16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ- ಸಾರಿಗೆ ನೌಕರರ ಪರ ನಿಂತ ಸರ್ಕಾರ

ರಾಜ್ಯದಲ್ಲಿ ಅತಿ ಹೆಚ್ಚು ಹಾಗೂ ದೇಶದಲ್ಲಿ ಎರಡನೇ ಅತಿ ಹೆಚ್ಚು ಬಜೆಟ್ ಮಂಡನೆ ಮಾಡುವ ಮೂಲಕ ಸಿದ್ದರಾಮಯ್ಯ ದಾಖಲೆ ಬರೆದಿದ್ದಾರೆ. ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಏನಿದೆ ಎಂಬ ಹೈಲೆಟ್ಸ್ ಇಲ್ಲಿದೆ.
ಇದನ್ನೂ ಓದಿ:ದಾಖಲೆಯ ಬಜೆಟ್ ಮಂಡನೆಯಲ್ಲಿ ರೇಷ್ಮೆ ಪಂಚೆ ಉಟ್ಟು ಸಿಎಂ ಸಿದ್ದು ಮಿಂಚಿಂಗ್ – 800 ಕರ್ನಾಟಕ ಪಬ್ಲಿಕ್ ಶಾಲೆ ಘೋಷಣೆ
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ
ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ ಮಾಡಲಾಗಿದೆ. ಮಕ್ಕಳ ಹಿತರಕ್ಷಣೆ ದೃಷ್ಟಿಯಿಂದ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಇನ್ಮುಂದೆ ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳು ಸೋಷಿಯಲ್ ಮೀಡಿಯಾ ಬಳಸುವಂತಿಲ್ಲ. ವಿದ್ಯಾರ್ಥಿಗಳ ಆರೋಗ್ಯಕ್ಕೆ ಒತ್ತು ನೀಡಲು ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಶಕ್ತಿ ಯೋಜನೆಗೆ 5300 ಕೋಟಿ ಮೀಸಲು
ರಾಜ್ಯದ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಈ ವರ್ಷ 5,300 ಕೋಟಿ ಮೀಸಲು ಮಾಡಲಾಗಿದೆ. ಈಗಾಗಲೇ ಶಕ್ತಿ ಯೋಜನೆಯಲ್ಲಿ ರಾಜ್ಯದಜ ಮಹಿಳೆಯರು ಪ್ರಯಾಣದ ಸೌಲಭ್ಯ ಪಡೆದುಕೊಂಡಿದ್ದಾರೆ.
ಸಾರಿಗೆ ನೌಕರರ ಪರ ನಿಂತ ಸರ್ಕಾರ
ಸಾರಿಗೆ ನೌಕರರ ವೇತನ ಪರಿಷ್ಕರಿಸಲು ನಿರ್ಣಯ ರಾಜ್ಯದ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಲಾಗಿದೆ. 1,4,2025 ರಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಿಸಲು ನಿರ್ಣಯ ಕೈಗೊಂಡಿದ್ದಾರೆ. ವೇತನ ಬಾಕಿ ಪಾವತಿಗಾಗಿ 1271 ಕೋಟಿ ಮೀಸಲು ಇಡಲಾಗಿದೆ. 1-1-2021ರಿಂದ 28-02-2023ರ ವರೆಗಿನ ವೇತನ ಬಾಕಿ ಪಾವತಿ ಬಗ್ಗೆ ತೀರ್ಮಾನಿಸಲಾಗಿದೆ.

ನೋಡಿರಿ

