ಅಪ್ರಾಪ್ತ ಬಾಲಕಿ ಜೊತೆಗೆ ಅನುಚಿತವಾಗಿ ವರ್ತಿಸಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್‌!‌ – ಜಾಮೀನು ಅರ್ಜಿ ವಜಾ!

ಅಪ್ರಾಪ್ತ ಬಾಲಕಿ ಜೊತೆಗೆ ಅನುಚಿತವಾಗಿ ವರ್ತಿಸಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್‌!‌ – ಜಾಮೀನು ಅರ್ಜಿ ವಜಾ!

ಅಪ್ರಾಪ್ತ ಬಾಲಕಿ ಜೊತೆಗೆ ಅನುಚಿತವಾಗಿ ವರ್ತಿಸಿದ್ದ ಶಹಾಪುರ ತಾಲೂಕಿನ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಬೆನ್ನಲ್ಲೇ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಅರ್ಜು ಸಲ್ಲಿಸಿದ್ರು. ಆದ್ರೀಗ ಮುತ್ಯಾಗೆ ಕೋರ್ಟ್‌ ಶಾಕ್‌ ಕೊಟ್ಟಿದೆ. ಜಿಲ್ಲಾ ಪ್ರದಾನ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಲು ತಿರಸ್ಕರಿಸಿದೆ.

ಇದನ್ನೂ ಓದಿ: ಮದುವೆ ಬೇಡ ಎಂದು ತಲೆ ಬೋಳಿಸಿಕೊಂಡ ಯುವತಿ! – ಆಮೇಲೆ ಏನಾಯ್ತು?

ಅಪ್ರಾಪ್ತ ಬಾಲಕಿಯೊಂದಿಗೆಅನುಚಿತ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ತಮ್ಮ ವಿರುದ್ಧದ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ ನಡೆಸಿದ್ದ ಯಾದಗಿರಿ ಜಿಲ್ಲಾ ಪ್ರಧಾನ, ವಿಶೇಷ ಸತ್ರ ನ್ಯಾಯಾಲಯದ   ನ್ಯಾಯಾಧೀಶರಾದ ಮರಳುಸಿದ್ದರಾಧ್ಯ ಅವರು ಇಂದು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ಇದ್ರಿಂದಾಗಿ ಸ್ವಯಂ ಘೋಷಿತ ದೇವಮಾನವನಿಗೆ ಸಂಕಷ್ಟ ಎದುರಾಗಿದ್ದು, ಇದೀಗ ಜಾಮೀನಿಗಾಗಿ ಹೈಕೋರ್ಟ್​​ ಮೆಟ್ಟಿಲೇರಬೇಕಿದೆ.

ಫೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ, ಮೂರ್ನಾಲ್ಕು ದಿನದ ಬಳಿಕ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದರು.ಈ ಪ್ರಕರಣದ ತನಿಖಾಧಿಕಾರಿಯಾಗಿರುವ ಶಹಪೂರ ಸಿಪಿಐ ಶರಣಗೌಡ ನಾಮಣ್ಣವರ ಅವರು ತನಿಖೆಯನ್ನು ಚುರುಕುಗೊಳಿಸಿದ್ದು, ಈಗಾಗಲೇ ಮಲ್ಲಿಕಾರ್ಜುನ ಮುತ್ಯಾನನ್ನು ಮೊದಲ ಹಂತದ ವಿಚಾರಣೆ ಅವರ ನಾಲ್ಕು ಮೊಬೈಲ್ ಫೋನ್ ಜಪ್ತಿ ಮಾಡಿದ್ದಾರೆ. ಈ ಮೊಬೈಲ್‌ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಡಿಜಿಟಲ್ ಸಾಕ್ಷ್ಯಗಳು ಸಿಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಮೊಬೈಲ್‌ನಲ್ಲಿರುವ ಸಂದೇಶಗಳು, ಕರೆ ದಾಖಲೆಗಳು ಅಥವಾ ವಿಡಿಯೋಗಳ ಬಗ್ಗೆ ತನಿಖಾ ತಂಡವು ತಾಂತ್ರಿಕ ಪರಿಶೀಲನೆ ನಡೆಸುತ್ತಿದೆ.

ಏನಿದು ಪ್ರಕರಣ?

ಮಲ್ಲಿಕಾರ್ಜುನ ಮುತ್ಯಾ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವ ವಿಡಿಯೋ ರಾಜ್ಯಾದ್ಯಂತ ಭಾರೀ ವೈರಲ್ ಆಗಿತ್ತು. ಇದರ ಬೆನ್ನಲ್ಲಿಯೇ ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಯಾದಗಿರಿ ಜಿಲ್ಲಾಧಿಕಾರಿ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು. ಇದರ ಬೆನ್ನಲ್ಲೇ ಡಿಸಿ ಸೂಚನೆ ಮೇರೆಗೆ  ಫೆ. 25ರಂದು ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಮುತ್ಯಾ ನಾಪತ್ತೆಯಾಗಿದ್ದ. ಇನ್ನೊಂದೆಡೆ ಅವರ ಭಕ್ತರು ಹಾಗೂ ಕೋಲಿ ಸಮಾಜ ಪ್ರತಿಭಟನೆ ನಡೆಸಿದ್ದು, ಮುತ್ಯಾ ವಿರುದ್ಧದ ಫೋಕ್ಸೋ ಪ್ರಕರಣ ರದ್ದುಗೊಳಿಸಬೇಕೆಂದು ಆಗ್ರಹಿಸಿದ್ದರು.

Shwetha M

Leave a Reply

Your email address will not be published. Required fields are marked *