‘ಮಹಾತ್ಮ ಗಾಂಧೀಜಿ ಪಾಕಿಸ್ತಾನದ ಪಿತಾಮಹ’ – ಶಾಸಕ ಬಸನಗೌಡ ಯತ್ನಾಳ ವಿರುದ್ಧ FIR

‘ಮಹಾತ್ಮ ಗಾಂಧೀಜಿ ಪಾಕಿಸ್ತಾನದ ಪಿತಾಮಹ’ – ಶಾಸಕ ಬಸನಗೌಡ ಯತ್ನಾಳ ವಿರುದ್ಧ FIR

ಪ್ರಚೋದನಕಾರಿ ಭಾಷಣ ಆರೋಪದಲ್ಲಿ ಶಾಸಕ ಬಸನಗೌಡ ಯತ್ನಾಳ ವಿರುದ್ಧ ಜಿಲ್ಲೆಯ ಗುರುಮಠಕಲ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಗುರುಮಠಕಲ್ ಪಟ್ಟಣದಲ್ಲಿ ಫೆಬ್ರವರಿ 21ರಂದು ನಡೆದ ಶಿವಾಜಿ ಜಯಂತಿ ಬಹಿರಂಗ ಸಭೆಯಲ್ಲಿ ಯತ್ನಾಳ್‌ ಅವರು ಒಂದು ಸಮುದಾಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ, ಭಾಷಣದಲ್ಲಿ ಮಹಾತ್ಮ ಗಾಂಧಿ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಭೆಯಲ್ಲಿ ಮಾತನಾಡಿದ್‌ ಯತ್ನಾಳ್‌ ಅವರು, ಈ ದೇಶದಲ್ಲಿ ಇರಬೇಕಾದರೆ ಒಂದೇ ಮಾತರಂ ಹೇಳಬೇಕು, ಮಹಾತ್ಮ ಗಾಂಧೀಜಿ ಅವರು ಪಾಕಿಸ್ತಾನದ ಪಿತಾಮಹ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಶಾಸಕ ಬಸನಗೌಡ ಯತ್ನಾಳ ಅವರ ಹೇಳಿಕೆಗಳು ಸಮಾಜದ ಶಾಂತಿ ಹಾಗೂ ಸೌಹಾರ್ದತೆಗೆ ಧಕ್ಕೆ ತರುವಂತಿವೆ ಎಂದು ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 196, 299, 302, 352 ಹಾಗೂ 353 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

 ಇದನ್ನೂ ಓದಿ: ಮೈದಾನದಲ್ಲೇ ರಣಜಿ ಆಟಗಾರರ ಜಗಳ – 2ನೇ ದಿನ 6 ವಿಕೆಟ್ ನಷ್ಟಕ್ಕೆ 527 ರನ್ ಗಳಿಸಿದ J & K

ಗಾಂಧೀಜಿಯನ್ನು ಭಾರತದ ರಾಷ್ಟ್ರಪಿತ ಎಂದು, ಜವಾಹರಲಾಲ್ ನೆಹರುರನ್ನು ಮೊದಲ ಪ್ರಧಾನಿ ಎಂದು ನಾನು ಒಪ್ಪಿಕೊಳ್ಳಲ್ಲ. ನಮ್ಮ ದೇಶದ ಮೊದಲ ಪ್ರಧಾನಿ ನೇತಾಜಿ ಸುಭಾಷ್ ಚಂದ್ರ ಬೋಸ್. ಕಾಶ್ಮೀರಕ್ಕೆ 370 ಕೊಟ್ಟಿದ್ದು ಯಾಕೆಂದರೆ ಫಾರೂಕ್ ಅಬ್ದುಲ್ಲಾ ಜತೆ ನೆಹರುಗೆ ಲಿಂಕ್ ಇತ್ತು. ಇವರೆಲ್ಲರೂ ದೇಶದ ಸ್ವಾತಂತ್ರ್ಯಕ್ಕಾಗಿ ಉಪವಾಸ ಮಾಡುತ್ತಿರಲಿಲ್ಲ. ಕೋಲ್ಕತ್ತಾದಿಂದ 555 ಸಿಗರೇಟ್ ತರಿಸಿಕೊಂಡು ಸೇದುತ್ತಿದ್ದರು. ಗಾಂಧಿ ಚರಕ ತಿರುಗಿಸಿದ್ದರಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿತ್ತಾ? ಹಾಗಿದ್ದರೆ ನಾನು ಚರಕ ತಿರುಗಿಸುತ್ತೇನೆ, ನಾಳೆ ರಾಜ್ಯದ ಸಿಎಂ ಆಗ್ತೀನಾ? ಎಂದು ಯತ್ನಾಳ್​​ ಪ್ರಶ್ನಿಸಿದ್ದರು. ಅಲ್ಲದೆ ಭಾರತದಲ್ಲಿರುವ ಮುಸ್ಲಿಮರು ಒಂದೇ ಮಾತರಂ ಹೇಳಬೇಕು. ಇಲ್ಲದಿದ್ದರೆ ಗಾಂಧಿ ಕೊಟ್ಟ ಪಾಕಿಸ್ತಾನಕ್ಕೆ ಹೋಗಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

Kishor KV

Leave a Reply

Your email address will not be published. Required fields are marked *