ಹಳಿ ತಪ್ಪಿದ ನಮ್ಮ ಮೆಟ್ರೋ ಡ್ರೈವರ್‌ಲೆಸ್ ರೈಲು! – ಏನಾಯ್ತು?

ಹಳಿ ತಪ್ಪಿದ ನಮ್ಮ ಮೆಟ್ರೋ ಡ್ರೈವರ್‌ಲೆಸ್ ರೈಲು! – ಏನಾಯ್ತು?

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸಂಚಾರಿ ಜೀವನಾಡಿಯಾಗಿದೆ. ನಿತ್ಯ ಲಕ್ಷಾಂತರ ಮಂದಿ ಪ್ರಯಾಣಿಸುತ್ತಿದ್ದಾರೆ. ಇದೀಗ ನಮ್ಮ ಮೆಟ್ರೋ ಬಗ್ಗೆ ಶಾಕಿಂಗ್‌ ಸುದ್ದಿಯೊಂದು ಹೊರ ಬಿದ್ದಿದೆ. ಯೆಲ್ಲೋ ಲೈನ್‌ನಲ್ಲಿ ಸಂಚರಿಸುತ್ತಿದ್ದ ಡ್ರೈವರ್ಲೆಸ್ ಮೆಟ್ರೋ ರೈಲು ಹಳಿ ತಪ್ಪಿದ ಘಟನೆ  ತಡವಾಗಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಕಾಪಾಡಿ ಎಂದು ಅಂಗಲಾಚಿದ್ರೂ ಮಾನವೀಯತೆ ಮರೆತ ಡ್ರೈವರ್! – 6 ವರ್ಷದ ಬಾಲಕಿ ದುರಂತ ಅಂತ್ಯ!

ಈ ಘಟನೆ ಜನವರಿ 15ರಂದು ಬೆಳಗ್ಗೆ 5.30 ರ ಸುಮಾರಿಗೆ ಹೆಬ್ಬಗೋಡಿ ಡಿಪೋದಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗ್ತಿದೆ. ಎಂದಿನಂತೆ ಮುಂಜಾನೆ ನಮ್ಮ ಮೆಟ್ರೋ ಸಂಚರಿಸಿದೆ. ಹೆಬ್ಬಗೋಡಿ ಡಿಪೋದಿಂದ ಬೊಮ್ಮಸಂದ್ರ ಮೆಟ್ರೋ ನಿಲ್ದಾಣದತ್ತ ಸಾಗುತ್ತಿದ್ದ ವೇಳೆ ಮೂರನೇ ಡ್ರೈವರ್ಲೆಸ್ ರೈಲು ಹಳಿ ತಪ್ಪಿದೆ. ಘಟನೆ ಎಲಿವೇಟೆಡ್ ಕಾರಿಡಾರ್ ಮೇಲೆ ಸಂಭವಿಸಿದ್ದರೆ ದೊಡ್ಡ ಅನಾಹುತವಾಗುತ್ತಿತ್ತು.

ಇನ್ನು ಘಟನೆ ಬಗ್ಗೆ ಬಿಎಂಆರ್‌ಸಿಎಲ್ ಆರು ಸದಸ್ಯರ ಸತ್ಯಶೋಧನಾ ಸಮಿತಿಯನ್ನು ರಚಿಸಿ ತನಿಖೆ ಆರಂಭಿಸಿದೆ ಎನ್ನಲಾಗ್ತಿದೆ. ಆದ್ರೆ ಬಿಎಂಆರ್‌ಸಿಎಲ್‌ ಈ ಅವಘಡದ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಇದೀಗ ರೈಲಿನ ಸುರಕ್ಷತೆ ಕುರಿತು ಇದೀಗ ಪ್ರಶ್ನೆಗಳು ಉದ್ಭವಿಸಿವೆ.

Shwetha M

Leave a Reply

Your email address will not be published. Required fields are marked *