ಟೀಮ್ ಇಂಡಿಯಾಗೆ ಬಿಗ್ ಶಾಕ್ – ಪ್ರಾಕ್ಟೀಸ್ ವೇಳೆ ಮೊಹಮ್ಮದ್ ಸಿರಾಜ್‌ಗೆ ಗಾಯ

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಸೂಪರ್-8 ಸುತ್ತಿನ ಪಂದ್ಯವು ನಾಳೆ (ಫೆ.22) ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಗಾಯಗೊಂಡಿದ್ದಾರೆ. ಅಹಮದಾಬಾದ್ನಲ್ಲಿ ನಡೆದ ಅಭ್ಯಾಸ ಪಂದ್ಯದ ವೇಳೆ ಸಿರಾಜ್ ಅವರ ಕಾಲಿಗೆ ಗಾಯವಾಗಿದ್ದು, ಹೀಗಾಗಿ ಅವರು ಅರ್ಧದಲ್ಲೇ ಅಭ್ಯಾಸ ನಿಲ್ಲಿಸಿದ್ದರು.
ಇದನ್ನೂ ಓದಿ: PAK ಸೋತ್ರೆ ಫ್ಯಾನ್ಸ್ ಗೆ ಹಬ್ಬ – ಇಂಡೋ-ಪಾಕ್ ಪಂದ್ಯದಲ್ಲಿ ಚರಿತ್ರೆ
ನೆಟ್ಸ್ನಲ್ಲಿ ಸಿರಾಜ್ ಟೀಮ್ ಇಂಡಿಯಾ ಬ್ಯಾಟರ್ ಹಾರ್ದಿಕ್ ಪಾಂಡ್ಯಗೆ ಬೌಲಿಂಗ್ ಮಾಡುತ್ತಿದ್ದರು. ವೇಳೆ ಪಾಂಡ್ಯ ಹೊಡೆದ ಚೆಂಡು ನೇರವಾಗಿ ಸಿರಾಜ್ ಅವರ ಎಡಗಾಲಿನ ಮಂಡಿಗೆ ಬಡಿದಿದೆ.ಚೆಂಡು ತಗುಲಿದ ತಕ್ಷಣ ಮೊಹಮ್ಮದ್ ಸಿರಾಜ್ ನೋವಿನಿಂದ ಮೈದಾನದಲ್ಲೇ ಕುಸಿದು ಬಿದ್ದರು. ತಕ್ಷಣವೇ ಫಿಸಿಯೋಗಳು ಅವರಿಗೆ ಐಸ್ ಪ್ಯಾಕ್ ಚಿಕಿತ್ಸೆ ನೀಡಿದರು. ಇದಾಗ್ಯೂ ಅವರು ಚೇತರಿಸಿಕೊಂಡಿರಲಿಲ್ಲ. ಅಲ್ಲದೆ ನೋವಿನೊಂದಿಗೆ ಕಾಲು ಎಳೆಯುತ್ತಾ ಮೈದಾನದಿಂದ ಹೊರನಡೆದಿದ್ದಾರೆ.
ಸದ್ಯ ಮೊಹಮ್ಮದ್ ಸಿರಾಜ್ ಅವರ ಗಾಯದ ತೀವ್ರತೆಯ ಬಗ್ಗೆ ವೈದ್ಯಕೀಯ ತಂಡ ನಿಗಾ ಇರಿಸಿದ್ದು, ಫೆಬ್ರವರಿ 22 ರಂದು ಸೌತ್ ಆಫ್ರಿಕಾ ವಿರುದ್ಧ ನಡೆಯಲಿರುವ ಮಹತ್ವದ ಪಂದ್ಯಕ್ಕೆ ಅವರು ಲಭ್ಯರಿರುತ್ತಾರೆಯೇ ಎಂಬುದು ಇನ್ನು 24 ಗಂಟೆಗಳಲ್ಲಿ ನಿರ್ಧಾರವಾಗಲಿದೆ.ಅಂದಹಾಗೆ ಮೊಹಮ್ಮದ್ ಸಿರಾಜ್ ಈ ಬಾರಿಯ ಟಿ20 ವಿಶ್ವಕಪ್ಗೆ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದರು. ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದ ಹರ್ಷಿತ್ ರಾಣಾ ಗಾಯಗೊಂಡ ಪರಿಣಾಮ ಸಿರಾಜ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು.ಅದರಂತೆ ಯುಎಸ್ಎ ವಿರುದ್ಧದ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಸಿರಾಜ್ 3 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ ಅವರು ಗಾಯಗೊಂಡಿರುವ ಕಾರಣ ಬದಲಿ ಆಟಗಾರನನ್ನು ಆಯ್ಕೆ ಮಾಡಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

ನೋಡಿರಿ

