ಬಮೂಲ್ ಉತ್ಪನ್ನಗಳಿಗೆ ಸುಧಾರಾಣಿ ರಾಯಭಾರಿ – KMFವಿರೋಧದ ನಡುವೆ ಹೂ ಗುಚ್ಛ ನೀಡಿದ ಡಿಕೆ ಸುರೇಶ್

ಬಮೂಲ್ ಉತ್ಪನ್ನಗಳಿಗೆ ಸುಧಾರಾಣಿ ರಾಯಭಾರಿ – KMFವಿರೋಧದ ನಡುವೆ ಹೂ ಗುಚ್ಛ ನೀಡಿದ ಡಿಕೆ ಸುರೇಶ್

ಕೆಲ ದಿನಗಳ ಹಿಂದಷ್ಟೆ ರಾಜ್ಯದ ಹೆಮ್ಮೆಯಾಗಿರುವ ಸರ್ಕಾರಿ ಮಾಲೀಕತ್ವದ ಮೈಸೂರು ಸ್ಯಾಂಡಲ್ ಉತ್ಪನ್ನಗಳಿಗೆ ಪ್ಯಾನ್ ಇಂಡಿಯಾ ನಟಿ ತಮನ್ನಾ ಭಾಟಿಯಾ  ಅವರನ್ನು ರಾಯಭಾರಿ ಅನ್ನಾಗಿ ಮಾಡಲಾಗಿದೆ. ಕನ್ನಡದವರ ಬದಲು ಪರಭಾಷಾ ನಟಿಯನ್ನು ರಾಯಭಾರಿ ಮಾಡಿದ್ದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಬಮೂಲ್   ತಮ್ಮ ನಂದಿನಿ ಉತ್ಪನ್ನಗಳಿಗೆ ಸುಧಾರಾಣಿ ಅವರನ್ನು ರಾಯಭಾರಿ ಅನ್ನಾಗಿ ಮಾಡಿದೆ. ಆದರೆ ಇದಕ್ಕೆ ಕೆಎಂಎಫ್   ವಿರೋಧ ವ್ಯಕ್ತಪಡಿಸಿದೆ.

ಬಮೂಲ್​​ನ ಅಧ್ಯಕ್ಷರಾಗಿರುವ ಡಿಕೆ ಸುರೇಶ್ ಅವರು ಸುಧಾರಾಣಿ ಅವರನ್ನು ಭೇಟಿಯಾಗಿ ಅವರಿಗೆ ಹೂಗುಚ್ಛ ನೀಡಿ ಅವರನ್ನು ಬಮೂಲ್​​ ಉತ್ಪನ್ನಗಳ ರಾಯಭಾರಿ ಆಗಿ ಸ್ವಾಗತಿಸಿದ್ದಾರೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಹಿರಿಯ ನಟಿ ಸುಧಾರಾಣಿ, ‘ತಲೆಮಾರುಗಳಿಂದ ಪ್ರತಿಯೊಬ್ಬ ಕನ್ನಡಿಗನ ನಂಬಿಕೆಯ ಪ್ರತೀಕ ನಂದಿನಿ. ರೈತರ ಸಹಕಾರಿ ಸಂಸ್ಥೆಯಾದ ಬಮುಲ್ ನಂದಿನಿ   ಜೊತೆ ಒಡಗೂಡುವ ಅವಕಾಶ ನನಗೆ ಅತ್ಯಂತ ಗೌರವದ ವಿಷಯ. ಡಾ. ರಾಜ್‌ಕುಮಾರ್, ಶಿವರಾಜ್‌ಕುಮಾರ್ ಹಾಗೂ ಪುನೀತ್ ರಾಜ್‌ಕುಮಾರ್ ಅವರಂತಹ ಮೇರು ವ್ಯಕ್ತಿಗಳ ಹಾದಿಯನ್ನು ಅನುಸರಿಸಿ ಬ್ರ್ಯಾಂಡ್ ಅಂಬಾಸಿಡರ್ ಆಗಿರುವುದು ಕೇವಲ ಅನುಕರಣೆಯಲ್ಲ ಧನ್ಯತೆ ಮತ್ತು ಹೆಮ್ಮೆಯ ಜವಾಬ್ದಾರಿ’ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗರೇ ಎಚ್ಚರ! – ಇನ್ಮುಂದೆ ನೀರು ಪೋಲು ಮಾಡಿದ್ರೆ 5,000 ದಂಡ ಫಿಕ್ಸ್!‌  

‘ಸಂಸ್ಥೆಯಿಂದ ಬರುವ ಹೊಸ ಉತ್ಪನ್ನಗಳ ಬಿಡುಗಡೆಯ ಹಿಂದೆ ಇರುವ ದೃಷ್ಟಿಕೋನ ನಿಜಕ್ಕೂ ಪ್ರೇರಣಾದಾಯಕವಾಗಿತ್ತು. ನಮ್ಮ ದೇಸಿ ಹಸುಗಳನ್ನು ಸಂರಕ್ಷಿಸುವುದು, ರೈತರಿಗೆ ನ್ಯಾಯಸಮ್ಮತ ಬೆಲೆ ಖಚಿತಪಡಿಸುವುದು ಹಾಗೂ ಗ್ರಾಹಕರಿಗೆ ಗುಣಮಟ್ಟದ, ವಿಶ್ವಾಸಾರ್ಹ ಉತ್ಪನ್ನಗಳನ್ನು ತಲುಪಿಸುವುದೇ ಇದರ ಮುಖ್ಯ ಉದ್ದೇಶವಾಗಿದೆ. ಈ ಹೊಸ ಅಧ್ಯಾಯದಲ್ಲಿ ದೇಸಿ ಹಸುಗಳಿಂದ ತಯಾರಿಸಿದ A2 ತುಪ್ಪ, A2 ಹಾಲು ಸೇರಿದಂತೆ ಹಲವು ಉತ್ಪನ್ನಗಳು ಸೇರಿದೆ. ಸಂಪ್ರದಾಯ, ಶುದ್ಧತೆ ಮತ್ತು ರೈತರ ಕಲ್ಯಾಣದ ಮೌಲ್ಯಗಳು ಅಡಕವಾಗಿರುವ, ರೈತರನ್ನು ಮನ್ನೆಲೆಗೆ ತರುವ, ನಮ್ಮ ಬೇರುಗಳನ್ನು ಗೌರವಿಸುವ ಮತ್ತು ಕರ್ನಾಟಕದ ಪರಂಪರೆಯನ್ನು ಮುಂದಿನ ಪೀಳಿಗೆಗಳಿಗೆ ಸಾಗಿಸುವ ಈ ಚಳವಳಿಗೆ ಬೆಂಬಲ ನೀಡಲು ನನಗೆ ಅಪಾರ ಹೆಮ್ಮೆಯಾಗುತ್ತಿದೆ’ ಎಂದಿದ್ದಾರೆ

 

Kishor KV

Leave a Reply

Your email address will not be published. Required fields are marked *