್ಮಿಗಳು ವೃದ್ದೆಯನ್ನು ಕೊಲೆಗೈದು 73 ಗ್ರಾಂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಮನೆಯಲ್ಲಿ ಒಂಟಿಯಾಗಿದ್ದ ಕಮಲಮ್ಮ (64) ಎಂಬ ವೃದ್ಧೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಅವರ ಬಳಿಯಿದ್ದ ಸುಮಾರು 73 ಗ್ರಾಂ ಚಿನ್ನಾಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿಯ ವೃದ್ದೆ ಕೊಲ್ಲಾರಿ ಕಮಲಮ್ಮ (64) ಅವರು ಒಂಟಿಯಾಗಿ ವಾಸವಾಗಿದ್ದರು. ರಾತ್ರಿ ವೃದ್ಧೆ ಮಲಗಿದ್ದ ಸಮಯದಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳು, ಅವರು ಕೂಗಾಡದಂತೆ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಬಳಿಕ ವೃದ್ಧೆಯ ಮೈಮೇಲಿದ್ದ ಚಿನ್ನದ ಸರ ಸೇರಿದಂತೆ ಒಟ್ಟು 73 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್! – ಟಿಕೆಟ್ ದರ ಏರಿಕೆಗೆ ಗ್ರೀನ್ ಸಿಗ್ನಲ್ ಕೊಟ್ಟ BMRCL
ಘಟನೆ ನಡೆದ ನ್ಯಾಮತಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಖಾಸಗಿ ಶಾಲಾ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಖಾಸಗಿ ಶಾಲೆಯ ಶಿಕ್ಷಕ ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಶಾಲೆಯ 6 ವಿದ್ಯಾರ್ಥಿನಿಯರನ್ನು ಕೋಣೆಗೆ ಕಿರುಕುಳ ನೀಡಿದ್ದಾನೆ ಎನ್ನುವ ಆರೋಪ ಬಂದಿದೆ. ಶಾಲಾ ಆಡಳಿತ ಸಮಿತಿಯಿಂದ ಈ ಕುರಿತು ಭರ್ಮಸಾಗರ ಠಾಣೆಗೆ ದೂರು ನೀಡಲಾಗಿದ್ದು, ಆರೋಪಿ ಶಿಕ್ಷಕ ರಂಗಣ್ಣನನ್ನು ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ.

ನೋಡಿರಿ

