ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಸರ್ಕಾರದಿಂದ ಗ್ರೀನ್‌ ಸಿಗ್ನಲ್!‌ – ಹೋರಾಟದ ಎಚ್ಚರಿಕೆ ಕೊಟ್ಟ ರೈತರು

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಸರ್ಕಾರದಿಂದ ಗ್ರೀನ್‌ ಸಿಗ್ನಲ್!‌ – ಹೋರಾಟದ ಎಚ್ಚರಿಕೆ ಕೊಟ್ಟ ರೈತರು

ಸಫಾರಿ ಪ್ರಿಯರಿಗೆ ಖುಷಿ ಸುದ್ದಿಯೊಂದಿದೆ. ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಬಂಡೀಪುರ ಮತ್ತು ನಾಗರಹೊಳೆ ಅರಣ್ಯ ಸಫಾರಿಯನ್ನು ಪುನಾರಂಭಿಸಲು ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ. ಆದ್ರೀಗ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಡಚ್ಚರ ವಿರುದ್ಧ ಶಿವತಾಂಡವ – ಸತತ ನಾಲ್ಕು ಪಂದ್ಯಗಳನ್ನು ಗೆದ್ದು ಬೀಗಿದ ಭಾರತ

ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಹುಲಿ ದಾಳಿಯಿಂದ ಸರಣಿ ಸಾವುಗಳು ಸಂಭವಿಸಿದ ಹಿನ್ನೆಲೆ, ನವೆಂಬರ್‌ 7ರಿಂದ ಸಫಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಸಫಾರಿ ಮತ್ತೆ ಆರಂಭಿಸಬೇಕು ಎಂದು ಪ್ರವಾಸಿಗರು, ಹೊಟೇಲ್, ರೆಸಾರ್ಟ್ ಮಾಲೀಕರು ಒತ್ತಾಯಿಸಿದ್ದರು. ಇದೀಗ ಸರ್ಕಾರ ಸಫಾರಿಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಆದರೆ ಈ ನಿರ್ಧಾರಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಹೋರಾಟದ ಹಾದಿ ಹಿಡಿಯುವ ಎಚ್ಚರಿಕೆ ಕೊಟ್ಟಿದ್ದಾರೆ.

ಮೈಸೂರು, ಚಾಮರಾಜನಗರ ಎರಡು ಜಿಲ್ಲೆಯಲ್ಲಿಯೂ ಕೂಡ ಕಾಡು ಬಿಟ್ಟು ಇದೀಗ ವನ್ಯಪ್ರಾಣಿಗಳು ನಾಡು ಸೇರಿದ್ದವು. ಈ ಹಿನ್ನೆಲೆ ಎರಡು ಕಡೆಯೂ ಕೂಡ 27 ಹುಲಿ ಹಾಗೂ ಮರಿಗಳನ್ನು ಸೆರೆಹಿಡಿದಿದ್ದಾರೆ. ಸಫಾರಿ ನಿಷೇಧ ಆಗಿದ್ದಕ್ಕೆ ಇಷ್ಟು ದಿನ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಒಂದು ವೇಳೆ ಮತ್ತೆ ಪ್ರಾಣ ಹಾನಿ ಸಂಭವಿಸಿದರೆ ಸರ್ಕಾರವೇ ಹೊಣೆ ಹೊತ್ತುಕೊಳ್ಳಬೇಕಾಗುತ್ತದೆ. ಅಲ್ಲದೇ ಸಫಾರಿ ಆರಂಭ ಮಾಡಿದ್ರೆ ಮತ್ತೆ ರೈತರು ಹೋರಾಟ ಹಾಗೂ ಪ್ರತಿಭಟನೆ ನಡೆಸುವ ಎಚ್ಚರಿಕೆ ಕೊಟ್ಟಿದ್ದಾರೆ.

Shwetha M

Leave a Reply

Your email address will not be published. Required fields are marked *