ಬೆಂಗಳೂರಿನಲ್ಲಿ ಹಾಡಹಗಲೇ ಮತ್ತೊಂದು ಬಸ್​ ಬೆಂಕಿಗೆ ಆಹುತಿ! – ಹೊಸ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಹೇಗೆ?

ಬೆಂಗಳೂರಿನಲ್ಲಿ ಹಾಡಹಗಲೇ ಮತ್ತೊಂದು ಬಸ್​ ಬೆಂಕಿಗೆ ಆಹುತಿ! – ಹೊಸ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಹೇಗೆ?

ಕರ್ನಾಟಕದಲ್ಲಿ ಬಸ್‌ ದುರಂತದ ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿದೆ. ಇದೀಗ ಸಿಲಿಕಾನ್‌ ಬೆಂಗಳೂರಿನಲ್ಲಿ ಮತ್ತೊಂದು ಬಸ್‌ ದುರಂತ ಸಂಭವಿಸಿದೆ. ಹಾಡಹಗಲೇ  ಖಾಸಗಿ ಬಸ್‌ವೊಂದು ಬೆಂಕಿಗೆ ಆಘುತಿಯಾಗಿದೆ.

ಇದನ್ನೂ ಓದಿ: ಹುಟ್ಟು ಹಬ್ಬದಂದೇ ಯುವಕ ದುರಂತ ಅಂತ್ಯ! – ಪಾರ್ಟಿ ಮುಗಿಸಿ ಮನೆಗೆ ಬರುವಾಗ ಆಗಿದ್ದೇನು?

ಬೆಂಗಳೂರಿನ ಚಂದ್ರಲೇಔಟ್ ಬಿಎಂಟಿಸಿ ಡಿಪೋ ಸಮೀಪದಲ್ಲಿ ನಿಂತಿದ್ದ ಹೊಸ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.  ಬೆಳಗ್ಗೆ ಸುಮಾರು 10.20ರ ಸುಮಾರಿಗೆ ನಡೆದಿದೆ. ಈ ಬೆಂಕಿಯಿಂದ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.   ಘಟನೆಯ ದೃಶ್ಯಗಳು ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ.

ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಹೇಗೆ? ಶಾರ್ಟ್ ಸರ್ಕ್ಯೂಟ್, ಎಂಜಿನ್ ಸಮಸ್ಯೆ, ಇಂಧನ ಸೋರಿಕೆ ಅಥವಾ ಇನ್ನಾವುದೋ ತಾಂತ್ರಿಕ ದೋಷ ಕಾರಣವಾ ಎಂದು ತನಿಖೆ ನಡೆಸಲಾಗುತ್ತಿದೆ. ಇದೀಗ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಜನರು ಆತಂಕಕ್ಕೆ ಕಾರಣವಾಗಿದೆ. ಇದೀಗ ಬೆಂಗಳೂರಿನಲ್ಲಿ ಖಾಸಗಿ ಬಸ್‌ಗಳ ಸುರಕ್ಷತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ.

ಈ ಘಟನೆಯ ನಂತರ ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಆದರೆ ಬಸ್ ಉಳಿಯಲಿಲ್ಲ. ಯಾವುದೇ ಪ್ರಯಾಣಿಕರು ಇರಲಿಲ್ಲವಾ ಅಥವಾ ಸಮಯಕ್ಕೆ ಸರಿಯಾಗಿ ತಪ್ಪಿಸಿಕೊಂಡರಾ ಎಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳ ವರದಿಯಾಗಿಲ್ಲ ಎಂದು ಮೂಲಗಳು ಹೇಳಿವೆ. ಇದು ದೊಡ್ಡ ಅನಾಹುತವನ್ನು ತಪ್ಪಿಸಿದೆ ಎಂದು ಹೇಳಬಹುದು.

Shwetha M