ಗಿಲ್ಲಿ ವಿರುದ್ಧ ದೂರು ಕೊಟ್ಟ ನಿರ್ಮಾಪಕ! – ಕಾಮಿಡಿ ಕಿಂಗ್ ಮೇಲಿನ ಆರೋಪವೇನು?

ಬಿಗ್ಬಾಸ್ ಗೆದ್ದ ಮೇಲೆ ಗಿಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಒಂದಾದ ಮೇಲೊಂದು ಇವೆಂಟ್ಗಳಲ್ಲಿ ಭಾಗಿಯಾಗುತ್ತಿದ್ದಾರೆ. ಹೋದಲೆಲ್ಲಾ ಫ್ಯಾನ್ಸ್ ಕೂಡ ಮುಗಿಬೀಳುತ್ತಿದ್ದಾರೆ. ಇವೆಲ್ಲದ್ರ ನಡುವೆ ಗಿಲ್ಲಿಗೆ ಸಂಕಷ್ಟ ಶುರುವಾಗಿದೆ. ಗಿಲ್ಲಿ ವಿರುದ್ಧ ಕೇಸ್ ದಾಖಲಾಗಿದೆ.
ಇದನ್ನೂ ಓದಿ: RCBಗೆ ಹ್ಯಾಟ್ರಿಕ್ ಕಪ್ – ಡೆಲ್ಲಿ ಬೇಟೆಯಾಡಿದ ಸಿಂಹಿಣಿಯರು
ಬಿಗ್ಬಾಸ್ ಗೆದ್ದ ಬಳಿಕ ಗಿಲ್ಲಿಗೆ ಹೊಸ ಹೊಸ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ. ಜೊತೆಗೆ ಸಾಕಷ್ಟು ಇವೆಂಟ್ಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇವೆಲ್ಲದ್ರ ನಡುವೆ ಗಿಲ್ಲಿ ವಿರುದ್ಧ ದೂರೊಂದು ದಾಖಲಾಗಿದೆ. ಗಿಲ್ಲಿ ನಟಿಸಿರುವ ಸಿನಿಮಾವೊಂದರ ನಿರ್ಮಾಪಕರು ಗಿಲ್ಲಿ ನಟ ವಿರುದ್ಧ ದೂರು ನೀಡಿದ್ದಾರೆ.
ಹೌದು, ಬಿಗ್ಬಾಸ್ ಮನೆಗೆ ಹೋಗುವ ಮುನ್ನವೇ ಗಿಲ್ಲಿ ಕೆಲ ಸಿನಿಮಾಗಳಲ್ಲಿ ನಟಿಸಿದ್ದರು. ಇದ್ರಲ್ಲಿ ಸರ್ಕಾರಿ ಶಾಲೆ ಎಚ್8 ಸಿನಿಮಾ ಕೂಡ ಒಂದು. ಇಂದು (ಫೆಬ್ರವರಿ 6) ಈ ಸಿನಿಮಾ ಬಿಡುಗಡೆ ಆಗಿದೆ. ಗಿಲ್ಲಿ, ಸಂಭಾವನೆ ಪಡೆದು ಸಿನಿಮಾನಲ್ಲಿ ನಟಿಸಿದ್ದಾರೆ. ಆದರೆ ಸಿನಿಮಾದ ಪ್ರಚಾರಕ್ಕೆ ಬರುತ್ತಿಲ್ಲ ಎಂದು ನಿರ್ಮಾಪಕ ತೇಜಸ್ವಿ ಎಸ್ ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಗಿಲ್ಲಿ ವಿರುದ್ಧ ನಿರ್ಮಾಪಕ ತೇಜಸ್ವಿ ಎಸ್ ಅವರು ಫಿಲಂ ಚೇಂಬರ್ಗೆ ದೂರು ನೀಡಿದ್ದಾರೆ.
ಸಿನಿಮಾನಲ್ಲಿ ನಾವು ಗಿಲ್ಲಿಗೆ ಪ್ರಮುಖ ಪಾತ್ರ ನೀಡಿದ್ದೀವಿ, ಬಿಗ್ಬಾಸ್ಗೆ ಹೋಗುವ ಮುಂಚೆಯೇ ಅವರು ಕೇಳಿದಷ್ಟು ಸಂಭಾವನೆಯನ್ನು ಸಹ ಕೊಟ್ಟಿದ್ದೀವಿ. ಆದರೆ ಅವರು ಸಿನಿಮಾದ ಪ್ರಚಾರಕ್ಕೆ ಬರುತ್ತಿಲ್ಲ. ಎಷ್ಟು ಕರೆ ಮಾಡಿದರೂ ಕರೆ ಸ್ವೀಕರಿಸುತ್ತಿಲ್ಲ, ಕನಿಷ್ಟ ನಮ್ಮ ಸಿನಿಮಾದ ಬಗ್ಗೆ ಒಂದು ಸೋಷಿಯಲ್ ಮೀಡಿಯಾ ಪೋಸ್ಟ್ ಸಹ ಹಂಚಿಕೊಂಡಿಲ್ಲ ಎಂದು ನಿರ್ಮಾಪಕ ಆರೋಪ ಮಾಡಿದ್ದಾರೆ. ದೂರು ಸ್ವೀಕಾರ ಮಾಡಿರುವ ಚೇಂಬರ್, ಗಿಲ್ಲಿಯನ್ನು ಕರೆಸಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ನೋಡಿರಿ

