ನಾಳೆ ರಣರೋಚಕ ವಿಶ್ವಕಪ್ ಪೈನಲ್ ಪಂದ್ಯ – ಮೋದಿ ಸ್ಪೇಡಿಯಂನಲ್ಲಿ ಭರ್ಜರಿ ಸಿದ್ಧತೆ

ಮಾರ್ಚ್ 8 ರಂದು 2026 ರ ಟಿ20 ವಿಶ್ವಕಪ್‌ನ ಫೈನಲ್ಪಂ ದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಆತಿಥೇಯ ಭಾರತ ಹಾಗೂ ನ್ಯೂಜಿಲೆಂಡ್ಮು ಖಾಮುಖಿಯಾಗುತ್ತಿವೆ. ಭಾರತ ತಂಡ ಫೈನಲ್ಗೇರಿರುವುದರಿಂದ ಕ್ರೀಡಾಂಗಣ ಅಭಿಮಾನಿಗಳಿಂದ ತುಂಬಿತುಳುಕಲಿದ್ದಾರೆ. ಹೀಗಾಗಿ ಬರುವ ಅಭಿಮಾನಿಗಳಿಗೆ ಯಾವುದೇ ತೊಂದರೆಯಾಗದಂತೆ ಮತ್ತು ಪಂದ್ಯ ಆರಂಭಕ್ಕೂ ಮುನ್ನ ಅವರಿಗೆ ವಿವಿದ ಕಾರ್ಯಕ್ರಮಗಳ ಮೂಲಕ ರಂಜಿಸುವ ಸಲುವಾಗಿ ಐಸಿಸಿ ಹಾಗೂ ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ ನಾನಾ ತಯಾರಿಗಳನ್ನು ಮಾಡಿಕೊಂಡಿದೆ. ಅದರಂತೆ ಫೈನಲ್ ಪಂದ್ಯ ಆರಂಭಕ್ಕೂ ಮುನ್ನ ಪ್ರಸಿದ್ಧ ಗಾಯಕ ಅರಿಜಿತ್ ಸಿಂಗ್, ಜನಪ್ರಿಯ ಗುಜರಾತಿ ಗಾಯಕ ಫಲ್ಗುಣಿ ಪಾಠಕ್ ಮತ್ತು ಅಂತರರಾಷ್ಟ್ರೀಯ ಪಾಪ್ ತಾರೆ ರಿಕಿ ಮಾರ್ಟಿನ್ ಪ್ರದರ್ಶನ ನೀಡಲಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಹೈಕಮಾಂಡ್ ಚಾನ್ಸ್ ಕೊಟ್ಟರೆ ಮತ್ತೆರಡು ಬಜೆಟ್ ಮಂಡನೆ ಮಾಡುತ್ತೇನೆ! – ಸಿಎಂ ಸಿದ್ದರಾಮಯ್ಯ!
ಟಿ20 ಕ್ರಿಕೆಟ್ ವಿಶ್ವಕಪ್‌ನ ಫೈನಲ್ ಪಂದ್ಯವನ್ನು ಗಮನದಲ್ಲಿಟ್ಟುಕೊಂಡು, ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ವಿಶೇಷ ವ್ಯವಸ್ಥೆಗಳನ್ನು ಮಾಡುತ್ತಿದೆ. ಅಹಮದಾಬಾದ್‌ನಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು ಗಮನದಲ್ಲಿಟ್ಟುಕೊಂಡು, ಪ್ರೇಕ್ಷಕರಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಕ್ರೀಡಾಂಗಣದ ಪೋಡಿಯಂ ಪ್ರದೇಶದಲ್ಲಿ 30 ಹೆಚ್ಚುವರಿ ನೀರಿನ ಕೌಂಟರ್‌ಗಳನ್ನು ಸ್ಥಾಪಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರಿಗೆ ನೀರು ಮತ್ತು ಇತರ ಸೌಲಭ್ಯಗಳನ್ನು ಸುಲಭವಾಗಿ ಪಡೆಯಲು ಇದನ್ನು ಯೋಜಿಸಲಾಗಿದೆ.

ನೋಡಿರಿ

