ಫೈನಲ್ ಮ್ಯಾಚ್ಗೂ ಮುನ್ನ ನನ್ನ ಅಕ್ಕ-ಭಾವ ತೀರಿಕೊಂಡರು.. ಈ ಗೆಲುವು ಅವರಿಗೆ ಅರ್ಪಣೆ – ಇಶಾನ್ ಕಿಶನ್!

ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾ 3ನೇ ಬಾರಿಗೆ ಚಾಂಪಿಯನ್ ಆಗಿದೆ. ಈ ಗೆಲುವಿಗೆ ಇಶಾನ್ ಕಿಶನ್ ಕೂಡ ಕಾರಣರಾಗಿದ್ದಾರೆ. ಟೀಂ ಇಂಡಿಯಾ ಗೆದ್ದ ಬಳಿಕ ಮಾತನಾಡಿದ ಇಶಾನ್ ಕಿಶನ್, ತಮ್ಮ ಜೀವನದ ಅತ್ಯಂತ ಕಠಿಣ ಕ್ಷಣವೊಂದನ್ನು ಹಂಚಿಕೊಂಡು ಭಾವುಕರಾಗಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಉಸಿರಾಡುವುದೇ ಕಷ್ಟ ಕಷ್ಟ! – ಇನ್ನೂ ಕಳಪೆ ಮಟ್ಟಕ್ಕಿಳಿದ ಸಿಲಿಕಾನ್ ಸಿಟಿ ವಾಯು ಗುಣಮಟ್ಟ!
ಫೈನಲ್ ಮ್ಯಾಚ್ಗೂ ಮುನ್ನ ನನ್ನ ಸಹೋದರಿ ತೀರಿಕೊಂಡಿದ್ದಾರೆ. ಅವಳಿಗೆ ನಾನು ವಿಶ್ವಕಪ್ ಗೆಲ್ಲಬೇಕೆಂಬ ತುಂಬಾ ಆಸೆಯಿತ್ತು. ಆದರೆ ಇದೀಗ ಅವಳಿಲ್ಲ. ಈ ವಿಶ್ವಕಪ್ ನಾನು ಅವಳಿಗಾಗಿ ಅರ್ಪಿಸುತ್ತೇನೆ ಎಂದು ಇಶಾನ್ ಕಿಶನ್ ಸಂತಸದ ಕ್ಷಣಗಳ ನಡುವೆ ನೋವನ್ನು ಹಂಚಿಕೊಂಡಿದ್ದಾರೆ.
ಅಂದ್ಹಾಗೆ ಇಶಾನ್ ಕಿಶನ್ ಅವರ ಕಸಿನ್ ಸಿಸ್ಟರ್ ವೈಷ್ಣವಿ ಸಿಂಗ್ ಮತ್ತು ಅವರ ಪತಿ ಮಾರ್ಚ್ 7 ರಂದು ಪಶ್ಚಿಮ ಬಂಗಾಳದ ರಾಷ್ಟ್ರೀಯ ಹೆದ್ದಾರಿ 27 ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಅಪಘಾತದ ಸಮಯದಲ್ಲಿ ಕಾರಿನಲ್ಲಿದ್ದ ಈ ದಂಪತಿಯ ಆರು ತಿಂಗಳು ಮತ್ತು ಮೂರು ವರ್ಷದ ಇಬ್ಬರು ಪುಟ್ಟ ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಟುಂಬದಲ್ಲಿ ಇಂತಹ ದೊಡ್ಡ ದುರಂತ ಸಂಭವಿಸಿದರೂ, ಇಶಾನ್ ಕಿಶನ್ ತಂಡದ ಹಿತದೃಷ್ಟಿಯಿಂದ ಫೈನಲ್ ಪಂದ್ಯವನ್ನು ಆಡಲು ನಿರ್ಧರಿಸಿದರು. ತಮ್ಮ ಸಹ ಆಟಗಾರ ಹಾರ್ದಿಕ್ ಪಾಂಡ್ಯ ಅವರು ನೀಡಿದ ಧೈರ್ಯದಿಂದಾಗಿ ಅವರು ಮೈದಾನಕ್ಕಿಳಿದರು.
ವೈಯಕ್ತಿಕ ದುಃಖದ ನಡುವೆಯೂ ಇಶಾನ್ ಕಿಶನ್ ಸ್ಫೋಟಕವಾಗಿ ಬ್ಯಾಟ್ ಬೀಸಿ 25 ಎಸೆತಗಳಲ್ಲಿ 54 ರನ್ (4 ಬೌಂಡರಿ, 4 ಸಿಕ್ಸರ್) ಗಳಿಸಿದರು. ಅಲ್ಲದೆ ಫೀಲ್ಡಿಂಗ್ನಲ್ಲಿ ಮೂರು ಅದ್ಭುತ ಕ್ಯಾಚ್ಗಳನ್ನು ಹಿಡಿದರು. ಈ ಮೂಲಕ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಪ್ರಮುಖ ಪಾತ್ರವಹಿಸಿದರು.
ಈ ಚಾಂಪಿಯನ್ ಪಟ್ಟದ ಬೆನ್ನಲ್ಲೇ ತನ್ನ ನೋವನ್ನು ಹಂಚಿಕೊಂಡ ಇಶಾನ್ ಕಿಶನ್, “ಈ ಗೆಲುವನ್ನು ನನ್ನ ಸಹೋದರಿಗೆ ಅರ್ಪಿಸುತ್ತೇನೆ. ಅವಳು ನನ್ನ ಈ ಐತಿಹಾಸಿಕ ಕ್ಷಣಗಳನ್ನು ನೋಡಬೇಕೆಂದು ಬಯಸಿದ್ದಳು. ಹೀಗಾಗಿ ಈ ಟ್ರೋಫಿಯನ್ನು ನಾನು ಸಹೋದರಿಗೆ ಅರ್ಪಿಸುವುದಾಗಿ ಇಶಾನ್ ಕಿಶನ್ ಭಾವುಕರಾದರು.

ನೋಡಿರಿ

