ದೆಹಲಿ, ಬೆಂಗಳೂರು ಆಯ್ತು.. ಈಗ ಮಂಗಳೂರು, ಉಡುಪಿಯಲ್ಲೂ ವಾಯುಗುಣಮಟ್ಟ ಕಳಪೆ!

ದೆಹಲಿ, ಬೆಂಗಳೂರು ಆಯ್ತು.. ಈಗ ಮಂಗಳೂರು, ಉಡುಪಿಯಲ್ಲೂ ವಾಯುಗುಣಮಟ್ಟ ಕಳಪೆ!

ರಾಜ್ಯದಲ್ಲಿ ವಾಯು ಮಾಲಿನ್ಯ ದಿನೇ ದಿನೆ ಹೆಚ್ಚಾಗುತ್ತಿದೆ. ಉಸಿರಾಡುವ ಗಾಳಿಯೇ ವಿಷವಾಗುತ್ತಿದೆ. ಬೆಂಗಳೂರು ಬಳಿಕ ಕರಾವಳಿ ಜಿಲ್ಲೆಗಳಲ್ಲೂ ವಾಯುಗುಣಮಟ್ಟ ಹದಗೆಡುತ್ತಿದೆ. ಮಂಗಳೂರು, ಉಡುಪಿಯಲ್ಲಿ ಕಳಪೆ ಏರ್‌ ಕ್ವಾಲಿಟಿ ದಾಖಲಾಗಿದೆ.

ಇದನ್ನೂ ಓದಿ: ಟೀಂ ಇಂಡಿಯಾ ಪ್ಲೇಯರ್‌ ಬಾಳಲ್ಲಿ ಬಿರುಗಾಳಿ! – 26ನೇ ವಯಸ್ಸಲ್ಲೇ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ ಮತ್ತೊಬ್ಬ ಕ್ರಿಕೆಟಿಗ!

ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕಳಪೆಯಾಗುತ್ತಿದೆ. ಇದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಮಂಗಳೂರಿನ AQI ಇನ್ನಷ್ಟು ಹದಗೆಟ್ಟಿದೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 124ಕ್ಕೆ ತಲುಪಿದೆ. ಅದಕ್ಕಿಂತ ಹೆಚ್ಚಾಗಿ ಮಂಗಳೂರಿನ ಏರ್ ಕ್ವಾಲಿಟಿ 198 ಆಗಿದೆ. ಹಲವು ದಿನಗಳಿಂದ ವಿಪರೀತ ಏರಿಕೆ ಕಾಣುತ್ತಿರುವ ಮಂಗಳೂರಿನ ಏರ್ ಕ್ವಾಲಿಟಿ ಇಂದು 200ರ ಗಡಿ ತಲುಪಿರುವುದು ಆತಂಕಕಾರಿಯಾಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ

  • ಬೆಂಗಳೂರು –124
  • ಮಂಗಳೂರು-198
  • ಮೈಸೂರು –144
  • ಬೆಳಗಾವಿ – 167
  • ಕಲಬುರ್ಗಿ-129
  • ಶಿವಮೊಗ್ಗ – 136
  • ಬಳ್ಳಾರಿ – 130
  • ಹುಬ್ಬಳ್ಳಿ- 152
  • ಉಡುಪಿ –170
  • ವಿಜಯಪುರ –119

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

Shwetha M

Leave a Reply

Your email address will not be published. Required fields are marked *