ಮಳೆ, ಹಿಮಪಾತಕ್ಕೆ ಬೆಚ್ಚಿದ ಉತ್ತರ ಭಾರತ – ಅದೆಷ್ಟು ರಾಜ್ಯಗಳಲ್ಲಿ ಆತಂಕ..?
ಉತ್ತರ ಭಾರತದಲ್ಲಿ ಮಳೆ ಹಾಗೂ ಭಾರೀ ಹಿಮಪಾತದಿಂದ ಜನ ಆತಂಕಕ್ಕೀಡಾಗಿದ್ದಾರೆ. ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್ನಲ್ಲಿ ಜನವರಿ 22ರವರೆಗೆ ಸಾಧಾರಣ ಮಳೆ ಮತ್ತು ಹಿಮಪಾತ ಉಂಟಾಗಲಿದೆ.
ಹಿಮಪಾತದ ಭಯ ಒಂದೆಡೆಯಾದ್ರೆ ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೇ, ಮುಂದಿನ 48 ಗಂಟೆಗಳ ಕಾಲ ಹಿಮಾಚಲ ಪ್ರದೇಶದ ಹೆಚ್ಚಿನ ಪ್ರದೇಶಗಳಲ್ಲಿ ಭಾರೀ ಹಿಮಪಾತ ಮತ್ತು ಮಳೆಯ ಮುನ್ಸೂಚನೆ ನೀಡಲಾಗಿದೆ.
ಇದನ್ನೂ ಓದಿ : ಇನ್ನೂ ಒಂದು ವಾರ ರಾಜ್ಯದಲ್ಲಿ ವಿಪರೀತ ಚಳಿ – ಹವಾಮಾನ ಇಲಾಖೆ ಮುನ್ಸೂಚನೆ
ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್ನಲ್ಲಿ ಜನವರಿ 22ರವರೆಗೆ ಮಳೆ ಮತ್ತು ಹಿಮಪಾತ ಉಂಟಾಗಲಿದೆ. ಪಂಜಾಬ್, ಹರಿಯಾಣ, ಚಂಡೀಗಢ, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಜನವರಿ 23-26ರ ಅವಧಿಯಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ದೆಹಲಿಯಲ್ಲಿ ಜನವರಿ 23ರಿಂದ 25ರವರೆಗೆ ಮಳೆ ಬೀಳುವ ಸಾಧ್ಯತೆ ಇದೆ. ಒಡಿಶಾ, ಅಸ್ಸಾಂ, ಮೇಘಾಲಯ ಮತ್ತು ತ್ರಿಪುರಾದ ಹಲವು ಪ್ರದೇಶಗಳಲ್ಲಿ ಜನವರಿ 23ರ ವೇಳೆಗೆ ದಟ್ಟವಾದ ಮಂಜು ಆವರಿಸುವ ಸಾಧ್ಯತೆಯಿದೆ.
ವಾಯುವ್ಯ ಭಾರತದ ಸೀವ್ರಾಲ್ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸುಮಾರು 2 ಡಿಗ್ರಿ ಸೆಲ್ಸಿಯಸ್ಗೆ ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಮಧ್ಯಪ್ರದೇಶದಲ್ಲಿ ಕನಿಷ್ಠ ತಾಪಮಾನದಲ್ಲಿ 3ರಿಂದ 5 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ. ಮುಂದಿನ ವಾರ 5 ದಿನಗಳ ಕಾಲ ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಲಾಹೌಲ್-ಸ್ಪಿತಿ, ಕುಲು, ಕಿನ್ನೌರ್ ಮತ್ತು ಚಂಬಾದ 3ರಿಂದ 4 ಜಿಲ್ಲೆಗಳಲ್ಲಿ 5 ಸೆಂ.ಮೀ ಹಿಮಪಾತ ದಾಖಲಾಗಿದೆ.