ಯುದ್ಧದ ಎಫೆಕ್ಟ್‌ನಿಂದಾಗಿ ಕಮರ್ಷಿಯಲ್ ಸಿಲಿಂಡರ್ ಅಭಾವ – ರೆಸ್ಟೋರೆಂಟ್‌ಗಳು ಬಂದ್‌

ಯುದ್ಧದ ಎಫೆಕ್ಟ್‌ನಿಂದಾಗಿ ಕಮರ್ಷಿಯಲ್ ಸಿಲಿಂಡರ್ ಅಭಾವ – ರೆಸ್ಟೋರೆಂಟ್‌ಗಳು ಬಂದ್‌

ಇರಾನ್‌ ಹಾಗೂ ಇಸ್ರೇಲ್‌ ನಡುವಿನ ಯುದ್ದ ಕ್ಷಣ ಕ್ಷಣಕ್ಕೂ ತೀವ್ರಗೊಳ್ಳುತ್ತಿದೆ. ಇದೀಗ ಯುದ್ಧದ ಎಫೆಕ್ಟ್‌ನಿಂದಾಗಿ ದೇಶದಲ್ಲಿ ಅಡುಗೆ ಅನಿಲ ಸಿಲಿಂಡರ್‌ ಬೆಲೆ ಹೆಚ್ಚಳವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕ ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್‌ ಮತ್ತು ಗೃಹ ಬಳಕೆಯ ಎಲ್‌ಪಿಜಿ ಸರಬರಾಜಿನ ಮೇಲೆ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಅಭಾವ ತಲೆದೋರಿದೆ. ತಮಿಳುನಾಡಲ್ಲಿ ಗ್ಯಾಸ್‌ ಅಭಾವದಿಂದ ರೆಸ್ಟೋರೆಂಟ್‌ಗಳು ಬಂದ್‌ ಮಾಡೋ ಪರಿಸ್ಥಿತಿ ಬಂದಿದೆ ಎಂದು ಮಾಲೀಕರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಸಿಲಿಕಾನ್‌ ಸಿಟಿ ಮಂದಿಗೆ ಗುಡ್‌ನ್ಯೂಸ್!‌ – ಇನ್ಮುಂದೆ ರಾತ್ರಿಯೂ ಬರಲಿದೆ ಕಸದ ಗಾಡಿಗಳು!

ಈ ಬಗ್ಗೆ ಚೆನ್ನೈ ಹೋಟೆಲ್ ಅಸೋಸಿಯೇಷನ್ ತಮಿಳುನಾಡು ಸಿಎಂಗೆ ಪತ್ರ ಬರೆದು ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಸಿಲಿಂಡರ್ ಸಿಗದೆ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ವಿತರಕರು ಸಿಲಿಂಡರ್ ಪೂರೈಕೆ ಸಂಪೂರ್ಣ ಸ್ಥಗಿತ ಮಾಡಿದ್ದಾರೆ. ನೋ ಸ್ಟಾಕ್ ಎಂದು ಹೇಳುತ್ತಿದ್ದಾರೆ.ಬಹುತೇಕ ರೆಸ್ಟೋರೆಂಟ್ ಬಂದ್ ಮಾಡುವ ಪರಿಸ್ಥಿತಿ ಬಂದಿದೆ ಎಂದು ಪತ್ರದಲ್ಲಿ ಅಳಲು ತೋಡಿಕೊಂಡಿದ್ದಾರೆ.

ಸಮರ್ಪಕ ಕಮರ್ಷಿಯಲ್ ಸಿಲಿಂಡರ್ ಪೂರೈಕೆಗೆ ಕ್ರಮವಹಿಸಿ. ಸರ್ಕಾರ ಕೂಡಲೇ ಸಮಸ್ಯೆ ಈಡೇರಿಸಬೇಕು ಎಂದು ಚೆನ್ನೈ ಹೋಟೆಲ್ ಅಸೋಸಿಯೇಷನ್ ಸರ್ಕಾರಕ್ಕೆ ಮನವಿ ಮಾಡಿದೆ.

Shwetha M