ಮುಖಕ್ಕೆ ಸ್ಪ್ರೇ ಹೊಡೆದು ಮಾಂಗಲ್ಯಸರ ಕದ್ದೊಯ್ದ ಕಳ್ಳರು! – ಮಹಿಳೆ ಸಾವು!

ಮುಖಕ್ಕೆ ಸ್ಪ್ರೇ ಹೊಡೆದು ಮಾಂಗಲ್ಯಸರ ಕದ್ದೊಯ್ದ ಕಳ್ಳರು! – ಮಹಿಳೆ ಸಾವು!

ಚಿನ್ನದ ದರ ಗಗನಕ್ಕೇರಿದೆ. ಮಧ್ಯಮವರ್ಗದರಿಗೆ ಚಿನ್ನ ಖರೀದಿಸುವುದೇ ದೊಡ್ಡ ತಲೆನೋವಾಗಿದೆ. ಇದ್ರ ಮಧ್ಯೆ ಕಳ್ಳರ ಕಾಟ ಕೂಡ ಹೆಚ್ಚಾಗಿದೆ. ಇದೀಗ ಬೆಂಗಳೂರಿನಲ್ಲಿ ಸ್ಪ್ರೇ ಸಿಂಪಡಿಸಿ ಕಳ್ಳರು ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದಾರೆ. , ಮಹಿಳೆ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಪಬ್‌ಜಿ ಅಡಿಕ್ಟ್‌ ಆಗುವ ಮುನ್ನ ಎಚ್ಚರ! – ಪಬ್‌ಜಿ ಆಡುತ್ತಲೇ ಪ್ರಾಣ ಬಿಟ್ಟ ಯುವಕ!

ಈ ಘಟನೆ ನೆಲಮಂಗಲ ಬಳಿಯ ಹುಸ್ಕೂರು ಗ್ರಾಮದಲ್ಲಿ ನಡೆದಿದೆ. ಜ್ಯೋತಿ (45) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ಅಷ್ಟಕ್ಕೂ ಆಗಿದ್ದೇನು?

ಜ್ಯೋತಿ ಬೆಳಗ್ಗೆ ಎದ್ದು ಮನೆಯ ಮುಂದೆ ಕಸ ಗುಡಿಸುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಕಳ್ಳರು ಮಹಿಳೆಗೆ ಸ್ಪ್ರೇ ಸಿಂಪಡಿಸಿ ಆಕೆಯ ಕೊರಳಲ್ಲಿದ್ದ 70 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಸ್ಪ್ರೇ ಸಿಂಪಡಿಸಿದ ಪರಿಣಾಮ ಮಹಿಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಕೂಡಲೇ ಮಹಿಳೆಯನ್ನು ನೆಲಮಂಗಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮಹಿಳೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಮರಣೋತ್ತರ ಪರೀಕ್ಷೆಗೆ ಜ್ಯೋತಿ ಮೃತದೇಹವನ್ನು ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Shwetha M