ಮದ್ಯ ಪ್ರಿಯರಿಗೆ ಸಿದ್ದರಾಮಯ್ಯ ಬಜೆಟ್ ಶಾಕ್ – ಅರಣ್ಯ ಇಲಾಖೆಯಲ್ಲಿ 2000 ಹುದ್ದೆಗಳ ನೇಮಕಾತಿ

ಮದ್ಯ ಪ್ರಿಯರಿಗೆ ಸಿದ್ದರಾಮಯ್ಯ ಬಜೆಟ್ ಶಾಕ್ – ಅರಣ್ಯ ಇಲಾಖೆಯಲ್ಲಿ 2000 ಹುದ್ದೆಗಳ ನೇಮಕಾತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್‌ ಮಂಡನೆಯಲ್ಲಿ ಮದ್ಯ ಪ್ರಿಯರಿಗೆ ಶಾಕ್ ಕೊಟ್ಟಿದ್ದಾರೆ. ಆಲ್ಕೋಹಾಲ್‌ ಲೆವೆಲ್‌ ಜಾಸ್ತಿ ಇರುವಂಥಹ ಮದ್ಯದ ದರಗಳು ಏರಿಕೆಯಾಗಲಿದೆ ಎಂದು ಸಿಎಂ ಬಜೆಟ್​​ನಲ್ಲಿ ಘೋಷಿಸಲಾಗಿದೆ. ಜೊತೆಗೆ ಮದ್ಯದ ಅಂಶವಿರುವ ಪಾನೀಯಗಳಿಗೂ ಸುಂಕ ವಿಸ್ತರಣೆ ಮಾಡಲಾಗಿದೆ.

ಇದನ್ನೂ ಓದಿ:16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ- ಸಾರಿಗೆ ನೌಕರರ ಪರ ನಿಂತ ಸರ್ಕಾರ

ಏಪ್ರಿಲ್ 2026ರಿಂದ ಪಾನೀಯ ಗಳಲ್ಲಿ ಇರುವ ಮದ್ಯದ ಅಂಶವನ್ನು ಆಧಾರವಾಗಿಟ್ಟುಕೊಂಡು ಅಬಕಾರಿ ಸುಂಕ ವ್ಯವಸ್ಥೆ ಜಾರಿಗೆ ತರುವ ಬಗ್ಗೆ ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ. ಮದ್ಯಪಾನ ದುಷ್ಪರಿಣಾಮಗಳು ಹಾಗೂ ಸಮಾಜ ಮೇಲೆ ಉಂಟು ಮಾಡುವ ಹಾನಿಯ ಕಾರಣ ಜಾಗತಿಕ ಮಟ್ಟದಲ್ಲಿ ಮದ್ಯದ ಅಂಶವನ್ನು ಆಧರಿಸಿ ತೆರಿಗೆ ಪದ್ದತಿಯು Gold standard ಆಗಿದೆ ಎಂದು ಸಿಎಂ ಘೋಷಿಸಿದ್ದಾರೆ.

ಮದ್ಯದ ಅಂಶವಿರುವ ಪಾನಿಯಗಳಿಗೂ ಸುಂಕ ವಿಸ್ತರಣೆ

ಮದ್ಯದ ಅಂಶವಿರುವ ಪಾನಿಯಗಳಿಗೂ ಅಬಕಾರಿ ಸುಂಕ ವಿಸ್ತರಣೆ ಮದ್ಯದ ಅಂಶವಿರುವ ಪಾನಿಯಗಳಿಗೂ ಅಬಕಾರಿ ಸುಂಕ ವಿಸ್ತರಣೆ ಮಾಡಲಾಗಿದೆ. ಪ್ರತಿ ಲೀಟರ್‌ನಲ್ಲಿ ಮದ್ಯದ ಅಂಶದ ಆದಾರದ ಮೇಲೆ ಅಬಕಾರಿ ಸುಂಕ ನಿರ್ಧಾರ ಮಾಡಲಾಗುತ್ತದೆ ಎಂದು ಸರ್ಕಾರ ಘೋಷಣೆ ಮಾಡಿದೆ.

ಪ್ರವಾಸೋದ್ಯಮಕ್ಕೆ ಒತ್ತು ಕೊಟ್ಟ ಸಿದ್ದರಾಮಯ್ಯ

ಪ್ರವಾಸೋದ್ಯಮಕ್ಕೂ ಈ ಬಾರಿ ಬಜೆಟ್​​ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ. ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ, ವಾಯುಯಾನ ಹಾಗೂ ಜಲಸಾಹಸ ಯೋಜನೆ ಅನುಷ್ಠಾನ ಮಾಡಲಾಗಿದೆ. Sea plane ಮತ್ತು ಹೆಲಿ ಟ್ಯಾಕ್ಸಿ ,ಜೋಯ್ ರೈಡ್, ರಿವರ್ ಕ್ರೂಸ್ ಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಗದಗ -ಕಪ್ಪತ್ತಗುಡ್ಡ-ಲಕ್ಕುಂಡಿ ಪ್ರವಾಸೋದ್ಯಮ ಸರ್ಕ್ಯೂಟ್ ಅಭಿವೃದ್ಧಿ ಮತ್ತು ಮುಳ್ಳಯ್ಯನಿಗಿರಿ – ಸಿತಾಳಯ್ಯನಗಿರಿ ಕೈಮರದವರೆಗೆ ರೋಪ್ ವೇ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ.

ಅರಣ್ಯ ಇಲಾಖೆಯಲ್ಲಿ 2000 ಹುದ್ದೆಗಳ ನೇಮಕಾತಿ

ಅರಣ್ಯ ಇಲಾಖೆಯಲ್ಲಿ 2000 ಹುದ್ದೆಗಳ ನೇಮಕಾತಿ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ. ಮೈಸೂರು ಮೃಗಾಲಯ ಹಾಗೂ ಬನ್ನೇರುಘಟ್ಟ ಮೃಗಾಲಯದಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಪಿಪಿಪಿ ಮಾದರಿಯಲ್ಲಿ ಪ್ರಕೃತಿ ನಿರೂಪಣ ಕೇಂದ್ರ ಸ್ಥಾಪನೆ, ಬೆಂಗಳೂರಿನ ಮಾದಪ್ಪನಹಳ್ಳಿಯ 153 ಎಕರೆ ಪ್ರದೇಶದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣ ಜೈವಿಕ ಉದ್ಯಾನ ನಿರ್ಮಾಣ ಮಾಡಲಾಗುತ್ತದೆ ಎಂದು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ.

ಕಾರವಾರದಲ್ಲಿ ಮಲ್ಟಿ ಸ್ಪೆಷಲ್ ಹಾಸ್ಪಿಟಲ್

ಕಾರವಾರದಲ್ಲಿ 198 ಕೋಟಿ ವೆಚ್ಚದಲ್ಲಿ 450 ಬೆಡ್ ಮಲ್ಟಿ ಸ್ಪೆಷಲ್ ಹಾಸ್ಪಿಟಲ್ ಗೆ ಅನುಮೋದನೆ ನೀಡಲಾಗಿದೆ.  ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಅನ್ನೋದು ಬಹುವರ್ಷಗಳ ಬೇಡಿಕೆಯಾಗಿತ್ತು.

ಮೆಸ್ ಸಮಿತಿ ರಚನೆ ಮಾಡಲು ಮುಂದಾದ ಸರ್ಕಾರ

ವಸತಿ ನಿಲಯ, ವಸತಿ ಶಾಲೆಗಳಲ್ಲಿ ನಿರ್ವಹಣೆಗೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಲು ಸಿದ್ದು ಸರ್ಕಾರ ತೀರ್ಮಾನಿಸಿದೆ. ವಸತಿ ನಿಲಯ, ವಸತಿ ಶಾಲೆಗಳಲ್ಲಿ ಗುಣಮಟ್ಟದ ಆಹಾರ ಪೂರೈಕೆಗಾಗಿ ಮೆಸ್ ಸಮಿತಿ ರಚನೆ ಮಾಡಲು ಸರ್ಕಾರ ಮುಂದಾಗಿದೆ. ವಿದ್ಯಾರ್ಥಿಗಳ ಮುಂದಾಳತ್ವದಲ್ಲೇ ಮೆಸ್ ಸಮಿತಿ ರಚನೆ ಮಾಡಲಾಗುತ್ತಿದೆ. ಮುಂಗಡವಾಗಿ ಅಗತ್ಯ ಅನುಧಾನ ನೀಡಿ ಪಾರದರ್ಶಕತೆ ಮತ್ತು ಜವಾಬ್ದಾರಿಯುತ ವ್ಯವಸ್ಥೆ ಜಾರಿ ಮಾಡಲು ಸರ್ಕಾರ ತೀರ್ಮಾನಿಸಿದೆ.

Sulekha

Leave a Reply

Your email address will not be published. Required fields are marked *