ಇರಾನ್‌ – ಇಸ್ರೇಲ್‌ ವಾರ್..‌ ಗಲ್ಫ್‌ ರಾಷ್ಟ್ರಗಳಲ್ಲಿ ಸಿಲುಕಿದ ಕನ್ನಡಿಗರ ನೆರವಿಗೆ 24*7 ಹೆಲ್ಪ್‌ಲೈನ್!  

ಇರಾನ್‌ – ಇಸ್ರೇಲ್‌ ವಾರ್..‌ ಗಲ್ಫ್‌ ರಾಷ್ಟ್ರಗಳಲ್ಲಿ ಸಿಲುಕಿದ ಕನ್ನಡಿಗರ ನೆರವಿಗೆ 24*7 ಹೆಲ್ಪ್‌ಲೈನ್!  

ಇರಾನ್‌ ಹಾಗೂ ಇಸ್ರೇಲ್‌ ನಡುವೆ ಸಂಘರ್ಷ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ಯುದ್ಧ ಪೀಡಿತ ಪ್ರದೇಶಗಳಲ್ಲಿ ಈಗ ಕನ್ನಡಿಗರು ಕೂಡ ಸಿಲುಕಿದ್ದಾರೆ. ಇದೀಗ ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗಾಗಿ ಸರ್ಕಾರದ ಸೂಚನೆಯಂತೆ ರಾಜ್ಯ ತುರ್ತು ಕಾರ್ಯಾಚರಣಾ ಕೇಂದ್ರ(ಎಸ್‌ಇಒಸಿ) ಮತ್ತು ಎಲ್ಲಾ ಜಿಲ್ಲೆಗಳ ತುರ್ತು ಕಾರ್ಯಾಚರಣಾ ಕೇಂದ್ರಗಳು (ಡಿಇಒಸಿ) ದಿನದ 24 ಗಂಟೆಯೂ ಕಾರ್ಯನಿರ್ವಹಣೆ ಆರಂಭಿಸಲಾಗಿದೆ.

ಇದನ್ನೂ ಓದಿ: ಇಸ್ರೇಲ್‌, ಇರಾನ್‌ ಯುದ್ಧ – ವಿಮಾನ ರದ್ದು, ಸಂಕಷ್ಟದಲ್ಲಿ ಪ್ರಯಾಣಿಕರು

ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿತ್ತು. ಇದ್ರ ಬೆನ್ನಲ್ಲೇ ರಾಜ್ಯ ಸರ್ಕಾರ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದೆ. ಈ ಸಂಬಂಧ ರಾಜ್ಯ ಸರ್ಕಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಇರಾನ್‌ ಮತ್ತು ಇಸ್ರೇಲ್‌ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದ ಹಲವು ದೇಶಗಳು ತಮ್ಮ ವಾಯುಪ್ರದೇಶವನ್ನು ಬಂದ್‌ ಮಾಡಿವೆ. ಪರಿಣಾಮ ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆಗಳಿಗೆ ಅಡ್ಡಿಯಾಗಿದೆ. ಇದರಿಂದ ಕರ್ನಾಟಕ ಸೇರಿ ನಮ್ಮ ದೇಶದ ವಿವಿಧ ರಾಜ್ಯಗಳ ಸಾಕಷ್ಟು ಸಂಖ್ಯೆ ಪ್ರಯಾಣಿಕರು ಮಧ್ಯಪ್ರಾಚ್ಯ ದೇಶಗಳಲ್ಲಿ ಅದರಲ್ಲೂ ವಿಶೇಷವಾಗಿ ಯುಎಇ (ದುಬೈ) ನಲ್ಲಿ ಸಿಲುಕಿಕೊಂಡಿದ್ದಾರೆ. ಅವರ ನೆರವಿಗಾಗಿ ಈ ಕೇಂದ್ರಗಳು ದಿನದ 24 ಗಂಟೆಯೂ ಕಾರ್ಯಾರಂಭಿಸಿವೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಸಾರ್ವಜನಿಕರಿಂದ ಬರುವ ಕರೆ, ಮಾಹಿತಿ ಆಧರಿಸಿ ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ಮಾಹಿತಿಯನ್ನು ವಿದೇಶಾಂಗ ಸಚಿವಾಲಯ ಮತ್ತು ದೆಹಲಿ ಕರ್ನಾಟಕ ಭವನದ ಆಯುಕ್ತರ ನೇತೃತ್ವದ ತಂಡಕ್ಕೆ ರವಾನಿಸಿ ಅವರ ರಕ್ಷಣೆ ಹಾಗೂ ವಾಪಸ್‌ ಕರೆತರಲು ಅಗತ್ಯ ನೆರವಿಗೆ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳ ನಿರ್ದೇಶನದಂತೆ, ದುಬೈ ಸೇರಿ ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ನಮ್ಮ ರಾಜ್ಯದ ನಾಗರಿಕರಿಗೆ ನೆರವಾಗಲು ರಾಜ್ಯ ಮತ್ತು ಎಲ್ಲಾ ಜಿಲ್ಲಾ ತುರ್ತು ಕಾರ್ಯಾಚರಣಾ ಕೇಂದ್ರಗಳನ್ನು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಸೂಚಿಸಿದ್ದು ಅದರಂತೆ ಅವು ಕಾರ್ಯಾರಂಭಿಸಿವೆ. ಈ ಕೇಂದ್ರಗಳಲ್ಲಿ ರಾಯಭಾರ ಕಚೇರಿಗಳ ಸಹಾಯವಾಣಿ ಸಂಖ್ಯೆಗಳು ಮತ್ತು ಸಲಹೆಗಳನ್ನು ಸಾರ್ವಜನಿಕ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಜೊತೆಗೆ ಎಕ್ಸ್‌, ವಾಟ್ಸ್‌ಅಪ್‌ ಸೇರಿ ಇತರೆ ಸಾಮಾಜಿಕ ಜಾಲತಾಣದ ಮೂಲಕ ಪ್ರಸಾರ ಮಾಡಲಾಗಿದೆ.

ಇನ್ನು ಪರಿಸ್ಥಿತಿ ಮೇಲ್ವಿಚಾರಣೆ ಮೂಲಕ ಕೇಂದ್ರ ನಾಗರಿಕ ವಿಮಾನ ಯಾನ ಸಚಿವಾಲಯ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳ ಭಾರತೀಯ ರಾಯಭಾರ ಕಚೇರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕಾಲಕಾಲಕ್ಕೆ ಅವರಿಂದ ಬರುವ ನಿರ್ದೇಶನ, ಸೂಚನೆಗಳ ಅನುಸಾರ ಸಂಕಷ್ಟದಲ್ಲಿರುವವರ ನೆರವಿಗೆ ಈ ಕೇಂದ್ರಗಳ ಸಿಬ್ಬಂದಿ ಕ್ರಮ ವಹಿಸಲಿದ್ದಾರೆ. ಜೊತೆಗೆ ದೆಹಲಿಯ ಕರ್ನಾಟಕ ಭವನದ ಆಯುಕ್ತರು ನೇತೃತ್ವದ ತಂಡವನ್ನು ಕೂಡ ಸಮನ್ವಯಕ್ಕಾಗಿ ಸಕ್ರಿಯಗೊಳಿಸಲಾಗಿದೆ.

ಇನ್ನು, ಮಧ್ಯಪ್ರಾಚ್ಯ ದೇಶಗಳಲ್ಲಿ ವಾಸಿಸುವ ಕರ್ನಾಟಕದ ಜನರು ಸ್ಥಳೀಯ ಸರ್ಕಾರಗಳು ನೀಡುವ ಮಾರ್ಗಸೂಚಿಗಳು ಮತ್ತು ಸಲಹೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅವರ ಸಹಾಯವಾಣಿ ಸಂಖ್ಯೆಗಳ ಮೂಲಕ ಆಯಾ ಭಾರತೀಯ ರಾಯಭಾರ ಕಚೇರಿಗಳನ್ನು ಸಂಪರ್ಕಿಸಲು ಮತ್ತು ಸಾರಥಿ ಸಹಾಯ ಪೋರ್ಟಲ್ ಮತ್ತು ಸಂಬಂಧಪಟ್ಟ ದೂತಾವಾಸಗಳ ಇತರ ಅಧಿಕೃತ ಪೋರ್ಟಲ್‌ಗಳಲ್ಲಿ ತಮ್ಮ ಮಾಹಿತಿ ನೋಂದಾಯಿಸುವಂತೆ ಸೂಚಿಸಲಾಗಿದೆ.

ಸಹಾಯವಾಣಿ ಸಂಖ್ಯೆ

ಕರ್ನಾಟಕ ರಾಜ್ಯ ತುರ್ತು ಕಾರ್ಯಾಚರಣಾ ಕೇಂದ್ರದ ಸಹಾಯವಾಣಿ- 080-22340676, 080-22253707 (ಶಾರ್ಟ್‌ ಕೋಡ್‌ 1070).

ಇಸ್ರೇಲ್: +972-54-7520711

ಇರಾನ್: +98 9128109115, +98912 810 9109, +98 912 8109102, +98993 217 9359

ಸೌದಿ ಅರೇಬಿಯಾ

ರಿಯಾಧ್‌: 00-966-11-4884697 | 00-966-542126748 (WhatsApp) 800 247 1234 (Toll-Free)

ಜೆಡ್ಡಾ: WhatsApp: +966536209704, Landline: 00966 126648660/00966122614093, Mobile: +966 556122301 | Toll-Free: 800 244 0003

ಯುಎಇ: Toll-Free: 800-46342 | WhatsApp: +9715430 90571

ಕತಾರ್: 00974-55647502

ಬಹ್ರೇನ್: 00973-39418071

ಜೋರ್ಡಾನ್: 00962-770 422 276

ಒಮಾನ್: Toll-Free: 8007 1234 | WhatsApp: +9689828 2270

ಇರಾಕ್‌: +964 771 651 1185 (English & Hindi), +964 770 444 4899 (Arabic)

ಕುವೈತ್: +96565501946

ಪ್ಯಾಲೆಸ್ತೀನ್: +970 592916418

Shwetha M

Leave a Reply

Your email address will not be published. Required fields are marked *