ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕೆಎಲ್ ರಾಹುಲ್ ಭರ್ಜರಿ ಶತಕ – ಕರ್ನಾಟಕಕ್ಕೆ ಸಿಗುತ್ತಾ ಗೆಲುವು?

ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕೆಎಲ್ ರಾಹುಲ್ ಭರ್ಜರಿ ಶತಕ – ಕರ್ನಾಟಕಕ್ಕೆ ಸಿಗುತ್ತಾ ಗೆಲುವು?

ರಣಜಿ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಮುಂಬೈನ ಶರದ್ ಪವಾರ್ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ತಂಡದ ನಾಯಕ ಶಾರ್ದೂಲ್ ಠಾಕೂರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡವನ್ನು ಪ್ರಥಮ ಇನಿಂಗ್ಸ್​ನಲ್ಲಿ ಕೇವಲ 120 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಕರ್ನಾಟಕ ಬೌಲರ್​ಗಳು ಯಶಸ್ವಿಯಾಗಿದ್ದರು.

ಇದನ್ನೂ ಓದಿ: ಮೆಟ್ರೋ ಟಿಕೆಟ್ ದರ ಸಮರ!‌ : ಮೆಟ್ರೋ ನಿಲ್ದಾಣದಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ – ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಕರ್ನಾಟಕ ಪರ ಮಯಾಂಕ್ ಅಗರ್ವಾಲ್ 92 ರನ್ ಬಾರಿಸಿದ್ದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಕರ್ನಾಟಕ ತಂಡವು ಮೊದಲ ಇನಿಂಗ್ಸ್​ನಲ್ಲಿ 173 ರನ್​ಗಳಿಸಿ ಆಲೌಟ್ ಆಯಿತು.53 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಮುಂಬೈ ಪರ ಆಕಾಶ್ ಆನಂದ್ 70 ರನ್ ಬಾರಿಸಿದರೆ, ಯಶಸ್ವಿ ಜೈಸ್ವಾಲ್ 36 ರನ್​ಗಳಿಸಿದರು. ಇನ್ನು ತನುಷ್ ಕೋಟ್ಯಾನ್ ಅಜೇಯ 48 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಮುಂಬೈ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ ಬರೋಬ್ಬರಿ 377 ರನ್​ಗಳಿಸಿ ಆಲೌಟ್ ಆಯಿತು.

ಮೊದಲ ಇನಿಂಗ್ಸ್​ನಲ್ಲಿನ 53 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 325 ರನ್​ಗಳ ಗುರಿ ಪಡೆದ ಕರ್ನಾಟಕ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ಮಯಾಂಕ್ ಅಗರ್ವಾಲ್ ಕೇವಲ 3 ರನ್​ಗಳಿಸಿ ಔಟಾಗಿದ್ದಾರೆ. ಆದರೆ ಬಳಿಕ ಬಂದ ದೇವತ್ ಪಡಿಕ್ಕಲ್ 39 ರನ್​ಗಳ ಕೊಡುಗೆ ನೀಡಿದರು.ಇದಾಗ್ಯೂ ಮತ್ತೊಂದೆಡೆ ಕ್ರೀಸ್ ಕಚ್ಚಿ ಆಡಿದ ಕೆಎಲ್ ರಾಹುಲ್ 147 ಎಸೆತಗಳಲ್ಲಿ 13 ಫೋರ್​ಗಳೊಂದಿಗೆ ಶತಕ ಪೂರೈಸಿದ್ದಾರೆ. ಈ ಮೂಲಕ ಕರ್ನಾಟಕ ತಂಡವನ್ನು ಗೆಲುವಿತ್ತ ಕೊಂಡೊಯ್ಯುತ್ತಿದ್ದಾರೆ.ಇದೀಗ 47 ಓವರ್​ಗಳ ಮುಕ್ತಾಯದ ವೇಳೆಗೆ ಕರ್ನಾಟಕ ತಂಡವು 3 ವಿಕೆಟ್ ಕಳೆದುಕೊಂಡು 209 ರನ್​ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಕೆಎಲ್ ರಾಹುಲ್ ಹಾಗೂ ಸ್ಮರಣ್ ರವಿಚಂದ್ರನ್ ಬ್ಯಾಟಿಂಗ್ ಮುಂದುವರೆಸಿದ್ದು, ಇನ್ನು 116 ರನ್​ಗಳಿಸಿದರೆ ಪಂದ್ಯ ಗೆದ್ದು ಸೆಮಿಫೈನಲ್​ಗೇರಬಹುದು.

Kishor KV

Leave a Reply

Your email address will not be published. Required fields are marked *