ಖ್ಯಾತ ನಟಿ ಖಾಸಗಿ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್! – ಆ ದಿನ ಆಗಿದ್ದೇನು?

ಇತ್ತೀಚೆಗೆ ಸೈಬರ್ ಕ್ರೈಂ ಹೆಚ್ಚಾಗುತ್ತಲೇ ಇದೆ. ಮಹಿಳೆಯ ಅಶ್ಲೀಲ ವಿಡಿಯೋ, ಫೋಟೋ ಮೂಲಕ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬರುತ್ತಿದೆ. ಇದೀಗ ಖ್ಯಾತ ನಟಿ, ರಿಯಾಲಿಟಿ ಶೋ ಸ್ಪರ್ಧಿಯ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್ ಮೇಲ್ ಮಾಡಿದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ; 40 ಜನ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಪಲ್ಟಿ! – ಹಲವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ!
ವಾಶ್‌ರೂಮ್‌ನಲ್ಲಿ ನಟಿಯ ವಿಡಿಯೋ ಗುಟ್ಟಾಗಿ ಚಿತ್ರೀಕರಿಸಿ, ಅದನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಸಂಬಂಧ ಸಿಟಿ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಏನಿದು ಘಟನೆ?
ಬೆಂಗಳೂರಿನ ಕೋರಮಂಗಲದಲ್ಲಿ ನಡೆದ ಕ್ರೀಡಾ ಕೂಟವೊಂದರಲ್ಲಿ ರಿಯಾಲಿಟಿ ಶೋ ತಾರೆ ಭಾಗವಹಿಸಿದ್ದರು. ಈ ವೇಳೆ ಅವರು ವಾಶ್‌ರೂಮ್‌ಗೆ ಹೋದಾಗ, ಕಿಡಿಗೇಡಿಯೊಬ್ಬ ಗುಟ್ಟಾಗಿ ವಿಡಿಯೋ ಚಿತ್ರೀಕರಿಸಿದ್ದಾನೆ. ಅಷ್ಟೇ ಅಲ್ಲದೇ ಫೋಟೋಗಳನ್ನು ಕೂಡ ಕ್ಲಿಕ್ಕಿಸಿಕೊಂಡಿದ್ದಾನೆ. ಆತ ಬ್ಲ್ಯಾಕ್‌ಮೇಲ್ ಮಾಡುವ ಉದ್ದೇಶದಿಂದಲೇ ವಿಡಿಯೋ ಮಾಡಿದ್ದ. ಆದ್ರೆ ಆ ವಿಡಿಯೋವನ್ನು ನೇರವಾಗಿ ಸಂತ್ರಸ್ತ ಯುವತಿಗೆ ಕಳುಹಿಸಿಲ್ಲ. ಬದಲಾಗಿ ಯುವತಿಯ ಸ್ನೇಹಿತೆಯೊಬ್ಬರ ಇನ್‌ಸ್ಟಾಗ್ರಾಮ್ ಖಾತೆಗೆ ಆ ವಿಡಿಯೋ ಮತ್ತು ಫೋಟೋಗಳನ್ನು ಕಳುಹಿಸಿದ್ದಾನೆ. ನಾನು ಕೇಳಿದಷ್ಟು ಹಣ ನೀಡದಿದ್ದರೆ, ಈ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ.
ಕೇವಲ ಮೆಸೇಜ್ ಮಾಡಿದ್ದಲ್ಲದೆ, ಆರೋಪಿ ವಿಡಿಯೋ ಕಾಲ್ ಮೂಲಕ 3-4 ಬಾರಿ ಕರೆ ಮಾಡಿ ಕಿರುಕುಳ ನೀಡಿದ್ದಾನೆ. ಇದೇ ರೀತಿ 4-5 ವಿಡಿಯೋ ತುಣುಕುಗಳನ್ನು ಕಳುಹಿಸಿ ಮಾನಸಿಕವಾಗಿ ಹಿಂಸಿಸಿದ್ದಾನೆ ಎಂಬ ಆರೋಪ ಇದೆ. ಬ್ಲ್ಯಾಕ್‌ಮೇಲ್ ಟಾರ್ಚರ್ ತಾಳಲಾರದೆ ನಟಿ ಈಗ ಕಾನೂನಿನ ಮೊರೆ ಹೋಗಿದ್ದಾರೆ. ಆರೋಪಿ ಕಳುಹಿಸಿದ ವಿಡಿಯೋ ಹಾಗೂ ಫೋಟೋ ಸಾಕ್ಷಿಗಳನ್ನು ಇಟ್ಟುಕೊಂಡು ಸಿಟಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

ನೋಡಿರಿ

