ಲಾರಿ ಮತ್ತು ಬೈಕ್ ಡಿಕ್ಕಿ – ಗಂಡ, ಹೆಂಡತಿ, ಮಗು ಸ್ಥಳದಲ್ಲೇ ಸಾ*ವು

ಲಾರಿ ಮತ್ತು ಬೈಕ್ ಡಿಕ್ಕಿ –  ಗಂಡ, ಹೆಂಡತಿ, ಮಗು ಸ್ಥಳದಲ್ಲೇ ಸಾ*ವು

ರಸ್ತೆ ಅಪಘಾತದಲ್ಲಿ ಇಡೀ ಕುಟುಂಬ ದಾರುಣ ಅಂತ್ಯಕಂಡಿರುವ ಘಟನೆ ಬೆಳಗಾವಿ  ಜಿಲ್ಲೆ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿದೆ. ಲಾರಿ ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್​​ನಲ್ಲಿದ್ದ ಗಂಡ, ಹೆಂಡ್ತಿ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿದ್ದ ಗಿರೇಪ್ಪಾ ಕುಂದ್ರಾಳಿ, ಪತ್ನಿ ಮಂಜುಳಾ ಕುಂದ್ರಾಳಿ(27), ಮಗು ಆರಾಧ್ಯ ಕುಂದ್ರಾಳಿ(7) ಮೃತ ದುರ್ವೈವಿಗಳು. ಮೂವರು ಬೈಕ್ ಮೇಲೆ ಮಹಾರಾಷ್ಟ್ರದ ಮಿರಜ್ ನಿಂದ ಜಮಖಂಡಿಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಗಿರೇಪ್ಪಾ, ಮಂಜುಳಾ ಹಾಗೂ ಆರಾಧ್ಯ ಒಂದೇ ಬೈಕ್​​ನಲ್ಲಿ ಮಿರಜ್ ನಿಂದ ಜಮಖಂಡಿಗೆ ಹೋಗುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್​​ನಲ್ಲಿ ಗಂಡ-ಹೆಂಡ್ತಿ ಹಾಗೂ ಮಗಳು ಮೃತಪಟ್ಟಿದ್ದಾರೆ. ಇನ್ನು ಸ್ಥಳಕ್ಕೆ ಹಾರೂಗೇರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಬಸ್ ಹರಿದು 4 ವರ್ಷದಲ್ಲಿ ಸಾ* ವು

  ಖಾಸಗಿ ಶಾಲಾ ಬಸ್ ಹರಿದು 4 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಗಾಜರಕೋಟ ಗ್ರಾಮದಲ್ಲಿ ನಡೆದಿದೆ. ಪುನೀತ್ ಮೃತ ಮಗು. ಗಾಜರಕೋಟ ಗ್ರಾಮದ ವಿಸ್ಡಮ್ ಶಾಲೆಯ ವಿದ್ಯಾರ್ಥಿ ಪುನೀತ್ ನಿನ್ನೆ (ಫೆಬ್ರವರಿ 17) ಬಸ್​ನಿಂದ ಕೆಳಗೆ ಇಳಿಯುತ್ತಿದ್ದಂತೆ ಚಾಲಕ ರಿವರ್ಸ್ ತೆಗೆದುಕೊಂಡಿದ್ದಾನೆ. ಆಗ ಬಸ್ ಪುನೀತ್ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮಸ್ಥರು ಮಗುವಿನ ಶವವಿಟ್ಟು ಪ್ರತಿಭಟನೆ ನಡೆಸಿದರು. ಬಸ್ ಡ್ರೈವರ್​ಗೆ ಜೀವಾವಧಿ ಶಿಕ್ಷೆ ನೀಡುವಂತೆ ಆಗ್ರಹಿಸಿದರು. ಬಳಿಕ ಪೊಲೀಸರ ಮನವೊಲಿಕೆಯಿಂದ ಪ್ರತಿಭಟನೆ ಕೈಬಿಟ್ಟರು.

Kishor KV

Leave a Reply

Your email address will not be published. Required fields are marked *