ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ದಾಳಿ – ಪಾದಯಾತ್ರೆ ಹೋಗುತ್ತಿದ್ದ ಬಾಲಕ ಜಸ್ಟ್ ಮಿಸ್

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ದಾಳಿ – ಪಾದಯಾತ್ರೆ ಹೋಗುತ್ತಿದ್ದ ಬಾಲಕ ಜಸ್ಟ್ ಮಿಸ್

ಮಲೆ ಮಹದೇಶ್ವರ ಬೆಟ್ಟದಲ್ಲಿ  ಮತ್ತೆ ಚಿರತೆ ದಾಳಿ  ನಡೆದಿದೆ. ಮಾದಪ್ಪನ ದರ್ಶನಕ್ಕೆ ಪಾದಯಾತ್ರೆಗೆ   ತೆರಳುತ್ತಿದ್ದ ಬಾಲಕ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇದರಿಂದ ಶಿವರಾತ್ರಿ ಜಾತ್ರೆಗೆ ಪಾದಯಾತ್ರೆ ಮೂಲಕ ಬರುತ್ತಿರುವ ಸಹಸ್ರಾರು ಭಕ್ತರಲ್ಲಿ  ಆತಂಕ ಸೃಷ್ಟಿಯಾಗಿದೆ. ಮತ್ತೊಂದೆಡೆ ಪ್ರಾಣದ ಹಂಗು ತೊರೆದು ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಕಾವೇರಿ ನದಿ ದಾಟಿ ಬರುತ್ತಿದ್ದಾರೆ. ಭಕ್ತರ ರಕ್ಷಣೆಯೇ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಗೆ  ದೊಡ್ಡ ಸವಾಲಾಗಿದೆ.

ಇತ್ತೀಚೆಗಷ್ಟೇ ಮಂಡ್ಯ  ಜಿಲ್ಲೆಯ ಚೀರನಹಳ್ಳಿಯ ಪ್ರವೀಣ್ ಎಂಬ ಯುವಕ ಮಹದೇಶ್ವರ ಬೆಟ್ಟದ ರಂಗಸ್ವಾಮಿ ಒಡ್ಡು ಬಳಿ ಚಿರತೆ ದಾಳಿಗೆ ಬಲಿಯಾಗಿದ್ದ. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅವಘಡ ನಡೆದಿದೆ. ಭಕ್ತರು ಪಾದಯಾತ್ರೆ ಮೂಲಕ ಮಹದೇಶ್ವರನ ದರ್ಶನಕ್ಕೆ ಹೊರಟಿದ್ದರು. ಆದರೆ ತಾಳ ಬೆಟ್ಟದ ಮುಂದೆ 2ನೇ ತಿರುವಿನಲ್ಲಿ ಇದ್ದಕ್ಕಿದ್ದಂತೆ ಚಿರತೆ ಪಾದಯಾತ್ರಿಗಳ ಗುಂಪಿನ ಮೇಲೆ ದಾಳಿ ನಡೆಸಿದೆ. ಈ ವೇಳೆ ಗುಂಪಿನಲ್ಲಿದ್ದ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕು ಭುವನಹಳ್ಳಿ ಗ್ರಾಮದ ಚೇತನ್ ಎಂಬ 10 ವರ್ಷದ ಬಾಲಕನ ಕಿವಿಗೆ ಪರಚಿ ಗಾಯವಾಗಿದ್ದು ಪ್ರಾಣಾಪಾಯದಿಂದ ಬಚಾವ್ ಆಗಿದ್ದಾನೆ. ಜೊತೆಯಲ್ಲಿದ್ದವರು ಕಿರಿಚಿಕೊಳ್ಳುತ್ತಿದ್ದಂತೆ ಚಿರತೆ  ಕಾಡಿನೆಡೆಗೆ ಓಡಿಹೋಗಿದೆ.

ಇದನ್ನೂ ಓದಿ: UAE ವಿರುದ್ಧ ಪಾಕ್‌ಗೆ ಗೆಲುವು – ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನ

ಅರಣ್ಯ, ಪೊಲೀಸ್ ಹಾಗು ಮಹದೇಶ್ವರ ಬೆಟ್ಟ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಸಿಬ್ಬಂದಿ ಒಳಗೊಂಡ ತಲಾ ನಾಲ್ವರ ತಂಡ ರಚಿಸಿ ಪ್ರತಿ ಕಿಲೋಮೀಟರ್‌ಗೆ ಒಂದು ತಂಡದಂತೆ ನಿಯೋಜಿಸಲಾಗಿದೆ. ಅಲ್ಲದೇ ಡ್ರೋನ್ ಕ್ಯಾಮೆರಾದ ಮೂಲಕ ವನ್ಯ ಪ್ರಾಣಿಗಳ ಚಲನವಲನಗಳ ಮೇಲೆ ನಿಗಾ ವಹಿಸಲಾಗಿದೆ. ಇಷ್ಟೆಲ್ಲ ಸುರಕ್ಷತಾ ಕ್ರಮ ಕೈಗೊಂಡಿದ್ದರೂ ಚಿರತೆ ದಾಳಿ ನಡೆಸಿರುವುದು ಮಾದಪ್ಪನ ಭಕ್ತರಲ್ಲಿ ಆತಂಕ ಸೃಷ್ಟಿಸಿದೆ. ಬೇರೆ ಬೇರೆ ಕಡೆಗಳಲ್ಲಿ ಸೆರೆ ಹಿಡಿದ ಚಿರತೆಗಳನ್ನು ಮಹದೇಶ್ವರ ಬೆಟ್ಟದ ಅರಣ್ಯದಲ್ಲಿ ಬಿಡುಗಡೆ ಮಾಡುತ್ತಿರುವುದೇ ಚಿರತೆಗಳ ಹಾವಳಿಗೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Kishor KV

Leave a Reply

Your email address will not be published. Required fields are marked *