ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ! – 175 ಅಂಗಡಿಗಳಿದ್ದ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ!

ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ! – 175 ಅಂಗಡಿಗಳಿದ್ದ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ!

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿಯ ಕಟ್ಟದವೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ.

ಇದನ್ನೂ ಓದಿ: ರಿಂಕು ಸಿಂಗ್‌ ತಂದೆ ಆರೋಗ್ಯ ಸ್ಥಿತಿ ಗಂಭೀರ! – ಟೀಂ ಇಂಡಿಯಾ ಕ್ಯಾಂಪ್ ತೊರೆದ ಪ್ಲೇಯರ್!

ಚಿಕ್ಕಪೇಟೆಯ ಕುಂಬಾರಪೇಟೆ ಬಳಿ ಮೂರು ಅಂತಸ್ಥಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಹಾರ್ಡ್‌ವೇರ್ ಗೋಡೌನ್‌ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅವಘಡದ ಪರಿಣಾಮವಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ದಟ್ಟ ಹೊಗೆ ಆವರಿಸಿದ್ದರಿಂದ ಅಕ್ಕಪಕ್ಕದ ನಿವಾಸಿಗಳಲ್ಲಿ ಆತಂಕ ಮೂಡಿದೆ.

ಇನ್ನು  ಮೂರು ಅಂತಸ್ತಿನ ಈ ಕಟ್ಟಡದಲ್ಲಿ ಒಟ್ಟು 175 ಅಂಗಡಿ ಮಳಿಗೆಗಳಿದ್ದವು. ಕೆಳಮಹಡಿಯಲ್ಲಿನ ಹಾರ್ಡ್‌ವೇರ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು, ಮೇಲಿನ ಅಂತಸ್ತುಗಳಿಗೆ ವ್ಯಾಪಿಸಿದೆ ಎಂದು ಹೇಳಲಾಗಿದೆ. ಕಟ್ಟಡದಲ್ಲಿ ಪ್ಲಾಸ್ಟಿಕ್, ಫ್ಯಾನ್ಸಿ ಸಾಮಗ್ರಿಗಳು, ಬಟ್ಟೆ ಹಾಗೂ ಸುಡುವಂತಹ ಇತರೆ ವಸ್ತುಗಳಿದ್ದ ಕಾರಣ ಬೆಂಕಿ ವೇಗವಾಗಿ ಹರಡಿದೆ. ನಾಲ್ಕು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಆದರೆ, ಕುಂಬಾರಪೇಟೆ ಪ್ರದೇಶದ ಕಿರಿದಾದ ರಸ್ತೆಗಳಿಂದಾಗಿ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಲು ಸವಾಲಾಗಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಕಡಿತಗೊಳಿಸಲಾಗಿದೆ.

Shwetha M