ಬೆಂಗಳೂರಿನಲ್ಲಿ ಫೆಬ್ರವರಿ 15 ರಂದು ಮಾಂಸ ಮಾರಾಟ, ವಧೆ ನಿಷೇಧ

ಭಾನುವಾರ ಬಾಡೂಟ ತಿನ್ನಬಹುದು ಎಂದುಕೊಂಡಿದ್ದ ಬೆಂಗಳೂರಿನ ಜನರಿಗೆ ಶಾಕಿಂಗ್ ಸುದ್ದಿಯೊಂದಿದೆ. ಈ ಭಾನುವಾರ ಬೆಂಗಳೂರಿನಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಇದನ್ನೂ ಓದಿ: ತಾಯಿಗೆ ಕಣ್ಣು ಕಾಣಲ್ಲ.. ಪಾರ್ಟ್ ಟೈಮ್ ಕೆಲಸ ಮಾಡುತ್ತಾ ಮನೆಗೆ ಆಧಾರವಾಗಿದ್ದ!– ಭೀಕರ ಅಪಘಾತಕ್ಕೆ ಗಗನ್ ಬಲಿ!
ಭಾನುವಾರ ಮಹಾಶಿವರಾತ್ರಿ. ಹಬ್ಬದ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು, ಫೆಬ್ರವರಿ 15 ಭಾನುವಾರದಂದು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ನೋಡಿರಿ

