ಯುದ್ಧಎಫೆಕ್ಟ್ – ಪೆಟ್ರೋಲಿಯಂ ಸಚಿವರು ಮತ್ತು ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

ಯುದ್ಧಎಫೆಕ್ಟ್ – ಪೆಟ್ರೋಲಿಯಂ ಸಚಿವರು ಮತ್ತು ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

ಇರಾನ್ ಯುದ್ಧದಿಂದ ತೈಲ ಮತ್ತು ಅನಿಲ ಪೂರೈಕೆಯಲ್ಲಿ ವ್ಯತ್ಯಯ ಆಗಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಪರಿಸ್ಥಿತಿ ಅವಲೋಕಿಸಲು, ಅದರಲ್ಲೂ ಎಲ್​ಪಿಜಿ ಸರಬರಾಜು ಸ್ಥಿತಿ ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಇಂದು  ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಜೊತೆ ಸಭೆ ನಡೆಸಿದರು. ಭಾರತದಲ್ಲಿ ಎಲ್​ಪಿಜಿ ಸರಬರಾಜು ಸರಿಯಾದ ರೀತಿಯಲ್ಲಿ ಇರುವುದನ್ನು ಖಾತ್ರಿಪಡಿಸಲು ಸರ್ಕಾರ ಸಾಧ್ಯವಾದ ಕ್ರಮಗಳನ್ನು ಕೈಗೊಳ್ಳುತ್ತಿದೆ.

ದೇಶೀಯ ಇಂಧನ ಮಾರುಕಟ್ಟೆಯನ್ನು ರಕ್ಷಿಸಲು ಸರ್ಕಾರ ಇಂದು ಅಗತ್ಯ ಸರಕುಗಳ ಕಾಯ್ದೆಯನ್ನು ಸಕ್ರಿಯಗೊಳಿಸಿದೆ. ಎಲ್​ಪಿಜಿ ಉತ್ಪಾದನೆ ಹೆಚ್ಚಿಸಲು ಹಾಗೂ ಹೈಡ್ರೋಕಾರ್ಬನ್​ಗಳನ್ನು ಎಲ್​ಪಿಜಿ ಸಂಗ್ರಹಕ್ಕೆ ಸೇರಿಸುವಂತೆ ದೇಶದಲ್ಲಿರುವ ರಿಫೈನರಿಗಳು ಹಾಗೂ ಪೆಟ್ರೋಕೆಮಿಕನ್ ಘಟಕಗಳಿಗೆ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಮಗಳ ಮದುವೆ ಮಾಡಿಸಲು ಆಗಿಲ್ಲ ಎಂದು ಆತ್ಮಹ*ತ್ಯೆಗೆ ಶರಣಾದ ತಂದೆ! – ಅಪ್ಪನ ಸಾವಿನ ಬೆನ್ನಲ್ಲೇ ಮಗಳು ದುರಂತ ಅಂತ್ಯ!

ಎಲ್​ಪಿಜಿ ಸರಬರಾಜು ಕುಂಠಿತವಾಗದಂತೆ ಎಚ್ಚರವಹಿಸಲು ನೈಸರ್ಗಿಕ ಅನಿಲವನ್ನು ಸಮರ್ಪಕವಾಗಿ ಬಳಸುವಂತಹ ವ್ಯವಸ್ಥೆಯನ್ನು ಎಸೆನ್ಷಿಯಲ್ ಕಮಾಡಿಟೀಸ್ ಆ್ಯಕ್ಟ್ ಮೂಲಕ ಮಾಡಲಾಗುತ್ತಿದೆ. ಪರಿಷ್ಕೃತ ಮಾರ್ಗಸೂಚಿ ಪ್ರಕಾರ ಗೃಹಬಳಕೆಯ ಪಿಎನ್​ಜಿ (ಕೊಳವೆ ಅನಿಲ) ಮತ್ತು ವಾಹನ ಬಳಕೆಯ ಸಿಎನ್​ಜಿ ಅನಿಲಗಳ ಸರಬರಾಜು ನೂರಕ್ಕೆ ನೂರು ಖಚಿತಪಡಿಸಿಕೊಳ್ಳಬೇಕಾಗುತ್ತದೆ. ಇತರ ಸರಕುಗಳಾದರೆ ಕಳೆದ ಆರು ತಿಂಗಳ ಸರಾಸರಿ ಬಳಕೆಯ ಆಧಾರದ ಮೇಲೆ ಸರಬರಾಜು ಮಿತಿ ಹಾಕಲಾಗುತ್ತದೆ.ಇಂಡಿಯನ್ ಆಯಿಲ್, ಹೆಚ್​ಪಿ, ಬಿಪಿ ಇತ್ಯಾದಿ ಒಎಂಸಿಗಳು ಎಲ್​ಪಿಜಿ ಉತ್ಪಾದನೆ ಪ್ರಮಾಣ ಹೆಚ್ಚಿಸಿವೆ.

‘ಜಾಗತಿಕ ರಾಜಕೀಯ ಪ್ರಕ್ಷುಬ್ದತೆಯಿಂದಾಗಿ ತೈಲ ಮತ್ತು ಪೂರೈಕೆಯಲ್ಲಿ ವ್ಯತ್ಯಯ ಆಗಿರುವ ಹಿನ್ನೆಲೆಯಲ್ಲಿ ದೇಶೀಯ ಗ್ರಾಹಕರಿಗೆ ಎಲ್​ಪಿಜಿ ಲಭ್ಯತೆಯನ್ನು ಖಚಿತಪಡಿಸಲು ಉತ್ಪಾದನೆ ಹೆಚ್ಚಳಕ್ಕೆ ಸರ್ಕಾರ ಕ್ರಮ ತೆಗೆದುಕೊಂಡಿದೆ’ ಎಂದು ತೈಲ ಮಾರುಕಟ್ಟೆ ಕಂಪನಿಗಳು ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.

Kishor KV

Leave a Reply

Your email address will not be published. Required fields are marked *