ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಾಧು ಕೋಕಿಲ & ಮಂಡ್ಯ ರಮೇಶ್‌ಗೆ ಬಿಗ್ ರಿಲೀಫ್    

 ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಾಧು ಕೋಕಿಲ & ಮಂಡ್ಯ ರಮೇಶ್‌ಗೆ ಬಿಗ್ ರಿಲೀಫ್     

 ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕನ್ನಡದ ನಟರಾದ ಸಾಧು ಕೋಕಿಲ  ಹಾಗೂ ಮಂಡ್ಯ ರಮೇಶ್   ವಿರುದ್ಧ ಹಾಕಲಾದ ಕೇಸನ್ನು ಕರ್ನಾಟಕ ಹೈಕೋರ್ಟ್‌  ರದ್ದುಗೊಳಿಸಿದೆ. ಈ ಮೂಲಕ ಇಬ್ಬರು ನಟರಿಗೂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.

 ಮಸಾಜ್ ಮಾಡಿಸಿಕೊಳ್ಳುವಾಗ ಲೈಂಗಿಕ ದೌರ್ಜನ್ಯ ಮಾಡಿದ್ದರೆಂದು ಆರೋಪ ಮಾಡಲಾಗಿತ್ತು.ಮೈಸೂರಿನ ಬ್ಯೂಟಿ ಪಾರ್ಲರ್‌ನ ಮಹಿಳೆಯೊಬ್ಬರಿಂದ ಈ ಆರೋಪ ಕೇಳಿಬಂದಿತ್ತು. ತನಿಖೆ ನಡೆಸಿದ್ದ ಮೈಸೂರಿನ ಸರಸ್ವತಿ ಪುರಂ ಪೊಲೀಸರು, ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಪ್ರಕರಣ ರದ್ದು ಕೋರಿ ಇಬ್ಬರೂ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಗುಮಾನಿ ಮೇರೆಗೆ 2017ರ ಡಿ.20ರಂದು ಮೈಸೂರಿನ ಸ್ವಾಮಿ ಆರ್ಕೇಡ್‌ ಕಟ್ಟಡದಲ್ಲಿದ್ದ ಲೈಕ್‌ ಟ್ರೆಂಡ್‌ ಫ್ಯಾಮಿಲಿ ಸಲೂನ್‌ ಮೇಲೆ ಸರಸ್ವತಿಪುರಂ ಠಾಣಾ ಪೊಲೀಸರು ದಾಳಿ ನಡೆಸಿದ್ದರು. ಆ ವೇಳೆ ಸಲೂನ್‌ನಲ್ಲಿ ಮಹಿಳಾ ಸಿಬ್ಬಂದಿ ಹಾಗೂ ಸಲೂನ್‌ ಮಾಲೀಕ ರಾಜೇಶ್‌ ಇದ್ದರು. ಮಹಿಳೆಯನ್ನು ವಿಚಾರಣೆ ನಡೆಸಿದಾಗ, ”ಸಲೂನ್‌ ಭೇಟಿ ನೀಡುವ ಗ್ರಾಹಕರ ದೇಹದ ಎಲ್ಲಾ ಭಾಗಗಳಿಗೆ ಮಸಾಜ್‌ ಮಾಡುವಂತೆ ರಮೇಶ್‌ ನನಗೆ ಹೇಳುತ್ತಿದ್ದರು. ನಟ ಸಾಧು ಕೋಕಿಲ ಸಹ ಸಲೂನ್‌ಗೆ ಬರುತ್ತಿದ್ದರು. ಅವರ ದೇಹದ ಎಲ್ಲಾ ಭಾಗಗಳಿಗೂ ನಾನು ಮಸಾಜ್‌ ಮಾಡಿದೆ,” ಎಂದು ಹೇಳಿಕೆ ನೀಡಿದ್ದರು.

ಆಲ್ಬಂ ಸಾಂಗ್‌ ರಿಲೀಸ್‌ ಮಾಡಿದ ಸಾ‌ ರಾ ಮಹೇಶ್‌ ಪತ್ನಿ ಅನಿತಾ; ಹಾಡು ಕೇಳಿ ಸಾಧುಕೋಕಿಲ ಏನಂದ್ರು ನೋಡಿ!

ಆ ಕುರಿತು ತನಿಖೆ ನಡೆಸಿದ್ದ ಪೊಲೀಸರು, ಸಾಧು ಕೋಕಿಲ ವಿರುದ್ಧ ಐಪಿಸಿ ಸೆಕ್ಷನ್‌ 354 ಅನ್ವಯ ಮಹಿಳೆಯ ಘನತೆಗೆ ಧಕ್ಕೆ ತಂದ ಸಂಬಂಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಹೈಕೋರ್ಟ್‌ ಮೆಟ್ಟಿಲೇರಿದ ಸಾಧು ಕೋಕಿಲ ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿದ್ದಾರೆ.

ಅರ್ಜಿದಾರರ ಪರ ವಕೀಲರು, ಸಲೂನ್‌ನ ಮಹಿಳಾ ಸಿಬ್ಬಂದಿಯ ಘನತೆಗೆ ಧಕ್ಕೆ ತಂದ ಆರೋಪ ಸಂಬಂಧ ಸಾಧು ಕೋಕಿಲ ವಿರುದ್ಧ ಯಾವುದೇ ಸಾಕ್ಷ್ಯಾಧಾರ ಇಲ್ಲ. ಅಧೀನ ನ್ಯಾಯಾಲಯದ ಮುಂದೆ ನೀಡಿದ ಈ ಹೇಳಿಕೆಯಲ್ಲಿ ಮಹಿಳೆಯು ಈ ಆರೋಪ ಮಾಡಿಲ್ಲ. ಆಕೆ ತಿಳಿಸಿದ ದಿನಾಂಕದಂದು ಅರ್ಜಿದಾರರು ಸಲೂನ್‌ಗೆ ಭೇಟಿಯೇ ನೀಡಿರಲಿಲ್ಲ. ಆದರೂ, ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಇದರಿಂದ ಅರ್ಜಿದಾರರಿಗೆ ತೇಜೋವಧೆಯಾಗುತ್ತಿದೆ. ಹಾಗಾಗಿ, ಪ್ರಕರಣ ಹಾಗೂ ಆ ಕುರಿತ ಅಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು, ಎಂದು ಕೋರಿದ್ದರು. ಈ ಮನವಿಯನ್ನು ಈಗ ಹೈಕೋರ್ಟ್‌ ಪುರಸ್ಕರಿಸಿದೆ.

Kishor KV