ಆಸೀಸ್ ವಿರುದ್ಧ ಮೊದಲ ಪಂದ್ಯ ಸೋತ ಭಾರತ ಮಹಿಳಾ ತಂಡ

ಆಸೀಸ್ ವಿರುದ್ಧ ಮೊದಲ ಪಂದ್ಯ ಸೋತ ಭಾರತ ಮಹಿಳಾ ತಂಡ

ಪ್ರಸ್ತುತ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ಮಹಿಳಾ ತಂಡ  ಸರಣಿಯ ಮೊದಲ ಪಂದ್ಯ ಸೋತಿದೆ. ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡ ಭಾರತ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಬ್ರಿಸ್ಬೇನ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಸ್ಮೃತಿ ಮಂಧಾನ ಮತ್ತು ಹರ್ಮನ್‌ಪ್ರೀತ್ ಕೌರ್ ಅವರ ಅರ್ಧಶತಕಗಳ ನೆರವಿನಿಂದ ಭಾರತ ತಂಡವು ಆಸ್ಟ್ರೇಲಿಯಾ ತಂಡಕ್ಕೆ 50 ಓವರ್‌ಗಳಲ್ಲಿ 215 ರನ್‌ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಆತಿಥೇಯ ತಂಡವು 4 ವಿಕೆಟ್‌ಗಳನ್ನು ಕಳೆದುಕೊಂಡು 70 ಎಸೆತಗಳು ಬಾಕಿ ಇರುವಾಗಲೇ ಜಯ ಸಾಧಿಸಿತು.

ಟಾಸ್ ಗೆದ್ದ ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆದಾಗ್ಯೂ, ಭಾರತದ ಆರಂಭ ಕಳಪೆಯಾಗಿತ್ತು. ಆರಂಭಿಕ ಆಟಗಾರ್ತಿ ಪ್ರತೀಕಾ ರಾವಲ್ ಒಂದು ರನ್ ಕೂಡ ಗಳಿಸದೆ ವಿಕೆಟ್ ಒಪ್ಪಿಸಿದರು. ನಂತರ, ಸ್ಕೋರ್ 25 ತಲುಪಿದಾಗ, ತಂಡವು ಶೆಫಾಲಿ ವರ್ಮಾ ಅವರನ್ನು ಕಳೆದುಕೊಂಡಿತು. ಮೂರನೇ ವಿಕೆಟ್ ರೂಪದಲ್ಲಿ ಜೆಮಿಮಾ ರೊಡ್ರಿಗಸ್ ಔಟ್ ಆದಾಗ ತಂಡವು 50 ರನ್‌ಗಳ ಗಡಿ ಕೂಡ ದಾಟಿರಲಿಲ್ಲ. ಹೀಗಾಗಿ ತಂಡವು 11.2 ಓವರ್‌ಗಳಲ್ಲಿ 52 ರನ್‌ಗಳಿಗೆ ಈ ಮೂರು ಪ್ರಮುಖ ವಿಕೆಟ್​ಗಳನ್ನು ಕಳೆದುಕೊಂಡಿತು.

ಇದನ್ನೂ ಓದಿ:  ಖಾಲಿ ಇರುವ ಸರ್ಕಾರಿ ಹುದ್ದೆ ಭರ್ತಿಗೆ ಆಗ್ರಹ –   ವಿದ್ಯಾಕಾಶಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಹೋರಾಟ  

ಒಂದ್ಕಡೆ ವಿಕೆಟ್‌ಗಳು ಬೀಳುತ್ತಿದ್ದಂತೆ, ಸ್ಮೃತಿ ಮಂಧಾನ ಇನ್ನೊಂದು ಇನ್ನಿಂಗ್ಸ್ ಕಟ್ಟುವ ಕೆಲಸ ಮಾಡಿದರು. ಮಧ್ಯಮ ಕ್ರಮಾಂಕದಲ್ಲಿ ಬಂದ ನಾಯಕಿ ಹರ್ಮನ್‌ಪ್ರೀತ್ ಕೌರ್, ಸ್ಮೃತಿಗೆ ಅತ್ಯುತ್ತಮ ಬೆಂಬಲ ನೀಡಿದರು. ಇವರಿಬ್ಬರ ನಡುವೆ ಉತ್ತಮ ಜೊತೆಯಾಟ ಬೆಳೆಯಲಾರಂಭಿಸಿತು. ಇದೇ ವೇಳೆ ಸ್ಮೃತಿ ಕೂಡ ತಮ್ಮ ಅರ್ಧಶತಕವನ್ನು ಪೂರೈಸಿದರಾದರೂ ತಮ್ಮ ಸ್ಕೋರ್ ಅನ್ನು ಮತ್ತಷ್ಟು ವಿಸ್ತರಿಸಲು ಸಾಧ್ಯವಾಗಲಿಲ್ಲ.

Kishor KV