ಕೆ.ಆರ್‌. ನಗರ ಮಹಿಳೆ ಕಿಡ್ನ್ಯಾಪ್ ಕೇಸ್ – ಎಚ್‌.ಡಿ.ರೇವಣ್ಣಗೆ ಹೈಕೋರ್ಟ್‌ ಶಾಕ್‌

ಕೆ.ಆರ್‌. ನಗರ ಮಹಿಳೆ ಕಿಡ್ನ್ಯಾಪ್ ಕೇಸ್ –  ಎಚ್‌.ಡಿ.ರೇವಣ್ಣಗೆ ಹೈಕೋರ್ಟ್‌ ಶಾಕ್‌

ಕೆ.ಆರ್‌. ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಎಚ್‌.ಡಿ.ರೇವಣ್ಣಗೆ ಹೈಕೋರ್ಟ್‌ ಶಾಕ್‌ ನೀಡಿದೆ. ಪ್ರಕರಣ ರದ್ದು ಕೋರಿದ್ದ ಎಚ್.ಡಿ.ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸುನಿಲ್‌ ದತ್‌ ಯಾದವ್‌ ಅವರಿದ್ದ ಹೈಕೋರ್ಟ್‌ ಪೀಠ, ಎಚ್.ಡಿ.ರೇವಣ್ಣ ವಿರುದ್ಧ ದೋಷಾರೋಪ ಹೊರಿಸದಂತೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವು ಮಾಡಿದೆ.

ಎಚ್‌.ಡಿ.ರೇವಣ್ಣ ಪರ ವಕೀಲರು ವಾದಮಂಡನೆಗೆ ಕಾಲಾವಕಾಶ ಕೋರಿದ್ದರು. ಹಿರಿಯ ವಕೀಲರು ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿದ್ದಾರೆಂಬ ಕಾರಣ ನೀಡಿ ಮನವಿ ಮಾಡಿದ್ದರು. ಎಚ್.ಡಿ.ರೇವಣ್ಣ ಪರ ವಕೀಲರ‌ ಮನವಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ ದೋಷಾರೋಪ ಹೊರಿಸದಂತೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ತೆರವು ಮಾಡಿದೆ.

ಇದನ್ನೂ ಓದಿ: ತಾಳ್ಮೆ ಕಳೆದುಕೊಂಡ ತಿಲಕ್ ವರ್ಮಾ-   ಅರ್ಶ್‌ದೀಪ್‌ ಸಿಂಗ್‌ಗೆ ಖಡಕ್ ವಾರ್ನಿಂಗ್

ಇತ್ತೀಚೆಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಶಾಸಕ ಹಾಗೂ ಮಾಜಿ ಸಚಿವ ಎಚ್‌.ಡಿ. ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿತ್ತು. ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ಪ್ರಕರಣವನ್ನು ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್‌ ರದ್ದುಪಡಿಸಿತ್ತು. ಇದರಿಂದ ರೇವಣ್ಣ ಆರೋಪ ಮುಕ್ತವಾಗಿದ್ದರು.

ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮನೆಕೆಲಸದಾಕೆ ನೀಡಿದ ದೂರಿನ ಮೇರೆಗೆ ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ 2024ರ ಏ.28ರಂದು ಎಚ್.ಡಿ. ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿತ್ತು. ಆದರೆ, ವಿಳಂಬವಾಗಿ ದೂರು ದಾಖಲಿಸಿದ ಹಿನ್ನೆಲೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಚ್‌.ಡಿ. ರೇವಣ್ಣರನ್ನು ಖುಲಾಸೆಗೊಳಿಸಿತ್ತು. ಆದರೆ, ಇದೀಗ ಅಪಹರಣ ಪ್ರಕರಣದಲ್ಲಿ ಸಂಕಷ್ಟ ಎದುರಾಗಿದೆ.

Kishor KV