ಬೆಂಗಳೂರಿನಲ್ಲಿ ಉಸಿರಾಡುವುದೇ ಕಷ್ಟ ಕಷ್ಟ! – ಇನ್ನೂ ಕಳಪೆ ಮಟ್ಟಕ್ಕಿಳಿದ ಸಿಲಿಕಾನ್ ಸಿಟಿ ವಾಯು ಗುಣಮಟ್ಟ!

ಒಂದ್ಕಡೆ ಬಿಸಿಲಿನ ಝಳ ಹೆಚ್ಚಾಗಿದೆ. ಮತ್ತೊಂದ್ಕಡೆ ಉಸಿರಾಡುವ ಗಾಳಿಯೇ ವಿಷವಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ.
ಇದನ್ನೂ ಓದಿ: ಇರಾನ್ – ಇಸ್ರೇಲ್ ಯುದ್ದ ಎಫೆಕ್ಟ್! – ಬೆಂಗಳೂರಿಗೆ ಆಗಮಿಸಬೇಕಿದ್ದ 9, ನಿರ್ಗಮಿಸಬೇಕಿದ್ದ 10 ವಿಮಾನಗಳು ರದ್ದು
ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 174ಕ್ಕೆ ತಲುಪಿದೆ. ಕೆಲ ದಿನಗಳಿಂದ ಉಡುಪಿ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಏರ್ ಕ್ವಾಲಿಟಿ ತೀರಾ ಕಳಪೆ ಮಟ್ಟಕ್ಕೆ ಇಳಿದಿತ್ತು. ಆದರೆ ಇಂದು ಅದೇ ಉಡುಪಿ, ಮಂಗಳೂರು, ಕಲಬುರ್ಗಿ ಸೇರಿದಂತೆ ಹಲವೆಡೆಯ ವಾಯು ಗುಣಮಟ್ಟ 150ಕ್ಕಿಂತ ಹೆಚ್ಚಾಗಿದೆ. ಕಲಬುರ್ಗಿಯ AQI 151 ಇದ್ದು, 200ರ ಗಡಿ ತಲುಪುವ ಆತಂಕ ಎದುರಾಗಿದೆ. ಆದರೆ ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.
ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ
ಬೆಂಗಳೂರು –174
ಮಂಗಳೂರು-171
ಮೈಸೂರು –162
ಬೆಳಗಾವಿ – 156
ಕಲಬುರ್ಗಿ-151
ಶಿವಮೊಗ್ಗ – 176
ಬಳ್ಳಾರಿ – 156
ಹುಬ್ಬಳ್ಳಿ- 161
ಉಡುಪಿ –164
ವಿಜಯಪುರ –164
ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?
ಉತ್ತಮ- 0-50
ಮಧ್ಯಮ – 50-100
ಕಳಪೆ – 100-150
ಅನಾರೋಗ್ಯಕರ – 150-200
ಗಂಭೀರ – 200 – 300
ಅಪಾಯಕಾರಿ – 300 -500+

ನೋಡಿರಿ

