ದಿ ಕೇರಳ ಸ್ಟೋರಿ 2 ಬಿಡುಗಡೆಗೆ ಬ್ರೇಕ್ ಹಾಕಿದ ಕೇರಳ ಹೈಕೋರ್ಟ್

ದಿ ಕೇರಳ ಸ್ಟೋರಿ 2 ಬಿಡುಗಡೆಗೆ ಬ್ರೇಕ್ ಹಾಕಿದ ಕೇರಳ ಹೈಕೋರ್ಟ್

ದಿ ಕೇರಳ ಸ್ಟೋರಿ 2 ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ ನೀಡಿದೆ. ಈ ಸಿನಿಮಾದ ಟೀಸರ್ ವಿವಾದ ಸ್ವರೂಪ ಪಡೆದುಕೊಂಡಿತ್ತು. ಒತ್ತಾಯಪೂರ್ವಕವಾಗಿ ಗೋಮಾಂಸ ಸೇವನೆ ಮಾಡಿಸುತ್ತಿರುವ ದೃಶ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಈ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಇದನ್ನೂ ಓದಿ: ಏಜ್‌ ಈಸ್‌ ಜಸ್ಟ್‌ ಎ ನಂಬರ್‌! – ಯುವಕರನ್ನೂ ನಾಚಿಸುವಂತಿದೆ 90 ವರ್ಷದ ಅಜ್ಜಿ ಕಾರ್‌ ಡ್ರೈವಿಂಗ್‌!

ದಿ ಕೇರಳ ಸ್ಟೋರಿ 2: ಗೋಸ್ ಬಿಯಂಡ್’ ಚಿತ್ರದ ಟ್ರೇಲರ್ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಹಲವು ರಾಜಕೀಯ ನಾಯಕರು ಸಹ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಸಿನಿಮಾ ರಾಜಕೀಯ ಅಜೆಂಡಾವನ್ನು ಒಳಗೊಂಡಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ಸಿನಿಮಾವನ್ನು ರಾಜ್ಯದಲ್ಲಿ ಕೋಮು ಸಾಮರಸ್ಯವನ್ನು ಕದಡುವ ಉದ್ದೇಶದಿಂದ ಪ್ರಚಾರ ಮಾಡಲು ನಿರ್ಮಿಸಲಾಗಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಅಸಮಾಧಾನ ಹೊರಹಾಕಿದರು. ಇನ್ನು ಫೆಬ್ರವರಿ 26ರ ಗುರುವಾರ ಕೇರಳ ಹೈಕೋರ್ಟ್ ವಿವಾದಾತ್ಮಕ ಚಿತ್ರ ‘ದಿ ಕೇರಳ ಸ್ಟೋರಿ 2’ ಬಿಡುಗಡೆಗೆ ತಡೆ ನೀಡಿದೆ. ಸಿಬಿಎಫ್‌ಸಿ ಚಿತ್ರವನ್ನು ಬಿಡುಗಡೆ ಮಾಡಲು ನೀಡಿದ ಅನುಮೋದನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರು ಮಧ್ಯಂತರ ಆದೇಶವನ್ನು ತಡೆಹಿಡಿದಿದ್ದಾರೆ.

ಕೇರಳ ಸ್ಟೋರಿ 2 ಸಿನಿಮಾವು ಕೇರಳ ರಾಜ್ಯದ ವಾಸ್ತವಾಂಶವನ್ನು ತಪ್ಪಾಗಿ ಪ್ರತಿನಿಧಿಸುತ್ತಿದೆ ಮತ್ತು ಇದು ಕೇರಳದ ಕೋಮು ಸಾಮರಸ್ಯವನ್ನು ಭಂಗಗೊಳಿಸಬಹುದು ಎಂದು ಅರ್ಜಿದಾರರು ವಾದಿಸಿದ್ದರು. ಇದೀಗ ವಿಚಾರಣೆಯಲ್ಲಿ ಈ ಸಿನಿಮಾದ ಬಿಡುಗಡೆಯ ದಿನಾಂಕವನ್ನು ಮುಂದಕ್ಕೆ ಹಾಕುವಂತೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ. ಫೆಬ್ರವರಿ 27ರಂದು ದಿ ಕೇರಳ ಸ್ಟೋರಿ 2 ಚಿತ್ರವನ್ನು ರಿಲೀಸ್ ಮಾಡುವುದಕ್ಕೆ ಸಿನಿಮಾ ತಂಡ ಮುಂದಾಗಿತ್ತು. ಆದರೆ ಇದೀಗ ಸಿನಿಮಾ ತಂಡಕ್ಕೆ ಭಾರೀ ಮುಖಭಂಗವಾಗಿದೆ. ಕೇರಳದಲ್ಲಿ ಈ ಸಿನಿಮಾದ ಟೀಸರ್​​ಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ಈ ಚಿತ್ರಕ್ಕೆ ಪ್ರಮಾಣಪತ್ರ ನೀಡಿರುವ ಸೆನ್ಸಾರ್ ಮಂಡಳಿಯ ಕ್ರಮವನ್ನು ಪ್ರಶ್ನಿಸಿ ಹಲವರು ಕೋರ್ಟ್ ಮೊರೆ ಹೋಗಿದ್ದರು.

Kishor KV

Leave a Reply

Your email address will not be published. Required fields are marked *