ಲೋಕಾಯುಕ್ತದಿಂದ ಭ್ರಷ್ಟ ಅಧಿಕಾರಿಗಳ ಬೇಟೆ – PWD ಚೀಫ್‌ ಇಂಜಿನಿಯರ್‌ ಮನೆಯಲ್ಲಿ ಕೋಟಿ ಕೋಟಿ ಆಸ್ತಿ ಪತ್ತೆ

ಲೋಕಾಯುಕ್ತದಿಂದ ಭ್ರಷ್ಟ ಅಧಿಕಾರಿಗಳ ಬೇಟೆ – PWD ಚೀಫ್‌ ಇಂಜಿನಿಯರ್‌ ಮನೆಯಲ್ಲಿ ಕೋಟಿ ಕೋಟಿ ಆಸ್ತಿ ಪತ್ತೆ

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಬಿಸಿ ಮುಟ್ಟಿಸಿದೆ. ಬೆಂಗಳೂರು , ಮೈಸೂರು  , ದಾವಣಗೆರೆ ಜಿಲ್ಲೆಗಳಲ್ಲಿ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆದಿದೆ. ಈ ಅಧಿಕಾರಿಗಳ ಮೇಲೆ ನಿರಂತರ ಭ್ರಷ್ಟಾಚಾರ ದೂರುಗಳು ಬಂದ ಹಿನ್ನೆಲೆಯಲ್ಲಿ ಮನೆ ಹಾಗೂ ಕಚೇರಿಗಳಿಗೆ ದಾಳಿ ಮಾಡಿ ಕಡತಗಳನ್ನು ಪರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ: ಕಾವೇರಿ ನದಿಯಲ್ಲಿ ಕಾಲು ಜಾರಿ ಬಿದ್ದ ವ್ಯಕ್ತಿ – ಮುಳುಗುತ್ತಿದ್ದವನನ್ನು ಬಕೆಟ್ ಹಿಡಿದು ರಕ್ಷಿಸಿದ ಧೈರ್ಯವಂತ

PWD ಚೀಫ್‌ ಇಂಜಿನಿಯರ್‌ ಪುರುಷೋತ್ತಮ ದಾಸ್‌ ಎಂಬವರಿಗೆ ಸೇರಿದ 11 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ 5 ಕಡೆ, ಬೆಂಗಳೂರಿನಲ್ಲಿ 6 ಕಡೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳ ಹುಡುಕಾಟ ನಡೆಸಿದ್ದಾರೆ. ದಾಳಿಯ ವೇಳೆ ದಾಖಲೆಗಳಿಲ್ಲದ ಆಸ್ತಿ, ಚಿನ್ನಾಭರಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಬೆಸ್ಕಾಂ ಇಂಜಿನಿಯರ್‌ ಆರ್.ಹೆಚ್ ಅರ್ಜುನ್‌ ಅವರ ಮನೆ ಹಾಗೂ ಕಚೇರಿ ಮೇಲೂ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ದಾವಣಗೆರೆಯ ಬೆಸ್ಕಾಂನ ಸಿವಿಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಜುನ್‌ ವಿರುದ್ಧ ಆದಾಯ ಮೀರಿ ಅಪಾರ ಪ್ರಮಾಣದ ಆಸ್ತಿ ಗಳಿಸಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತ್ರತ್ವದ ತಂಡ ದಾಳಿ ನಡೆಸಿದೆ.

ಅರ್ಜುನ್‌ ವಾಸವಿದ್ದ ದಾವಣಗೆರೆ ನಗರದ ನಿಟ್ಟುವಳ್ಳಿನಲ್ಲಿ ರೂಮ್, ಕಚೇರಿ ಹಾಗೂ ಶಿವಮೊಗ್ಗದ ಮನೆಯ ಮೇಲೆ ಏಕ ಕಾಲಕ್ಕೆ ದಾಳಿ ನಡೆಸಲಾಗಿದೆ. ಶಿವಮೊಗ್ಗದ ಮನೆಯಲ್ಲಿ ಆಸ್ತಿ ಪತ್ರ ಹಾಗೂ ಚಿನ್ನ ಬೆಳ್ಳಿ ಪತ್ತೆಯಾಗಿದ್ದು, ಇನ್ನಷ್ಟು ಮಹತ್ವದ ದಾಖಲೆಗಳನ್ನ ಪತ್ತೆಹಚ್ಚಲು ಅಧಿಕಾರಿಗಳು ಶೋಧ ಮುಂದುವರಿಸಿದ್ದಾರೆ.

Kishor KV

Leave a Reply

Your email address will not be published. Required fields are marked *