ನಿರೀಕ್ಷಣಾ ಜಾಮೀನು ಅರ್ಜಿ ಮೂಂದೂಡಿಕೆ – ಅರೆಸ್ಟ್ ಆಗ್ತಾರಾ ಮಲ್ಲಿಕಾರ್ಜುನ ಮುತ್ಯಾ ?

ಪೋಕ್ಸೊ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಮಲ್ಲಿಕಾರ್ಜುನ ಮುತ್ಯಾ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮೂಂದೂಡಿಕೆಯಾಗಿದೆ. ನಿರೀಕ್ಷಣಾ ಜಾಮೀನು ಅರ್ಜಿಗೆ ಸರಕಾರದ ಪರ ವಕೀಲರದಿಂದ ಆಕ್ಷೇಪಣೆ ಹಿನ್ನೆಲೆಯಲ್ಲಿ ಮಾರ್ಚ್ 6ಕ್ಕೆ ವಿಚಾರಣೆಯನ್ನು ಯಾದಗಿರಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಮುಂದೂಡಿದೆ.ಮತ್ತೊಂದೆಡೆ ಈ ಪ್ರಕರಣದಲ್ಲಿ ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಕಲಬುರಗಿ ಪೀಠಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ಮಲ್ಲಿಕಾರ್ಜುನ ಮುತ್ಯಾ ಪರ ವಕೀಲರು ವಾಪಸ್ ಪಡೆದಿದ್ದಾರೆ.
ಇನ್ನು ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿ ಬಾಲಕಿಯನ್ನು ಗುರುತಿಸಬಹುದಾದ ಯಾವುದೇ ಮಾಹಿತಿಯನ್ನು ಮತ್ತು ಬಾಲಕಿಯ ಕುಟುಂಬ ಸದಸ್ಯರನ್ನು ಒಳಗೊಂಡ ಫೋಟೊ ಹಾಗೂ ಸಂಗ್ರಹಿಸಿ ಇಟ್ಟುಕೊಂಡ ವಿಡಿಯೊ ಕ್ಲಿಪಿಂಗ್ ಸಾಮಾಜಿಕ ಜಾಲತಾಣಗಳಲ್ಲಿ ಅಪಲೋಡ್ ಮಾಡುವುದಾಗಲಿ ಮತ್ತು ಬೇರೆಯವರಿಗೆ ಶೇರ್ ಮಾಡಿದ್ದಲ್ಲಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪೃಥ್ವಿಕ್ ಶಂಕರ್ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಟೀಂ INDಗೆ RO-KO ರಿಟರ್ನ್ಸ್ – 15 ಪಂದ್ಯದ ಮೇಲೆ ನಿಂತ ರೋಹಿತ್, ಕೊಹ್ಲಿ ODI ವಿಶ್ವಕಪ್ ಭವಿಷ್ಯ
ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಬಾಲಕಿಯೊಂದಿಗೆ ಅನುಚಿತ ವರ್ತನೆ ಆರೋಪದಡಿ ಗೋಗಿ ಪೊಲೀಸ್ ಠಾಣೆ ಗುನ್ನೆ ನಂ:25/2026 ಕಲಂ 75(2), ಬಿ.ಎನ್.ಎಸ್ ಕಾಯ್ದೆ-2023 ಮತ್ತು ಕಲಂ 12 ಪೋಕ್ಸೊ ಆಕ್ಟ್-2012 ಪ್ರಕಾರ ಪ್ರಕರಣ ದಾಖಲಾಗಿ, ತನಿಖೆ ನಡೆಯುತ್ತಿದೆ. ಹೀಗಾಗಿ ಸಾರ್ವಜನಿಕರು ಈ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ಪೋಟೊ ಅಥವಾ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಾದ ವಾಟ್ಸ್‌ಆ್ಯಪ್, ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸೇರಿ ಇನ್ನಿತರೆ ಕಡೆಗಳಲ್ಲಿ ಹಂಚಿಕೊಂಡಲ್ಲಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿದ್ದಾರೆ.

ನೋಡಿರಿ

