ಯಶ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್! – ಟಾಕ್ಸಿಕ್‌ನ ಮತ್ತೊಂದು ಸೆನ್ಸೇಷನಲ್ ಟೀಸರ್ ರಿಲೀಸ್‌ಗೆ ಕೌಂಟ್‌ಡೌನ್!

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಬಿಡುಗಡೆಗೆ ಕೌಂಟ್‌ಡೌನ್ ಶುರುವಾಗಿದೆ. ಈಗಾಗಲೇ ಚಿತ್ರದ ಬಗ್ಗೆ ಇನ್ನಿಲ್ಲದ ಹೈಪ್ ಕ್ರಿಯೇಟ್ ಆಗಿದೆ. ಇದೊಂದು ಗ್ಯಾಂಗ್‌ಸ್ಟರ್ ಸಿನಿಮಾ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಇದೀಗ ಯಶ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಸಿಕ್ಕಿದೆ.
ಇದನ್ನೂ ಓದಿ: ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರ ಪ್ರೋತ್ಸಾಹ ಧನ ನೀಡಲಿ! – ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ ಶಾಸಕ!
ಟಾಕ್ಸಿಕ್ ಸಿನಿಮಾದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇತ್ತೀಚೆಗಷ್ಟೇ ಸೆನ್ಸೇಷನಲ್ ಟೀಸರ್ ರಿಲೀಸ್ ಆಗಿತ್ತು. ಟೀಸರ್ನಲ್ಲಿ ಸಾಕಷ್ಟು ಬೋಲ್ಡ್ ದೃಶ್ಯಗಳು ಇದ್ದವು. ಆ ದೃಶ್ಯಗಳ ಕಾರಣಕ್ಕೆ ಟೀಸರ್ ಸಾಕಷ್ಟು ಸದ್ದು ಮಾಡಿತು. ಈಗ ಹೊಸ ಟೀಸರ್ ಮೂಲಕ ಪ್ರೇಕ್ಷಕರ ಎದುರು ಬರಲು ಯಶ್ ರೆಡಿ ಆಗಿದ್ದಾರೆ. ಇದೀಗ ಟಾಕ್ಸಿಕ್‌ನ ಮತ್ತೊಂದು ಟೀಸರ್ ರಿಲೀಸ್ ಆಗಲಿದೆ. ಫೆಬ್ರವರಿ 20ರ ಬೆಳಿಗ್ಗೆ 9.35ಕ್ಕೆ ಟೀಸರ್ ಬಿಡುಗಡೆ ಕಾಣಲಿದೆ. ಈ ಬಗ್ಗೆ ಸಿನಿಮಾ ತಂಡ ಅಪ್‌ಡೇಟ್ ಕೊಟ್ಟಿದೆ. ಈ ಟೀಸರ್ನಲ್ಲೂ ಬೋಲ್ಡ್ ದೃಶ್ಯಗಳು ಇರುತ್ತವೆಯೇ ಎಂಬುದು ಸದ್ಯದ ಪ್ರಶ್ನೆ.
ಇನ್ನು ಟಾಕ್ಸಿಕ್ ಸಿನಿಮಾದ ಪ್ರಚಾರ ವೇಗವಾಗಿ ಸಾಗುತ್ತಿಲ್ಲ ಎಂಬ ಬೇಸರ ಅಭಿಮಾನಿಗಳಿಗೆ ಇತ್ತು. ಈಗ ಟೀಸರ್ ಮೂಲಕ ಸಿನಿಮಾ ಪ್ರಚಾರಕ್ಕೆ ಅದ್ದೂರಿಯಾಗಿ ಚಾಲನೆ ನೀಡಲಾಗುತ್ತಿದೆ. ಟಾಕ್ಸಿಕ್ ಸಿನಿಮಾ ಮುಂದಕ್ಕೆ ಹೋಗಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, ರಿಲೀಸ್ ಆಗಿರೋ ಪೋಸ್ಟರ್ನಲ್ಲಿ ರಿಲೀಸ್ ದಿನಾಂಕದ ಬಗ್ಗೆ ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ. ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ ಬರೋದು ಖಚಿತವಾಗಿದೆ.

ನೋಡಿರಿ

