40 ಜನ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಪಲ್ಟಿ! – ಹಲವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ!

ರಾಜ್ಯ ಅವಘಡ ದಿನೇ ದಿನೆ ಹೆಚ್ಚಾಗ್ತಿದೆ. ಇದೀಗ ಮತ್ತೊಂದು ಬಸ್ ದುರಂತ ಸಂಭವಿಸಿದೆ. ಕೋಲಾರ ನಗರ ಹೊರವಲಯದಲ್ಲಿ 40 ಜನರು ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಸಿಂಹಿಣಿ ಸಿಟ್ಟಾದ್ರೆ ಸಿಂಹನೂ ಸೈಲೆಂಟ್! – ಕಾದಾಟದಲ್ಲಿ ಸೋತ ಕಾಡಿನ ರಾಜ!
ಈ ಘಟನೆ ಕೋಲಾರ ನಗರ ಹೊರವಲಯದ ಪವನ್ ಕಾಲೇಜು ಮೈದಾನ ಬಳಿ ನಡೆದಿದೆ. ಆಂಧ್ರದ ನಲ್ಲೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಹೇಮಾ ಟ್ರಾವೆಲ್ಸ್ ಖಾಸಗಿ ಬಸ್ ರಾಷ್ಟ್ರೀಯ ಹೆದ್ದಾರಿ 75ರ ಬೈಪಾಸ್ ರಸ್ತೆಯಲ್ಲಿ ಬೆಳಗ್ಗೆ 4:30ರ ವೇಳೆಗೆ ಪಲ್ಟಿಯಾಗಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದ ನಂತರ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪಘಾತದಿಂದ ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದು ಆಂಧ್ರದ ನಲ್ಲೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಹೇಮಾ ಟ್ರಾವೆಲ್ಸ್ ಖಾಸಗಿ ಬಸ್ ಎನ್ನಲಾಗಿದ್ದು, ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಕೋಲಾರ ನಗರ ಪೊಲೀಸ್ ಠಾಣಾ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದರು. ಅಪಘಾತದ ಕಾರಣ ಚಾಲಕನ ನಿಯಂತ್ರಣ ತಪ್ಪಿರುವುದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಬಸ್ ಪಲ್ಟಿಯಾಗಿ ಬಿದ್ದ ನಂತರ ರಸ್ತೆಯಲ್ಲಿ ಸಂಚಾರ ತೊಂದರೆ ಉಂಟಾಗಿತ್ತು. ಕ್ರೇನ್ ಬಳಸಿ ಬಸ್‌ನ್ನು ರಸ್ತೆಯಿಂದ ತೆರವು ಮಾಡಲಾಗಿದೆ. ಸಂಚಾರಿ ಪೊಲೀಸರು ರಸ್ತೆಯನ್ನು ಸ್ವಚ್ಛಗೊಳಿಸಿ ಸಂಚಾರ ಸುಗಮಗೊಳಿಸಿದರು.

ನೋಡಿರಿ

