ನಮ್ಮ ಮೆಟ್ರೋ ದರ ಏರಿಕೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿಯಾದ ತೇಜಸ್ವಿ ಸೂರ್ಯ! – ಮೆಟ್ರೋ ದರ ಮತ್ತೆ ಪರಿಷ್ಕರಣೆಯಾಗುತ್ತಾ?

ನಮ್ಮ ಮೆಟ್ರೋ ದರ ಮತ್ತೆ . ಶೇ.5ರಷ್ಟು ಏರಿಕೆಯಾಗಿದೆ. ಫೆಬ್ರವರಿ 9ರಿಂದ ಪರಿಷ್ಕೃತ ದರ ಜಾರಿಯಾಗಲಿದೆ. ಇದೀಗ ಮೆಟ್ರೋ ದರ ಏರಿಕೆಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಚಿವ ಎಂ.ಎಲ್ ಖಟ್ಟರ್ ಅವರನ್ನು ಭೇಟಿ ಮಾಡಿ ದರ ನಿಗದಿ ಸಮಿತಿಯನ್ನು ಪುನರ್ ರಚಿಸುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಅಶ್ಲೀಲ ಕಮೆಂಟ್ ಕೇಸ್! – ವಿಜಯಲಕ್ಷ್ಮೀ ನಡೆ ವಿರುದ್ಧ ಪೊಲೀಸರಿಗೇ ಅಸಮಾಧಾನ!
ನಮ್ಮ ಮೆಟ್ರೋ ದೇಶದಲ್ಲೇ ಅತ್ಯಂತ ದುಬಾರಿಯಾಗಿದೆ. ಫೆಬ್ರವರಿ 9ರಿಂದ ಮತ್ತೆ ಶೇ. 5ರಷ್ಟು ದರ ಏರಿಕೆಯಾಗಲಿದೆ. ಇಂದು ಸಂಸದ ತೇಜಸ್ವಿ ಸೂರ್ಯ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಚಿವ ಎಂ.ಎಲ್ ಖಟ್ಟರ್ ಅವರನ್ನು ಭೇಟಿ ಮಾಡಿ ದರ ನಿಗದಿ ಸಮಿತಿಯನ್ನು ಪುನರ್ ರಚಿಸುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಸಂಸದ ತೇಜಸ್ವಿ ಸೂರ್ಯ ಪೋಸ್ಟ್ನಲ್ಲಿ, ಮೆಟ್ರೋ ಟಿಕೆಟ್ ದರ ಮತ್ತೆ ಏರಿಕೆಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಫೆ. 9ರಿಂದ ಮೆಟ್ರೋ ಪರಿಷ್ಕೃತ ಪ್ರಯಾಣ ದರ ಜಾರಿಯಾಗುತ್ತಿದೆ. ಆ ಮೂಲಕ ಸಾರ್ವಜನಿಕ ವ್ಯಾಪಕ ವಿರೋಧವನ್ನು ಕಡೆಗಣಿಸಿ, ಪ್ರಯಾಣಿಕರ ಮೇಲೆ ಅನಗತ್ಯ ಆರ್ಥಿಕ ಹೊರೆ ಹೇರುವುದಕ್ಕೆ ಮುಂದಾಗಿದೆ ಎಂದು ಕಿಡಿಕಾರಿದ್ದಾರೆ.
ದರ ನಿಗದಿ ಸಮಿತಿಗೆ ಸಲ್ಲಿಸಲಾದ ಲೆಕ್ಕಾಚಾರಗಳಲ್ಲಿ ಹಲವು ವೈಪರೀತ್ಯಗಳು ಇರುವುದನ್ನು ಗಮನಕ್ಕೆ ತರಲಾಗಿದ್ದು, ಅದರಲ್ಲೂ ಪ್ರಸ್ತುತ ವರ್ಷದಲ್ಲಿನ ದೋಷಗಳು ಸೇರಿವೆ. ಇದರಿಂದ ಪ್ರಯಾಣಿಕರಿಗೆ ಅಧಿಕ ದರ ವಿಧಿಸಲಾಗಿದ್ದು, ಗರಿಷ್ಠ ಟಿಕೆಟ್ ದರವನ್ನು 95 ರೂಪಾಯಿಗೆ ಏರಿಸಲಾಗಿದೆ. ಈ ದೋಷಪೂರ್ಣ ದರ ಪರಿಷ್ಕರಣೆಯನ್ನು ರಾಜ್ಯ ಸರ್ಕಾರ ಮುಂದುವರಿಸಲು ಅವಕಾಶ ನೀಡಬಾರದು. ವಾರ್ಷಿಕ ದರ ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಅಗತ್ಯವಿದ್ದರೆ ಸಾರ್ವಜನಿಕ ಹಿತದೃಷ್ಟಿಯಿಂದ ದರ ಪರಿಷ್ಕರಿಸಲು ಹೊಸ ದರ ನಿಗದಿ ಸಮಿತಿಯನ್ನು ರಚಿಸುವಂತೆ ಮನವಿ ಮಾಡಿದ್ದಾರೆ. ಇನ್ನು ಈ ಕುರಿತಾಗಿ ಸಕಾರಾತ್ಮಕವಾಗಿ ಪರಿಗಣಿಸಲಾಗುವುದೆಂದು ಸಚಿವ ಎಂ.ಎಲ್ ಖಟ್ಟರ್ ಅವರು ಭರವಸೆ ನೀಡಿರುವುದಾಗಿ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ನೋಡಿರಿ

