ಬಜೆಟ್ ಅಧಿವೇಶನದ ನಡುವೆ ಔತಣಕೂಟ – ಡಿನ್ನರ್ ಮೀಟಿಂಗ್ ಕರೆದ ಡಿಸಿಎಂ ಡಿ ಕೆ ಶಿವಕುಮಾರ್

ಬಜೆಟ್ ಅಧಿವೇಶನದ ನಡುವೆ ಔತಣಕೂಟ – ಡಿನ್ನರ್ ಮೀಟಿಂಗ್ ಕರೆದ ಡಿಸಿಎಂ ಡಿ ಕೆ ಶಿವಕುಮಾರ್

ಸರ್ಕಾರ ಬಜೆಟ್ ಅಧಿವಶೇನದ ಸಿದ್ಧತೆಯಲ್ಲಿದೆ. ಇದರ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಮಾತ್ರ ಕುರ್ಚಿ ಪಾಲಿಟಿಕ್ಸ್ ನಲ್ಲಿ ಮುಳುಗಿದ್ದಾರೆ ಎಂದು ಹೇಳಲಾಗುತ್ತಿದೆ. ಯಾಕೆಂದರೆ ಬಜೆಟ್ ಅಧಿವೇಶನದ ನಡುವೆ ಮಾರ್ಚ್​ 10ರಂದು ಡಿಸಿಎಂ ಡಿಕೆ ಶಿವಕುಮಾರ್ ಔತಣಕೂಟ ಆಯೋಜನೆ ಮಾಡಿದ್ದಾರೆ.

ಇದನ್ನೂ ಓದಿ:ರಶ್ಮೀಕಾ ಜೊತೆ ಸೇರಿ ವಿಜಯ್ ದೇವರಕೊಂಡ ಗಿಫ್ಟ್ – 44 ಸರ್ಕಾರಿ ಶಾಲೆಗಳ ಮಕ್ಕಳಿಗೆ ವಿದ್ಯಾರ್ಥಿ ವೇತನ ಘೋಷಣೆ

ರಾಜ್ಯ ಸರ್ಕಾರದಲ್ಲಿ ಬದಲಾವಣೆಯ ಕೂಗು ಕೇಳಿಬರುತ್ತಲೇ ಇದೆ. ಅದರಲ್ಲೂ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆ ಜೋರಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಡಿಸಿಎಂ ಡಿಕೆ ಶಿವಕುಮಾರ್  ಡಿನ್ನರ್​ ಮೀಟಿಂಗ್ ಕರೆದಿದ್ದಾರೆ ಎನ್ನಲಾಗಿದೆ. ಮಾರ್ಚ್​ 10ರಂದು ಡಿಕೆಶಿ ಡಿನ್ನರ್​ ಮೀಟಿಂಗ್ ಕರೆದಿದ್ದಾರೆ. ಕಾಂಗ್ರೆಸ್​​ನ ಶಾಸಕರಿಗಾಗಿ ಡಿಸಿಎಂ ಡಿಕೆ ಶಿವಕುಮಾರ್​ ಅವರು ಔತಕೂಟ ಆಯೋಜನೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಬಣದ ಎಲ್ಲಾ ಶಾಸಕರನ್ನು ಕೂಡ ಈ ಔತಣ ಕೂಟಕ್ಕೆ ಕರೆಯುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಈ ಹಿಂದೆ ಬ್ರೇಕ್​ಫಾಸ್ಟ್ ಮೀಟಿಂಗ್ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದ ಸಿಎಂ-ಡಿಸಿಎಂ ಈಗಲೂ ಅದೇ ತಂತ್ರದ ಮೊರೆ ಹೋಗಿದ್ದಾರಾ ಎನ್ನುವ ಪ್ರಶ್ನೆ ಕೂಡ ಮೂಡಿದೆ. ಡಿಕೆಶಿ ಆಯೋಜಿಸಿರುವ ಡಿನ್ನರ್​ ಮೀಟಿಂಗ್​​ಗೆ ಸಿಎಂ ಸಿದ್ದರಾಮಯ್ಯ ಅವರನ್ನ ಕೂಡ ಕರೆಯುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ನಾಯಕತ್ವ ಬದಲಾವಣೆ ಬಗ್ಗೆ ಸಚಿವರು ಹಾಗೂ ಶಾಸಕರು ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿರುವ ಹೊತ್ತಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಡಿನ್ನರ್​ ಮೀಟಿಂಗ್​ಗೆ ಕರೆದಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.

Sulekha

Leave a Reply

Your email address will not be published. Required fields are marked *