ಎಣ್ಣೆ ಪಾರ್ಟಿ ವೇಳೆ ಕಿರಿಕ್ – ಕಿಕ್‌ನಲ್ಲಿ ಸ್ನೇಹಿತನ ಕಥೆ ಮುಗಿಸಿದ ಕಿರಾತಕರು

ಶಿಕ್ಷುಲ್ಲಕ ಕಾರಣಕ್ಕೆ ಸ್ನೇಹಿತರೇ ಸೇರಿ ತಮ್ಮ ಗೆಳೆಯನನ್ನೇ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿ ನಡೆದಿದೆ. ಶ್ರೀನಿವಾಸ cಮೃತ ದುರ್ದೈವಿ. ಶಿವಮೊಗ್ಗ ನಗರದ ಹೊಸಮನೆ ನಿವಾಸಿಯಾಗಿದ್ದ ಶ್ರೀನಿವಾಸ್ ಕಳೆದ ಒಂದು ವರ್ಷದಿಂದ ಗಾಜನೂರಿನಲ್ಲಿ ನೆಲೆಸಿದ್ದು, ಗಾರೆ ಕೆಲಸ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಸ್ನೇಹ ಬಾರ್ ಎದುರಿಗಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಂಗಳದಲ್ಲಿ ಶ್ರೀನಿವಾಸ್ ಮತ್ತು ಇವರ ಇಬ್ಬರು ಸ್ನೇಹಿತರು ಎಣ್ಣೆ ಪಾರ್ಟಿ ಮಾಡಿದ್ದಾರೆ. ಈ ವೇಳೆ ಅಮಲಿನಲ್ಲಿದ್ದ ಸ್ನೇಹಿತರ ನಡುವೆ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯ ಶುರುವಾಗಿದೆ.
ಇದನ್ನೂ ಓದಿ: PAK ಸಂಹಾರಕ್ಕಾಗಿ ಲಂಕೆಗೆ ಭಾರತ – ಕುತಂತ್ರಿಗಳ ಸವಾಲ್ ಗೆಲ್ತಾರಾ ಸೂರ್ಯ?
ಗಲಾಟೆ ವಿಕೋಪಕ್ಕೆ ಹೋದಾಗ ಸ್ನೇಹಿತರಿಬ್ಬರು ಸೇರಿ ಶ್ರೀನಿವಾಸ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ, ಆತನ ಕಾಲು ಟ್ವಿಸ್ಟ್ ಮಾಡಿ, ಪ್ಯಾಂಟ್ ಬಿಚ್ಚಿ ಅರೆನಗ್ನಗೊಳಿಸಿ, ತಲೆಯ ಮೇಲೆ ಕಲ್ಲು ಎತ್ತಿಹಾಕಿ ವಿಕೃತವಾಗಿ ಕೊಲೆ ಮಾಡಿದ್ದಾರೆ. ಕೃತ್ಯದ ಬಳಿಕ ಹಂತಕರಿಬ್ಬರು ಸ್ಥಳದಿಂದ ಪರಾರಿಯಾಗಿದ್ದರು. ಇಂದು ಬೆಳಿಗ್ಗೆ ಶ್ರೀನಿವಾಸ್ ಹೆಣವಾಗಿ ಬಿದ್ದಿರುವುದನ್ನು ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಶಿವಮೊಗ್ಗ ಎಸ್ಪಿ ನಿಖಿಲ್ ಬಿ. ಹಾಗೂ ತುಂಗಾ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ನನ್ನ ತಮ್ಮನನ್ನು ಅವನ ಸ್ನೇಹಿತರೇ ಕೊಂದಿದ್ದಾರೆ, ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಮೃತನ ಸಹೋದರಿ ಸುಮಾ ಕಣ್ಣೀರಿಡುತ್ತಾ ಆಗ್ರಹಿಸಿದ್ದಾರೆ. ಶ್ರೀನಿವಾಸ್‌ನನ್ನು ವಿವಸ್ತ್ರಗೊಳಿಸಿ ಹತ್ಯೆ ಮಾಡಿರುವುದು ಪ್ರಕರಣಕ್ಕೆ ಬೇರೆಯದೇ ಆಯಾಮ ನೀಡಿದ್ದು, ಹಂತಕರ ಪತ್ತೆಗಾಗಿ ಪೊಲೀಸರು ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿ, ಇದೀಗ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ನೋಡಿರಿ

